ಶೆರೆವಾಡ ಡಿಜಿಟಲ್‌ ಗ್ರಾಮ ಘೋಷಣೆ

Team Udayavani, Jan 6, 2017, 12:44 PM IST

hub2.jpg

ಹುಬ್ಬಳ್ಳಿ: ತಾಲೂಕಿನ ಶೆರೆವಾಡ ಗ್ರಾಮವನ್ನು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ನಿಂದ ಉತ್ತರ ಕರ್ನಾಟಕ ಮೊದಲ ಡಿಜಿಟಲ್‌ ಗ್ರಾಮವನ್ನಾಗಿ ಘೋಷಣೆ ಮಾಡಲಾಯಿತು.

 ಡಿಜಿಟಲ್‌ ಗ್ರಾಮದ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಅಧ್ಯಕ್ಷ ರವಿಚಂದ್ರ, ಇಂದು ತಂತ್ರಜ್ಞಾನದ ಬಳಕೆಯಿಂದ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕ್ರಾಂತಿಕಾರ ಬದಲಾವಣೆಗಳು ಆಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು. 

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಪ್ರಥಮ ಹಂತದಲ್ಲಿ ಧಾರವಾಡ ಜಿಲ್ಲೆಯಲ್ಲಿ 9 ಹಳ್ಳಿಗಳನ್ನು ಡಿಜಿಟಲ್‌ ಹಳ್ಳಿಗಳನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಹಳ್ಳಿಗಳಲ್ಲಿ ಎಟಿಎಂ ಮೊಬೈಲ್‌ ಬ್ಯಾಂಕಿಂಗ್‌ ಪರಿಚಯಿಸುವುದರ ಮೂಲಕ ನಗದು ರಹಿತ ವ್ಯವಹಾರ ಹಾಗೂ ಶೀಘ್ರ ರೀತಿ ವ್ಯವಹಾರ ನಡೆಸಲು ಅನುವು ಮಾಡಿಕೊಡುತ್ತಿದೆ.

ಶೆರೆವಾಡ ಗ್ರಾಮದಲ್ಲಿ 4415 ಜನಸಂಖ್ಯೆ ಇದ್ದು, ಇದರಲ್ಲಿ 4003 ಜನ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ನಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಇದರಲ್ಲಿ 3964 ಜನರ ಖಾತೆಗಳನ್ನು ಆಧಾರ್‌ದೊಂದಿಗೆ ಜೋಡಣೆ ಮಾಡಲಾಗಿದೆ. 3803 ರುಪೆ ಕಾರ್ಡ್‌, 25 ಕಿಸಾನ್‌ ಕಾರ್ಡ್‌ ಖಾತೆದಾರರಿಗೆ ನೀಡಲಾಗಿದೆ.

ಗ್ರಾಮೀಣ ಖಾತೆದಾರರು ತಮ್ಮ ಮೊಬೈಲ್‌ನಲ್ಲಿಯೇ ಖಾತೆಯಲ್ಲಿರುವ ಹಣದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಗ್ರಾಮದ ಆಯ್ದ ಮಳಿಗೆಗಳಲ್ಲಿ ಶೀಘ್ರದಲ್ಲಿ ಪಿಒಎಸ್‌ಗಳನ್ನು ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು. 

ಶೆರೆವಾಡ ಗ್ರಾಮವನ್ನು ಡಿಜಿಟಲ್‌ ಗ್ರಾಮವೆಂದು ಘೋಷಿಸಿ ಮಾತನಾಡಿದ ಸಿಂಡಿಕೇಟ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಶ್ರೀವಾಸ್ತವ ಅವರು, ಸಂಪೂರ್ಣ ನಗದು ರಹಿತ ವ್ಯವಹಾರವನ್ನು ಅಳವಡಿಸಿಕೊಳ್ಳುವುದರ ಮೂಲಕ ಶೆರೆವಾಡ ಗ್ರಾಮ ದೇಶದ ನಕ್ಷೆಯಲ್ಲಿ ಹೊಸ ರೀತಿಯಲ್ಲಿ ಗುರುತಿಸಲ್ಪಡುತ್ತಿದೆ ಎಂದರು.

ಇಂದು ಸ್ಮಾರ್ಟ್‌ ಫೋನ್‌ಗಳು, ಆಧಾರ್‌ ಜೋಡಣೆಯ ಬ್ಯಾಂಕ್‌ ಖಾತೆಗಳು, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳು ಹಾಗೂ ಮೈಕ್ರೋ ಎಟಿಎಂಗಳು ಗ್ರಾಹಕರಿಗೆ ಉಪಯುಕ್ತ ಹಾಗೂ ಬ್ಯಾಂಕಿಂಗ್‌ ವ್ಯವಹಾರಗಳನ್ನು ನಗದು ರಹಿತವಾಗಿ ಮಾಡುವಲ್ಲಿ ಸಹಾಯಕವಾಗಿವೆ ಎಂದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಸಚಿವ ಮಹದೇವ ಪ್ರಸಾದ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಹೊಳೆಯಪ್ಪ ಕುರಿ, ರಾಜ್ಯ ಎಸ್‌ಎಲ್‌ ಬಿಸಿ ಕನ್ವೇನರ್‌ ಮೋಹನ ರೆಡ್ಡಿ, ಸಿಂಡಿಕೇಟ್‌ ಬ್ಯಾಂಕ್‌ ಮಹಾಪ್ರಬಂಧಕ ಸತೀಶ ಕಾಮತ, ವಲಯ ವ್ಯವಸ್ಥಾಪಕ ಬಸವಯ್ಯ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಮಹಾಪ್ರಬಂಧಕ ಕೆ.ಸುಬ್ಟಾರಾವ್‌, ಬಾಲಕೃಷ್ಣ ದಾಸರಿ, ವಲಯ ವ್ಯವಸ್ಥಾಪಕ ಬಸವರಾಜ ಹೊಲಕಾರ ಸೇರಿದಂತೆ ಗ್ರಾಮದ ಜನರು ಇದ್ದರು.  

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.