ಕಮರಿಪೇಟೆ ಠಾಣೆ ತಾತ್ಕಾಲಿಕ ಸ್ಥಳಾಂತರ
Team Udayavani, Apr 20, 2020, 2:53 PM IST
ಹುಬ್ಬಳ್ಳಿ: ಇಲ್ಲಿನ ತೊರವಿ ಹಕ್ಕಲ ಬಳಿಯ ಕರಾದಿ ಓಣಿಯ ಸ್ಮಶಾನ ಕಾವಲುಗಾರನಿಗೆ ಕೋವಿಡ್ 19 ಸೋಂಕು ತಗುಲಿದ್ದರಿಂದ 100 ಮೀಟರ್ ವ್ಯಾಪ್ತಿ ಪ್ರದೇಶ ಸೀಲ್‌ಡೌನ್ ಆಗಿದ್ದರಿಂದ ಕಮರಿಪೇಟೆ ಪೊಲೀಸ್ ಠಾಣೆ ತಾತ್ಕಾಲಿಕವಾಗಿ ಸ್ಥಳಾಂತರವಾಗಿದೆ.
ಇಲ್ಲಿನ ಮುಲ್ಲಾ ಓಣಿಯಲ್ಲಿ ಒಂದೇ ಕುಟುಂಬದ ಐವರು ಕೋವಿಡ್-19 ಸೋಂಕು ಹೊಂದಿದ್ದು, ಇವರಲ್ಲಿನ ಓರ್ವರೊಂದಿಗೆ ಸ್ಮಶಾನ ಕಾವಲುಗಾರ ದ್ವಿತೀಯ ಸಂಪರ್ಕ ಹೊಂದಿದ್ದರಿಂದ ಅವರಲ್ಲೂ ಸೋಂಕು ಕಂಡು ಬಂದಿದೆ. ಹೀಗಾಗಿ ಕರಾದಿ ಓಣಿಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶ ಸೀಲ್ ಡೌನ್ ಆಗಿದ್ದು, ಇದರ ವ್ಯಾಪ್ತಿಯಲ್ಲಿ ಕಮರಿಪೇಟೆ ಪೊಲೀಸ್ ಠಾಣೆ ಬರುವ ಕಾರಣ ರವಿವಾರ ಮಧ್ಯಾಹ್ನವೇ ಈ ಠಾಣೆಯನ್ನು ಕಾರವಾರ ರಸ್ತೆಯ ಬಾಸೆಲ್ ಮಿಷನ್ ಮೇರಿ ಮೊಮೊರಿಯಲ್ ಚರ್ಚ್ ಬಳಿಯ ಹೆಬಿಕ್ ಪ್ರಾರ್ಥನಾ ಮಂದಿರಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದೆ.
ಈಗಾಗಲೇ ತಾತ್ಕಾಲಿಕ ಠಾಣೆಗೆ ಪೀಠೊಪಕರಣ, ಅಗತ್ಯ ದಾಖಲೆ ಪತ್ರಗಳನ್ನು ಸ್ಥಳಾಂತರಿಸುವ ಕಾರ್ಯ ನಡೆದಿದೆ. ಠಾಣೆಯ ಸಿಬ್ಬಂದಿ ಸಹಿತ ಇಲ್ಲಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.