ಸೋಂಕು ತಡೆಗೆ ಮುಂಜಾಗ್ರತಾ ಕ್ರಮ ವಹಿಸಿ
Team Udayavani, Oct 18, 2020, 1:49 PM IST
ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ವಾರ್ತಾ ಇಲಾಖೆ ಆಶ್ರಯದಲ್ಲಿ ಶನಿವಾರ ನಡೆದ ಕೋವಿಡ್ ಜಾಗೃತಿ ಜಾಥಾ ಅಭಿಯಾನಕ್ಕೆ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ದೇವಿಂದ್ರಪ್ಪ ಬಿರಾದಾರ ಚಾಲನೆ ನೀಡಿದರು.
ನೂತನ ನ್ಯಾಯಾಲಯ ಆವರಣದಲ್ಲಿ ಕೋವಿಡ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಯಾ, ವಾಚಾ, ಮನಸ್ಸಿನಿಂದ ಮಹಾಮಾರಿ ಕೋವಿಡ್ ತಡೆಗಟ್ಟಲು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದರು. ಜನರು ಮಾಸ್ಕ್, ಸ್ಯಾನಿಟೈಸರ್ ಬಳಕೆ ಅಥವಾ ಸಾಬೂನಿನಿಂದ ಕೈತೊಳೆಯುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೋಗ ಹೊಡೆದೋಡಿಸಬೇಕೆಂದರು.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧಿಧೀಶ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ನಾಗರಾಜ ಎ.ಕೆ ಮಾತನಾಡಿ, ನ್ಯಾಯಾಲಯಕ್ಕೆ ಬರುವ ನ್ಯಾಯಾ ಧೀಶರು, ಜನಸಾಮಾನ್ಯರು, ಕಸ್ಟಡಿದಾರರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸ ರ್ ಬಳಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದರು.
ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಅಶೋಕಬಳಿಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ವಿಶ್ವದಾದ್ಯಂತ ಹರುಡುತ್ತಿರುವ ಕೊರೊನಾದಿಂದ ನಾವು ಮುಂಜಾಗ್ರತೆ ಕೈಗೊಳ್ಳುವುದು ಅವಶ್ಯ ಎಂದರು. ಡಾ| ಶ್ರೀಕಾಂತ ಮಾಯಣ್ಣವರ ಕೋವಿಡ್ ಕುರಿತಾದ ಮುಂಜಾಗ್ರತಾ ಕ್ರಮ ಹಾಗೂ ರೋಗ ತಡೆಯಲು ವೈದ್ಯಕೀಯ ಉಪಚಾರ ಕುರಿತು ಹೇಳಿದರು.
ಜಿಲ್ಲಾ ನ್ಯಾಯಾಧೀಶ ಔದ್ಯಮಿಕ ನ್ಯಾಯಾಧಿಕರಣ ಅಧ್ಯಕ್ಷ ಜಿ.ಎ.ಮೂಲಿಮನಿ, ಜಿಲ್ಲಾ ಹಾಗೂ ಪ್ರಧಾನ ಮತ್ತು ಕೌಟುಂಬಿಕ ನ್ಯಾಯಾಲಯ ನ್ಯಾಯಾಧೀಶರಾದ ಸುಮಂಗಲಾ ಎಸ್.ಬಸವಣ್ಣೂರ, 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಗಂಗಾಧರ ಕೆ.ಎನ್.ಪ್ರಭಾರ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಮಾದೇಶ ವಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ, ವಾರ್ತಾ ಇಲಾಖೆ ಅಧೀಕ್ಷಕ ವಿನೋದಕುಮಾರ ಸೇರಿದಂತೆ ಆಶಾ ಕಾರ್ಯಕರ್ತೆಯರು ಜಾಥಾ ಪಾಲ್ಗೊಂಡಿದ್ದರು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಿ :
ಕಲಘಟಗಿ: ಕೋವಿಡ್ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ವೈರಸ್‌ಹರಡದಂತೆ ತಡೆಗಟ್ಟಲು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂಥ ಆಹಾರ ಉಪಯೋಗಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾ ಧೀಶೆ ಜಿ.ಕೆ.ದಾಕ್ಷಾಯಿಣಿ ಕರೆ ನೀಡಿದರು.
ಕೋವಿಡ್ ವೈರಸ್ ಹರಡುವುದನ್ನು ತಡೆಗಟ್ಟಲು ಜನಾಂದೋಲನಕಾರ್ಯಕ್ರಮದ ಅರಿವು ಮೂಡಿಸುವ ಪ್ರಚಾರಾಂದೋಲನ ವಾಹನಕ್ಕೆ ನ್ಯಾಯಾಲಯದ ಆವರಣದಲ್ಲಿ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರವು ಉತ್ತಮ ಚಿಕಿತ್ಸೆ ಹಾಗೂ
ಔಷಧೋಪಚಾರವನ್ನು ಒದಗಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮುಖಗವಸುಧರಿಸುವುದರೊಂದಿಗೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದರು.
ಸಿವಿಲ್ ನ್ಯಾಯಾಧಿಧೀಶ ರಾಜಶೇಖರ ತಿಳಗಂಜಿ ಮಾತನಾಡಿ, ಕೋವಿಡ್ ಹರಡದಂತೆ ತಡೆಗಟ್ಟಲು ಚಿಕಿತ್ಸೆಗೋಸ್ಕರ ಆಸ್ಪತ್ರೆ, ನಿಗದಿತ ಪ್ರತ್ಯೇಕಿಸಿದ ಸ್ಥಳ ಇಲ್ಲವೇ ಮನೆಗಳಲ್ಲಿ ಪ್ರತ್ಯೇಕಿಸಿದಾಗ ದೈಹಿಕಆರೋಗ್ಯ ಜತೆಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಯಾವುದೇಸಂದರ್ಭದಲ್ಲಿ ಖನ್ನತೆ, ಆತಂಕ ಹಾಗೂ ಒತ್ತಡಕ್ಕೊಳಗಾಗದೇ ಆತ್ಮ ಬಲ ಹೆಚ್ಚಿಸಿಕೊಳ್ಳಲು ಸಾರ್ವಜನಿಕರು ಮುಂದಾಗಬೇಕೆಂದರು. ನಂತರ ಪ್ರತಿಜ್ಞಾ ವಿಧಿ ಬೋಧಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ,ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅಭಿಯೋಜನಾಇಲಾಖೆ, ಪಪಂ ಹಾಗೂ ತಾಲೂಕು ವಕೀಲರ ಸಂಘದ ಸಂಯುಕ್ತಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಶಿವನಗೌಡ್ರ, ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಕಮಡೊಳ್ಳಿ, ಪಪಂ ಮುಖ್ಯಾಧಿಕಾರಿ ಬಿ. ಚಂದ್ರಶೇಖರ, ಆರೋಗ್ಯಾಧಿಕಾರಿ ಡಾ| ಕಳಸಣ್ಣವರ, ಹಿರಿಯ ನ್ಯಾಯವಾದಿಗಳಾದ ಎಸ್.ಜಿ. ಕುಲಕರ್ಣಿ, ಬಿ.ವಿ.ಪಾಟೀಲ, ಎಸ್. ಜೆ.ಸುಂಕದ, ಆರ್.ಎಸ್.ಉಡಪಿ, ಎಸ್ .ಟಿ.ತೆಗ್ಗಿಹಳ್ಳಿ, ಎಮ್.ಎಸ್.ಧನಿಗೊಂಡ,ಜಿ.ಬಿ.ನೇಕಾರ, ಕೆ.ಬಿಗುಡಿಹಾಳ, ಎಮ್.ಎಮ್.ಚಲವಾದಿ, ವಿ.ಆರ್. ಗಾಣಿಗೇರ, ವಾಸಂತಿ ಖಾನಾಪೂರ ಸ್ವಾಬ್ ಟೆಸ್ಟ್ ತಂಡದ ಮಂಜುಳಾ ಕಟ್ಟಿಮನಿ, ಕೆ.ದೊಡ್ಡಮ್ಮ, ಸದಾನಂದ, ಶೋಭಾ ಸಂತಬಾನವರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.