3 ತಿಂಗಳಲ್ಲಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಸಿ.ಸಿ. ಪಾಟೀಲ ಭರವಸೆ
Team Udayavani, Dec 17, 2020, 3:27 PM IST
ಧಾರವಾಡ: ಶಿಕ್ಷಕರು ಹಾಗೂ ಶಿಕ್ಷಣರಂಗದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಕೋವಿಡ್ ಕಾರಣದಿಂದ ಶಿಕ್ಷಣ ಕೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳಿಂದ ಶಿಕ್ಷಕರೂ ಕೂಡ ಪರಿತಪಿಸುವಂತಾಗಿರುವುದು ಸರ್ಕಾರದ ಗಮನದಲ್ಲಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಿಕ್ಷಕರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಕೈಬಿಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಸ್ಥಳಕ್ಕೆ ಅವರು ಸರ್ಕಾರದ ಪರವಾಗಿ ಭೇಟಿ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶಕುಮಾರ್ ಅವರು ನೀಡಿರುವ ಪತ್ರವನ್ನು ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರಿಗೆ ಹಸ್ತಾಂತರಿಸಿದ ಸಚಿವ ಸಿ.ಸಿ.ಪಾಟೀಲ್ ಅವರು, ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವುದು. ಕಾಲ್ಪನಿಕ ವೇತನ ಅನುಷ್ಠಾನದಿಂದ ಆಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ತಯಾರಿಸಲಾಗುವುದು. ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆಗೆ ಕಠಿಣ ಸುತ್ತೋಲೆಯೊಂದಿಗೆ ವಿಚಕ್ಷಣಾ ವ್ಯವಸ್ಥೆ ಮತ್ತಿತರ ಕ್ರಮಗಳ ಬಗ್ಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯ ಮೂಲಕ ಭಾರತವನ್ನು ಬಲಗೊಳಿಸಲು ಬ್ರಿಟಿಷ್ ಕೌನ್ಸಿಲ್ ನೊಂದಿಗೆ ಒಪ್ಪಂದ
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿ, ಸಚಿವರು ಖುದ್ದಾಗಿ ಬಂದು ಮಾತನಾಡಿರುವುದು ಸಮಾಧಾನ ತಂದಿದೆ. ಸತ್ಯಾಗ್ರಹವನ್ನು ಸದ್ಯ ಮೊಟಕುಗೊಳಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಸೇರಿದಂತೆ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.