ರಾಹುಲ್ ಗಾಂಧಿ ಕರೆ ತಂದಿದ್ದ ವಿಮಾನದಲ್ಲಿ ತಾಂತ್ರಿಕ ದೋಷ
Team Udayavani, Apr 27, 2018, 6:40 AM IST
ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೆಹಲಿಯಿಂದ ಕರೆ ತಂದು ಹುಬ್ಬಳ್ಳಿಯಲ್ಲಿ ಇಳಿಸಿ ಖಾಲಿಯಾಗಿ ಹಿಂದಿರುಗುತ್ತಿದ್ದ ವಿಶೇಷ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಮಾನವನ್ನು ಹುಬ್ಬಳ್ಳಿ ನಿಲ್ದಾಣದಲ್ಲೇ ನಿಲ್ಲಿಸಲಾಗಿದೆ.
ರಾಹುಲ್ ಅವರು ಚುನಾವಣಾ ಪ್ರಚಾರಾರ್ಥ ಉತ್ತರ ಕನ್ನಡ ಜಿಲ್ಲೆ ಅಂಕೋಲಾಕ್ಕೆ ತೆರಳಲೆಂದು ಗುರುವಾರ ಬೆಳಿಗ್ಗೆ 11:00 ಗಂಟೆ ಸುಮಾರಿಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅನಂತರ, ಹೆಲಿಕಾಪ್ಟರ್ ಮೂಲಕ ಅಂಕೋಲಾಕ್ಕೆ ತೆರಳಿದ್ದರು. ರಾಹುಲ್ ಅವರನ್ನು ಕರೆ ತಂದಿದ್ದ ವಿಮಾನ ವಾಪಸ್ ದಿಲ್ಲಿಗೆ ತೆರಳಲು ಸಿದ್ಧವಾದಾಗ ಅದರಲ್ಲಿ ತಾಂತ್ರಿಕ ದೋಷ ಕಂಡು ಬಂತು.
ವಿಮಾನದ ಪೈಲಟ್ ತತ್ಕ್ಷಣ ಅದನ್ನು ಗಮನಿಸಿ ವಿಮಾನ ಹಾರಾಟ ಕೈಗೊಳ್ಳದೆ ನಿಲ್ಲಿಸಿದ್ದಾರೆ. ವಿಮಾನ ಕಂಪೆನಿಯ ತಾಂತ್ರಿಕ ಸಿಬ್ಬಂದಿ ಶುಕ್ರವಾರ ನಗರಕ್ಕೆ ಆಗಮಿಸಿ ತಾಂತ್ರಿಕ ದೋಷ ಪರಿಶೀಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.