ಉಗ್ರ ದಾಳಿ ಭೀತಿ: ಅವಳಿ ನಗರದಲ್ಲೂ ಕಟ್ಟೆಚ್ಚರ
Team Udayavani, Aug 17, 2019, 9:58 AM IST
ಹುಬ್ಬಳ್ಳಿ: ಪಾಕಿಸ್ತಾನದ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಪ್ರಮುಖ ನಗರಗಳ ಮೇಲೂ ದಾಳಿ ಮಾಡಬಹುದು ಎಂಬ ಗುಪ್ತಚರ ಮಾಹಿತಿ ಮೇರೆಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಾಶ್ಮೀರದ ವಿಷಯವಾಗಿ ಪಾಕಿಸ್ತಾನದ ಉಗ್ರರು ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಮಾಡಿದ್ದ ಆತ್ಮಾಹುತಿ ದಾಳಿ ರೀತಿಯಲ್ಲೇ ಮತ್ತೆ ದಾಳಿಗಳನ್ನು ಮಾಡುವ ಸಾಧ್ಯತೆಗಳಿವೆ. ಆ ನಿಟ್ಟಿನಲ್ಲಿ ಸಂಚು ರೂಪಿಸಿದ್ದಾರೆ. ಈಗಾಗಲೇ ರಾಜ್ಯಕ್ಕೂ ಕೆಲ ಭಯೋತ್ಪಾದಕರು ನುಸುಳಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಜ್ಯದ ಬಹುತೇಕ ಪ್ರಮುಖ ನಗರ ಹಾಗೂ ಪ್ರಮುಖ ಕಟ್ಟಡ, ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರು ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಿಸುತ್ತಿದ್ದಾರೆ. ಸಂಶಯ ಕಂಡುಬಂದವರ ಮೇಲೆ ತೀವ್ರ ನಿಗಾವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಗರದಾದ್ಯಂತ ಕಟ್ಟೆಚ್ಚರ: ಹು-ಧಾ ಪೊಲೀಸ್ ಆಯುಕ್ತರು ನಗರದಾದ್ಯಂತ ಕಟ್ಟೆಚ್ಚರ ಘೋಷಿಸಿದ್ದಾರೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ಸ್ಟ್ಯಾಂಡ್, ಮಾಲ್ಗಳು, ಜನನಿಬಿಡ ಪ್ರದೇಶ ಸೇರಿದಂತೆ ಆಯಕಟ್ಟಿನ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತಾ ಪಡೆ ನಿಯೋಜಿಸಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ‘ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.