2018ರಲ್ಲಿ ಮತ್ತೆ ಬಿಜೆಪಿ ಸರ್ಕಾರ ಸ್ಥಾಪನೆ ಖಚಿತ
Team Udayavani, Oct 29, 2017, 12:37 PM IST
ಧಾರವಾಡ: ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಪಕ್ಷವು ಮತ್ತೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾ ವಿವಿಧ ಘಟಕಗಳ ನೇತೃತ್ವದಲ್ಲಿ ವಿವಿಧ ಮಹಿಳಾ ಮಂಡಳಗಳಿಗೆ ಶನಿವಾರ ಹಮ್ಮಿಕೊಂಡ ಕೇಂದ್ರ ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳ ಮಾಹಿತಿ ಕಾರ್ಯಾಗಾರಕ್ಕೆ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟದಲ್ಲಿ ಮತ್ತೆ ಬಿಜೆಪಿ ಪರ ಗಾಳಿ ಬೀಸುತ್ತಿದ್ದು, ಜನರ ಆರ್ಶೀರ್ವಾದ ದೊರಕಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದ ಅಮಿತ ಷಾ ಅವರ ನಿರೀಕ್ಷೆಯಂತೆ ಮತ್ತೆ ಬಿಜೆಪಿ ಪಕ್ಷಕ್ಕೆ ಬಹುಮತ ಸಿಗಲಿದೆ.
ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿ ನೀಡುವ ಮೂಲಕ ಪುರುಷರಷ್ಟೇ ಸಮಾನ ಸ್ಥಾನ ಕಲ್ಪಿಸಿದ ಹೆಗ್ಗಳಿಗೆ ಬಿಜೆಪಿ ಪಕ್ಷಕ್ಕೆ ಇದೆ. ಹೀಗಾಗಿ ಸ್ತ್ರೀಶಕ್ತಿ ಸಂಘ, ವಿವಿಧ ಮಹಿಳಾ ಸಂಘಟನೆಗಳು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಸಂಕಲ್ಪ ಮಾಡುವ ಮೂಲಕ ಸರಕಾರ ರಚನೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಿದ್ದು ದರೋಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗಲು ದರೋಡೆ ಮೂಲಕ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. ಬಡವರ ಹಣವನ್ನು ಸಮಾವೇಶದ ಮೂಲಕ ಪೋಲು ಮಾಡಲಾಗುತ್ತಿದೆ. ಭ್ರಷ್ಟ ಸರ್ಕಾರ ಕಿತ್ತೆಸೆದು ಬಿಜೆಪಿ ಅ ಧಿಕಾರಕ್ಕೆ ತರಲು ಮಹಿಳಾ ಮೋರ್ಚಾ ಕೇಂದ್ರದ ಯೋಜನೆಗಳನ್ನು ಗ್ರಾಮಗಳಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.
ಮಹಿಳಾ ಮೋರ್ಚಾದ ಮೂಲಕ ವಿವಿಧ ಸಂಘಟನೆಗಳಿಗೆ ಬಿಜೆಪಿ ಶಕ್ತಿ ತುಂಬುವ ಕೆಲಸ ಮಾಡಿದೆ. ಇದೀಗ ಮೋರ್ಚಾಗಳನ್ನು ಬಲವರ್ಧನೆಗೊಳಿಸಿ, ಕೇಂದ್ರದ ಯೋಜನೆಗಳನ್ನು ಹಾಗೂ ಬಿಜೆಪಿ ಸರ್ಕಾರದ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ಕೆಲಸ ಮಾಡಬೇಕು.
ಮಹಿಳೆಯರು ಬಿಜೆಪಿಗೆ ಸಹಕಾರ ನೀಡಬೇಕು ಎಂದರು. ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಭಾರತಿ ಶೆಟ್ಟಿ ಅವರು, ಕೇಂದ್ರ ಸರ್ಕಾರದ ಮಹಿಳಾ ಸಬಲೀಕರಣದ ಉಜ್ವಲಾ, ಮುದ್ರಾ, ಭೇಟಿ ಬಚಾವೋ, ಭೇಟಿ ಪಡಾವೋ, ಶೌಚಾಲಯ ಬಿಜೆಪಿ ಸರ್ಕಾರದ ಭಾಗ್ಯಲಕೀ, ಸೈಕಲ್ ವಿತರಣೆ ಇತ್ಯಾದಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಶಾಸಕಿ ಶಶಿಕಲಾ ಜೊಲ್ಲೆ ಅಧ್ಯಕ್ಷತೆ ವಹಿಸಿದ್ದರು. ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ, ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ, ಪೂರ್ಣಾ ಪಾಟೀಲ, ಮಂಜುಳಾ ಅಕ್ಕೂರ, ರೂಪಾ ಈರೇಶನವರ, ಅನಸೂಯಾ ಹಿರೇಮಠ, ಚಂದ್ರಕಲಾ ಚೌಧರಿ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.