ತಾಂಡಾ ಮಕ್ಕಳಿಗೆ ದೇವಾಲಯವೇ ಶಿಕ್ಷಣಾಲಯ!

Team Udayavani, May 27, 2018, 5:37 PM IST

27-may-25.jpg

ಸವದತ್ತಿ: ದೈವ ಕೃಪೆಗೆ ಪ್ರಾರ್ಥಿಸಿ ಜನಗುಡಿ-ಗುಂಡಾರ ಅಲೆಯುತ್ತಾರೆ. ಆದರೆ ಈ ಗ್ರಾಮದಲ್ಲಿ ಶಿಕ್ಷಕರು ಮತ್ತು ಮಕ್ಕಳು ಶೈಕ್ಷಣಿಕ ಚಟುವಟಿಕೆಗಳ ಆಯೋಜನೆಗಾಗಿ ಸರ್ಕಾರಿ ಕಟ್ಟಡದ ಜತೆಗೆ ಗುಡಿ-ಗುಂಡಾರ, ಸಮುದಾಯ ಭವನಕ್ಕೆ ಅಲೆಯುತ್ತಿದ್ದಾರೆ!

ತಾಲೂಕಿನ ಕಟಮಳ್ಳಿ ತಾಂಡಾದಲ್ಲಿ ಸುಮಾರ 50 ವರ್ಷದಷ್ಟು ಹಳೆಯದಾದ ಸರಕಾರಿ ಶಾಲೆಯು ಇದ್ದೂ ಇಲ್ಲದಂತಾಗಿದೆ. ಈ ಶಾಲೆ ಕೊಠಡಿಗಳ ಕೊರತೆಗೆ ನಲುಗಿ ಹೋಗಿದೆ. ಇಲ್ಲಿ 180ಕ್ಕೂ ಅಧಿಕ ವಿದ್ಯಾರ್ಥಿಗಳು 1-7ನೇ ತರಗತಿಯಲ್ಲಿ ಓದುತ್ತಿದ್ದಾರೆ. ಆದರೆ ಇರುವ ಕೊಠಡಿಗಳು ಕೇವಲ ಮೂರು. ಇಷ್ಟೇ ಜಾಗದಲ್ಲಿ ಮಕ್ಕಳಿಗೆ ಪಾಠ ಮಾಡಲಾಗದೇ ಇಕ್ಕಟ್ಟಿಗೆ ಸಿಲುಕಿರುವ ಶಿಕ್ಷಕರು ಗ್ರಾಮದಲ್ಲಿ ಇರುವ ಸಮುದಾಯ ಭವನ ಮಾತ್ರವಲ್ಲ, ದೇವಸ್ಥಾನದಲ್ಲೂ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.

ಗ್ರಾಮೀಣ ಮತ್ತು ಬುಡಕಟ್ಟು ಜನಾಂಗವೇ ಇಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೆಲೆಸಿದೆ. ಐದು ದಶಕಗಳ ಹಿಂದೆ ಸರ್ಕಾರ ಕಟ್ಟಡ ನಿರ್ಮಿಸಿದೆ. ಆದರೆ ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಷ್ಟು ಕೊಠಡಿಗಳಿಲ್ಲ. ಆಟವಾಡಲು ಮೈದಾನ ಇಲ್ಲ. ಇನ್ನೂ ಇರುವ ಕಟ್ಟಡದ ಮೇಲ್ಛಾವಣಿಯೂ ಹಾಳಾಗಿದ್ದು, ಮಕ್ಕಳು ಭಯದಲ್ಲೇ ಶಾಲೆಯಲ್ಲಿ ಇರುವ ಸ್ಥಿತಿ ಇದೆ. ಶಾಲೆಯಲ್ಲಿ ಮೇಲ್ಛಾವಣಿಯೂ ಇಲ್ಲ. ಶುದ್ಧ ಕುಡಿಯುವ ನೀರು, ಇದ್ದೂ ಇಲ್ಲದಂತಿರುವ ಪ್ರತ್ಯೇಕ ಶೌಚಗೃಹ, ಆಟದ ಮೈದಾನ ಮೊದಲಾದ ಸೌಲಭ್ಯಗಳು ಇಲ್ಲದ್ದರಿಂದ ಬೇರೆ ದಾರಿ ತೋಚದ ಪಾಲಕರು ಊರಲ್ಲಿರುವ ಶಾಲೆ ಬಿಡಿಸಿ ಬೇರೆ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುವ ಚಿಂತನೆ ನಡೆಸಿದ್ದಾರೆ. ಕೆಲವರು ಶಾಲೆ ಬಿಡಿಸಿ ಕೃಷಿ ಭೂಮಿಯ ಹಾದಿ ಹಿಡಿಸಿದ್ದಾರೆ.

ಈ ಶಾಲೆಯ ಸ್ಥಿತಿ ‘ಒಂದು ಮನೆ, ಮೂರು ಬಾಗಿಲಿನಂತಾಗಿದ್ದು’ ಶಿಕ್ಷಕರು ಸ್ಥಳಾವಕಾಶದ ಕೊರತೆಯಿಂದ ಬಳಲಿ ಬೆಂಡಾಗಿ ಹೋಗಿದ್ದಾರೆ. ಈಗ ರಜೆಯ ಅವ ಧಿಯಲ್ಲಾದರೂ ಕಟ್ಟಡದ ಕೊರತೆ ನೀಗಬಹುದೆಂಬ ಗ್ರಾಮಸ್ಥರ ಆಶಯಕ್ಕೂ ಪೆಟ್ಟು ಬಿದ್ದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಇತ್ತ ಗಮನಹರಿಸಿ ಗ್ರಾಮದ ಶಾಲೆಗೆ ಅಗತ್ಯ ಸೌಕರ್ಯ ಕಲ್ಪಿಸಲು ಮುಂದಾಗಬೇಕಾಗಿದೆ.

ವಿಶೇಷವೆಂದರೆ ಈ ಶಾಲೆಯಲ್ಲಿ ದೈಹಿಕ ಶಿಕ್ಷಕರಿಲ್ಲ. ಆಟದ ಮೈದಾನವೂ ಇಲ್ಲ. ಆದರೂ, ಸ್ಥಳೀಯ ಯುವಕರ ಮಾರ್ಗದರ್ಶನದಿಂದ ಶಾಲೆಯ ಮಕ್ಕಳು ಕಬಡ್ಡಿ ಮತ್ತು ಇತರ ಕ್ರೀಡೆಗಳಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾಮಟ್ಟದವರೆಗೂ ಹೋಗಿ ಬೆರಗು ಮೂಡಿಸಿದ್ದಾರೆ. ಸೌಲಭ್ಯಗಳ ಕೊರತೆಯಿಂದ ಹೆಚ್ಚಿನ ಅವಕಾಶದಿಂದ ದೂರವುಳಿಯುತ್ತಿದ್ದಾರೆ.

ನಾನು ಕ್ಷೇತ್ರ ಶಿಕ್ಷಣಾ ಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಕೆಲವೇ ದಿನಗಳಾಗಿವೆ. ಶಾಲೆಗೆ ಸಂಬಂಧಪಟ್ಟ ಕಡತಗಳನ್ನು ತರಿಸಿ ಅ ಧಿಕಾರಗಳ ಜೊತೆ ಖುದ್ದು ಚರ್ಚಿಸಿ ಶಾಲೆಗೆ ಬೇಕಾದ ಮೂಲಸೌಕರ್ಯಗಳನ್ನು ಶೀಘ್ರ ಒದಗಿಸುವ ಕಾರ್ಯ ಮಾಡಲಾಗುತ್ತದೆ.
ಮಂಗಳಾ ತಾಪಸ್ಕರ್‌, ಬಿಇಒ ಸವದತ್ತಿ

ಪ್ರಧಾನ ಗುರುಗಳು ಈ ಬಗ್ಗೆ ಅಸಡ್ಡೆ ಭಾವನೆ ತೋರುತ್ತಿದ್ದಾರೆ. ಹಲವು ಬಾರಿ ಮೇಲಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿ ವರ್ಗ ಸಮಯ ವ್ಯರ್ಥ ಮಾಡುತ್ತಿದ್ದಾರೆಯೇ ಹೊರತು ಯಾವ ಕಾರ್ಯಗಳು ನಡೆಸುತ್ತಿಲ್ಲ. ಕೂಡಲೇ ಶಾಲೆಗೆ ಬೇಕಾಗಿರುವ ಮೂಲ ಸೌಲಭ್ಯಗಳ ಕುರಿತು ಮೇಲಧಿ ಕಾರಿಗಳು ಕ್ರಮ ಕೈಗೊಳ್ಳಬೇಕು.
ಮಹಾಂತೇಶ ಲಮಾಣಿ, ಎಸ್‌ಡಿಎಂಸಿ ಅಧ್ಯಕ್ಷ

ಶಾಲೆಗೆ ನಾಲ್ಕಾರು ಬಾರಿ ಭೇಟಿ ನೀಡಿದ್ದೇವೆ. ಈ ಕುರಿತು ಗ್ರಾಪಂ ಹಾಗೂ ಎಸ್‌ಡಿಎಂಸಿ ಸದಸ್ಯರ ಜೊತೆಗೆ ಚರ್ಚೆ ನಡೆಸಿ ಮೂಲ ಸೌಕರ್ಯ ಕಲ್ಪಿಸುವ ಕುರಿತು ಟಿಡಿಪಿ ಸಭೆಯಲ್ಲಿ ಎರಡ್ಮೂರು ಬಾರಿ ಚರ್ಚೆ ನಡೆಸಲಾಗಿದೆ. ಸದ್ಯದಲ್ಲಿಯೇ ಅಗತ್ಯ ಕ್ರಮ ಜರುಗಿಸಲು ಕೋರಲಾಗಿದೆ. 
ಎಂ.ಎಸ್‌. ಹೀರೆಕುಂಬಿ, ಜಿಪಂ ಸದಸ್ಯರು

ಡಿ.ಎಸ್‌. ಕೊಪ್ಪದ 

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.