1995ರ ಆದೇಶ ಬದಲಿಗೆ ಬದ್ಧ
ಎನ್‌ಇಪಿಯಿಂದ ಅನುದಾನಿತ ಸಂಸ್ಥೆಗಳು ಬಲಹೀನ: ಗುರಿಕಾರ
Team Udayavani, Jun 7, 2022, 1:02 PM IST
ಧಾರವಾಡ: ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಬಸವರಾಜ ಗುರಿಕಾರ ಅವರನ್ನು ಆರಿಸಿ ತರುವ ಮೂಲಕ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಬೇಕು ಎಂಬ ಚರ್ಚೆ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಳಿ ಬರುತ್ತಿದ್ದು, ಹೀಗಾಗಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ನಗರದ ಕೆ.ಇ.ಬೋರ್ಡ್ ಶಿಕ್ಷಣ ಸಂಸ್ಥೆಯಲ್ಲಿ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರ ಹಮ್ಮಿಕೊಂಡಿದ್ದ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ತರಗತಿಯಲ್ಲಿ ಮಕ್ಕಳಿಗೆ ಏನು ಕಲಿಸಬೇಕು ಎಂಬುದನ್ನು ಸರ್ಕಾರ ನಿರ್ಧರಿಸಬಾರದು. ಆದರೆ ಆದರ್ಶ ನಾಗರಿಕರನ್ನಾಗಿ ಮಾಡಲು ಸರ್ಕಾರ ಸೂಕ್ತಅನುದಾನ ಒದಗಿಸಬೇಕು. ಎಳೆಯ ಮಕ್ಕಳನ್ನು ಪಕ್ಷದ ಸೇನಾನಿಗಳನ್ನಾಗಿ ಮಾಡಿ ಈಗಿನ ಸರ್ಕಾರ ಏನು ಮಾಡುತ್ತದೋ ತಿಳಿಯದು. ರಾಷ್ಟ್ರ, ನಾಡು, ಅಭಿವೃದ್ಧಿ ಹಾಗೂ ಮಕ್ಕಳ ಭವಿಷ್ಯ ಕುರಿತು ಚಿಂತಿಸಬೇಕಾದ ಸರ್ಕಾರ, ಕೇಸರಿಕರಣ ಕುರಿತು ಚಿಂತಿಸುವ ಅವಶ್ಯಕತೆಯಾದರೂ ಏನು? ಎಂದು ಪ್ರಶ್ನಿಸಿದರು.
50 ವರ್ಷಗಳ ರಾಜಕೀಯ ಜೀವನದಲ್ಲಿ ಎಂಟು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ ಅನುಭವ ನನ್ನದು. ಜತೆಗೆ ವಿರೋಧ ಪಕ್ಷದಲ್ಲೂ ಕೆಲಸ ಮಾಡಿದ್ದೇನೆ. ಆದರೆ ಎಂದಿಗೂ ಯಾವ ಸರ್ಕಾರ ಅಥವಾ ಮುಖ್ಯಮಂತ್ರಿಯೂ ಶಿಕ್ಷಣ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಿದ್ದನ್ನು ನೋಡಿಲ್ಲ. ಆದರೆ, ಈಗಿನ ಸರ್ಕಾರವು ಪವಿತ್ರ ಶಿಕ್ಷಣ ರಂಗದಲ್ಲಿ ಮಾಡುತ್ತಿರುವ ರಾಜಕೀಯ ಹಸ್ತಕ್ಷೇಪದಿಂದ ಯಾವ ಗಂಡಾಂತರ ಕಾದಿದೆ ಎನ್ನುವುದು ಅಂದಾಜು ಮಾಡಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ಒದಗಿಸಬೇಕಾದ ಕಾಲ ಸನ್ನಿಹಿತವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ತೊಂದರೆ ಇದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುದಾನಿತ ಸಂಸ್ಥೆಗಳು ರಾಜ್ಯದಲ್ಲಿ ಬಲಹೀನವಾಗಿದೆ. ಶಿಕ್ಷಕರ ಹೆಚ್ಚುವರಿ ನೆಪದಲ್ಲಿ ವರ್ಗಾವಣೆ ಮಾಡಲಾಗುತ್ತಿದೆ. 1995ರ ಆದೇಶದಲ್ಲಿ ಬದಲಾವಣೆ ಆಗಬೇಕಿದೆ. ಈಗಿನ ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ಖಂಡಿತಾ ಈ ಆದೇಶದಲ್ಲಿ ಬದಲಾವಣೆ ಮಾಡಲು ನಾನು ಬದ್ಧ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಮಾತನಾಡಿ, ಬಿಜೆಪಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ನೀಡಲ್ಲ ಎಂದೆಲ್ಲ ಹೇಳಿತ್ತು. ಆದರೀಗ ಏನು ಮಾಡಿದೆ ಎನ್ನುವುದು ತಿಳಿಯದಂತಾಘಿದೆ. ಅದಕ್ಕಾಗಿ ಮತದಾರ ಶಿಕ್ಷಕರೇ ಅವರಿಗೆ ಬುದ್ಧಿ ಕಲಿಸಬೇಕಿದೆ ಎಂದರು.
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಮಾತನಾಡಿ, ಸುಮಾರು 130 ಪಿಯು ಕಾಲೇಜುಗಳನ್ನು ಹಿಂದೆ ಆರಂಭಿಸಲಾಯಿತು. ಆದರೆ, ಅಲ್ಲಿ ಎಷ್ಟು ಶಿಕ್ಷಕರಿದ್ದಾರೆ ಎನ್ನುವುದನ್ನು ಇಂದಿಗೂ ನೋಡಿಲ್ಲ. ಅದೇ ರೀತಿ ಪ್ರಥಮ ದರ್ಜೆ ಪದವಿ ಕಾಲೇಜು ಆರಂಭಿಸಿದರೆ ಅವುಗಳಿಗೆ ಪ್ರಾಂಶುಪಾಲರು ಇಲ್ಲದಂತಾಗಿದೆ. ಇದೇ ರೀತಿಯಾದರೆ ಮುಂದಿನ ದಿನಗಳಲ್ಲಿ ಶಿಕ್ಷಕರ ಪರಿಸ್ಥಿತಿ ಹದಗೆಡುತ್ತದೆ. ಅದಕ್ಕಾಗಿ ಶಿಕ್ಷಕ ಮತದಾರರು ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ಮಾಡಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ, ಮುಖಂಡ ಇಸ್ಮಾಯಿಲ್ ತಮಟಗಾರ, ಸಂಸ್ಥೆ ಅಧ್ಯಕ್ಷ ಶ್ರೀಕಾಂತ ಪಾಟೀಲ, ಕಾರ್ಯದರ್ಶಿ ಡಿ.ಎಸ್.ರಾಜಪುರೋಹಿತ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.