![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 24, 2021, 11:18 PM IST
ಧಾರವಾಡ : ತಿಂಡಿ, ಹಣದ ಆಮಿಷವೊಡ್ಡಿ ದಡ್ಡಿ ಕಮಲಾಪೂರದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಶರಣಪ್ಪ ಫಕ್ಕೀರಪ್ಪ ತಳವಾರ (25) ಬಂಧಿತ ಆರೋಪಿ. ಈತ ಬಾಲಕಿಗೆ ಎಗ್ರೈಸ್, ಗೋಬಿ ಮಂಚೂರಿಯಂತಹ ತಿಂಡಿ ಹಾಗೂ ಹಣದ ಆಸೆ ತೋರಿಸಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದಲ್ಲದೇ ಹಣಕ್ಕಾಗಿ ಬಾಲಕಿ ಬಿಕ್ಷಾಟನೆ ತೊಡಗಿದ್ದ ಬಾಲಕಿಯ ಮೇಲೆ ದೌರ್ಜನ್ಯ ಎಸಗುವಾಗ ಸಿಕ್ಕು ಬಿದ್ದು, ಧರ್ಮದೇಟು ಸಿಕ್ಕಿತ್ತು.
ಈ ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲಕಿಯನ್ನು ಪತ್ತೆ ಹಚ್ಚಿ ಆಪ್ತ ಸಮಾಲೋಚನೆ ಕೈಗೊಂಡಾಗ, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆಗಿದ್ದು ಬೆಳಕಿಗೆ ಬಂದಿತ್ತು. ಈ ಕುರಿತಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ|ಕಮಲಾ ಬಲೂರ ಉಪನಗರ ಠಾಣೆಗೆ ದೂರು ನೀಡಿ, ಲೈಂಗಿಕ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ಈ ದೂರಿನ ಅನ್ವಯ ಉಪನಗರ ಠಾಣೆ ಪೊಲೀಸರು, ಮಾಹಿ ಕಲೆ ಹಾಕಿ ಗುರುವಾರವೇ ಅಣ್ಣಿಗೇರಿಯ ಹಳ್ಳಿಕೇರಿಗೆ ಭೇಟಿ ನೀಡಿ, ಯುವಕ ಶರಣಪ್ಪನನ್ನು ಬಂಧಿಸಿದ್ದಾರೆ. ಇದಲ್ಲದೇ ಆರೋಪಿಯ ವಿರುದ್ದ ಪೋಸ್ಕೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.