ಉತ್ತಮ ಬಾಂಧವ್ಯ ಹೊಂದಿದ್ದ ರಾಣೆ
Team Udayavani, Jul 24, 2017, 12:21 PM IST
ಹುಬ್ಬಳ್ಳಿ: ಎಲ್ಲ ಪಕ್ಷಗಳ ರಾಜಕಾರಣಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಅವರು ಅವಳಿ ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಹು-ಧಾ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಸೇವಾ ನಿವೃತ್ತಿ ಹೊಂದಲಿರುವುದರಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಶ°ರೇಟ್ ಗೋಕುಲ ಗಾರ್ಡನ್‌ನಲ್ಲಿ ರವಿವಾರ ಸಂಜೆ ಆಯೋಜಿಸಿದ್ದ ಸ್ನೇಹಕೂಟದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳಸಾ-ಬಂಡೂರಿ ಹೋರಾಟ ತೀವ್ರ ಗತಿಯಲ್ಲಿ ನಡೆಯಿತು.
ಹಲವೆಡೆ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಯಿತು. ಆದರೆ ಹುಬ್ಬಳ್ಳಿಯಲ್ಲಿ ಹೋರಾಟಗಳು ನಡೆದರೂ ಶಾಂತಿ ಕದಡದಂತೆ ಕ್ರಮ ಕೈಗೊಂಡರು ಎಂದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಹುಬ್ಬಳ್ಳಿ- ಧಾರವಾಡ ಕಮೀಶ°ರೇಟ್ ಆರಂಭಗೊಂಡ ನಂತರ ಮೊದಲ ಬಾರಿ ಒಬ್ಬ ಆಯುಕ್ತರು ಸೇವಾ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.
ಅವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವಳಿ ನಗರದಲ್ಲಿ ಇದೇ ಪರಂಪರೆ ಮುಂದುವರೆಯಬೇಕು. ಅಧಿಕಾರಿಗಳು ಅವರ ಮಾರ್ಗದರ್ಶನದಲ್ಲಿ ಸಾಗಬೇಕು. ಒಬ್ಬ ಅಧಿಕಾರಿ ಎಲ್ಲರ ಪ್ರೀತಿಗಳಿಸುವುದು ಕಷ್ಟಕರ. ಪಾಂಡುರಂಗ ರಾಣೆ ಅವಳಿ ನಗರದ ಎಲ್ಲ ಜನರ ಪ್ರೀತಿ ಗಳಿಸಿದರು.
ಇಂಥ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಬೇಕೆಂದರು. ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಅವಳಿ ನಗರದಲ್ಲಿ ಯಾವುದೇ ಕೋಮು ಗಲಭೆ ಘಟನೆ ನಡೆಯದಂತೆ ನೋಡಿಕೊಂಡ ಹಿರಿಮೆ ರಾಣೆ ಅವರಿಗೆ ಸಲ್ಲುತ್ತದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ವಿಧಾನ ಪರಿಷತ್ ಸದಸ್ಯ ಡಾ| ವಿಜಯ ಸಂಕೇಶ್ವರ, ಮಾಜಿ ಸಂಸದ ಐ.ಜಿ. ಸನದಿ, ಮೋಹನ ಲಿಂಬಿಕಾಯಿ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಸದಾನಂದ ಡಂಗನವರ, ಶಂಕ್ರಣ್ಣ ಮುನವಳ್ಳಿ, ರಮೇಶ ಪಾಟೀಲ, ಮೋತಿಲಾಲ್ ಕಬಾಡಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.