ಸಿಲಂಬಮ್ ಚಾಂಪಿಯನ್‌ಶಿಪ್‌ನಲ್ಲಿ ಮಿಂಚಿದ ಪ್ರತಿಭೆಗಳು
Team Udayavani, May 9, 2019, 11:41 AM IST
ಕಲಘಟಗಿ: ಕನ್ಯಾಕುಮಾರಿಯ ನಾಗರಕೊಯಿಲ್ನಲ್ಲಿ ಎ. 25ರಿಂದ 28ರವರೆಗೆ ಜರುಗಿದ ಏಶಿಯನ್ ಸಿಲಂಬಮ್ (ಡೊಣ್ಣೆವರಸೆ) ಚಾಂಪಿಯನ್‌ಶಿಪ್ ಸ್ಪರ್ಧೆಯ ಪುರುಷ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾದ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಕ್ರೀಡಾಪಟುಗಳು ಮಲೇಷ್ಯಾದಲ್ಲಿ ಜರುಗಲಿರುವ ಜಾಗತಿಕ ಸ್ಪರ್ಧೆಯಲ್ಲಿ ಭಾರತದ ಪರ ಸ್ಪರ್ಧಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಗಳಗಿ ಹುಲಕೊಪ್ಪ ಗ್ರಾಮದ ಶ್ರೀ ಶಿವರಾಜದೇವಿ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಬಸವರಾಜ ರಾಯಕೊಪ್ಪ, ಮಂಜುನಾಥ ತಂಬೂರ ಹಾಗೂ ಕಿರಣ ಗೊರ್ಲಹೊಸೂರ ದೈಹಿಕ ಶಿಕ್ಷಕ ರಾಜಶೇಖರ ಚವ್ಹಾಣ ಅವರ ಮಾರ್ಗದರ್ಶನದಲ್ಲಿ ಡೊಣ್ಣೆವರಸೆ ಕಲಿತು ಏಷ್ಯಾ ಮಟ್ಟದ ಸ್ಪರ್ಧೆಯಲ್ಲಿ ರನ್ನರ್ ಅಪ್ ಹಾಗೂ ಸೆಕೆಂಡ್ ರನ್ನರ್ ಅಪ್ ಆಗಿ ವಿಜೇತರಾಗಿದ್ದಾರೆ. ಸ್ಪರ್ಧೆಯಲ್ಲಿ ಭಾರತ, ಅಪ್ಗಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡಿವ್ಸ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ ಒಟ್ಟು 8 ದೇಶಗಳು ಭಾಗಿಯಾಗಿದ್ದವು.
ಅವಶ್ಯಕ ಸಾಮಗ್ರಿಗಳ ಪೂರೈಕೆ ಹಾಗೂ ತರಬೇತಿಯಿಂದ ವಂಚಿತಗೊಂಡಿರುವ ಈ ತ್ರಿವಳಿ ಸ್ಪರ್ಧಾಳುಗಳು ಬಡತನದ ಮಧ್ಯೆಯೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಪ್ರಸ್ತುತಪಡಿಸಿದ್ದಾರೆ. ಬಸವರಾಜ ರಾಯಕೊಪ್ಪ ಧಾರವಾಡದ ಜೆಎಸ್ಸೆಸ್ ಕಾಲೇಜಿನಲ್ಲಿ ಬಿಎ ಪ್ರಥಮ ವರ್ಷದಲ್ಲಿ ವ್ಯಾಸಂಗ, ಮಂಜುನಾಥ ತಂಬೂರ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದ ಎಲ್ಎಲ್ಬಿ ಪ್ರಥಮ ವರ್ಷದ ವಿದ್ಯಾರ್ಥಿ, ಕಿರಣ ಗೊರ್ಲಹೊಸೂರ ಶ್ರೀ ಶಿವರಾಜದೇವಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಅಭ್ಯಸಿಸುತ್ತಿದ್ದಾನೆ. ಈ ತ್ರಿವಳಿ ಯುವ ಕ್ರೀಡಾಪಟುಗಳು ಈಗಾಗಲೇ ಕಠಿಣ ಪರಿಶ್ರಮದೊಂದಿಗೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಹೆಚ್ಚಿನ ತರಬೇತಿಯನ್ನು ತಮಿಳುನಾಡಿನ ಶಂಕರ ಗಣೇಶರಲ್ಲಿ ಪಡೆಯುತ್ತಿದ್ದಾರೆ.
ದೌರ್ಬಲ್ಯ ಮೆಟ್ಟಿ ನಿಂತು ಸಿಕ್ಕ ಅವಕಾಶ ಸಮರ್ಪಕವಾಗಿ ಬಳಸಿಕೊಂಡು ಹುಟ್ಟೂರು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಬೇಕೆಂಬ ಛಲ ಈ ಮೂವರಲ್ಲಿಯೂ ಎದ್ದು ತೋರುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಎಲೆಮರೆ ಕಾಯಿಗಳಂತೆ ಅನೇಕ ಪ್ರತಿಭೆಗಳಿದ್ದು ಆರ್ಥಿಕ ದುರ್ಬಲತೆಯಿಂದ ಅವರ್ಯಾರೂ ಹೊರಹೊಮ್ಮುತ್ತಿಲ್ಲ. ಆರ್ಥಿಕ ನೆರವು ನೀಡುವ ದಾನಿಗಳು ಬಸವರಾಜ ರಾಯಕೊಪ್ಪ -8105653820, ಮಂಜುನಾಥ ತಂಬೂರ-9972194792 ಅವರನ್ನು ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.