ಜು. 15ರೊಳಗೆ ಟೆಂಡರ್‌ಶ್ಯೂರ್ ರಸ್ತೆ ಪೂರ್ಣ
•ಉದ್ಘಾಟನೆಗೆ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಆಹ್ವಾನ•ಗುಣಮಟ್ಟದೊಂದಿಗೆ ಮಾಡಿಕೊಂಡಿಲ್ಲ ರಾಜಿ
Team Udayavani, Jun 9, 2019, 9:26 AM IST
ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ ಶೆಟ್ಟರ ಹಾಗೂ ಸ್ವಾತಿ ರಾಮನಾಥನ್ ಟೆಂಡರ್‌ಶ್ಯೂರ್ ರಸ್ತೆ ಕಾಮಗಾರಿ ವೀಕ್ಷಿಸಿದರು.
ಹುಬ್ಬಳ್ಳಿ: ಮಹಾನಗರಕ್ಕೆ ಮಾದರಿಯಾಗಿರುವ ಟೆಂಡರ್‌ಶ್ಯೂರ್ ರಸ್ತೆ ಕಾಮಗಾರಿ ಬಹುತೇಕ ಅಂತಿಮ ಹಂತ ತಲುಪಿದ್ದು, ಜು. 15ರೊಳಗೆ ಪೂರ್ಣಗೊಳ್ಳುವ ಭರವಸೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.
ಜನಾ ಅರ್ಬನ್ ಸ್ಪೇಸ್ ಫೌಂಡೇಶನ್ ವ್ಯವಸ್ಥಾಪಕಿ ಸ್ವಾತಿ ರಾಮನಾಥನ್ ಅವರೊಂದಿಗೆ ಶನಿವಾರ ಇಲ್ಲಿನ ಶ್ರೀ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನ ಕರೆಯವರೆಗೆ ನಿರ್ಮಾಣವಾಗುತ್ತಿರುವ ಟೆಂಡರ್‌ಶ್ಯೂರ್ ರಸ್ತೆ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜು. 15ರೊಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ. ಈ ಭಾಗದಲ್ಲಿ ಇದು ಮಾದರಿ ಹಾಗೂ ಸುಸಜ್ಜಿತ ರಸ್ತೆಯಾಗಿರುವುದರಿಂದ ಉದ್ಘಾಟನೆ ಕಾರ್ಯಕ್ರಮಕ್ಕೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಒತ್ತುವರಿ ತೆರವು ಕಾರ್ಯಾಚರಣೆ, ವಿವಿಧ ಇಲಾಖೆ ಕೆಲಸ ಕಾರ್ಯಗಳ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ನಿಗದಿತ ಸಮಯದೊಳಗೆ ಎಲ್ಲವೂ ಕೈಗೊಂಡಿದ್ದರೆ, ಫೆಬ್ರವರಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತಿತ್ತು. ಒಂದಿಷ್ಟು ವಿಳಂಬವಾಗಿದೆ ಎನ್ನುವುದು ಬಿಟ್ಟರೆ ನಮ್ಮ ನಿರೀಕ್ಷೆಯಂತೆ ಕಾಮಗಾರಿ ನಡೆದಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ರಸ್ತೆಗಿಂತ ಇಲ್ಲಿ ಉತ್ತಮವಾಗಿ ನಿರ್ಮಿಸಲಾಗುತ್ತಿದೆ ಎಂದರು.
ಜನಾ ಅರ್ಬನ್ ಸ್ಪೇಸ್ ಪ್ರತಿಷ್ಠಾನ ವ್ಯವಸ್ಥಾಪಕಿ ಸ್ವಾತಿ ರಾಮನಾಥನ್ ಮಾತನಾಡಿ, ಪಾದಚಾರಿ ಮಾರ್ಗ, ವಿವಿಧ ಇಲಾಖೆ ಭೂಗತ ಕೇಬಲ್ಗಳ ಪ್ರತ್ಯೇಕ ಮಾರ್ಗ, ಬೈಸಿಕಲ್ ಸವಾರರಿಗೆ ಪ್ರತ್ಯೇಕ ಮಾರ್ಗ ಸೇರಿದಂತೆ ಹಲವು ಸೌಲಭ್ಯಗಳಿರುವ ಮಾದರಿ ರಸ್ತ್ತೆಯಾಗಿದ್ದು, ಇಲ್ಲಿ ಲಭ್ಯವಿರುವ ಜಾಗಕ್ಕೆ ತಕ್ಕಂತೆ ವಿನ್ಯಾಸ ಮಾಡಿದ್ದು, ಸ್ಥಳದ ಕೊರತೆಯಿಂದ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಮುಂದಿನ ಆರು ವಾರಗಳಲ್ಲಿ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಸಾರ್ವಜನಿಕರು ಈ ರಸ್ತೆಯನ್ನು ಜವಾಬ್ದಾರಿಯಿಂದ ಬಳಸಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಇ ಎನ್.ಎಂ. ಕುಲಕರ್ಣಿ, ಎಚ್.ಎಂ. ಕೃಷ್ಣಾರಡ್ಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.