ರಂಗ ತರಬೇತಿ ಸಮಾರೋಪ
Team Udayavani, Feb 13, 2017, 2:23 PM IST
ಧಾರವಾಡ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಮಾಜದತ್ತ ಬಹಿಮುಖವಾಗಿ ಕೆಲಸ ಮಾಡಲು ರಂಗಭೂಮಿ ನೆರವಾಗುತ್ತದೆ ಎಂದು ಕವಿವಿ ಗಾಂಧಿಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ಶಿವಾನಂದ ಶೆಟ್ಟರ ಹೇಳಿದರು.
ನಗರದ ಕವಿಸಂನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರುಹಾಗೂ ಬಸವರೆಡ್ಡಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಬಸವರಡ್ಡಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಬಸವರೆಡ್ಡಿ ಮಾತನಾಡಿ, ರಂಗಭೂಮಿಯು ಜಾನಪದ ಕಲೆಯ ವಿವಿಧ ಮಜಲುಗಳನ್ನು ಮೈಗೂಡಿಸಿಕೊಂಡು ಸರ್ವ ಶಕ್ತಿಯನ್ನು ಬೆಳೆಸಲು ಸಹಾಯಕವಾಗುತ್ತದೆ ಎಂದರು.
ಸಾಹಿತಿ ಮೋಹನ ನಾಗಮ್ಮನವರ ಮಾತನಾಡಿ, ಜಾತಿ-ಮತ, ಪಂಥವನ್ನು ಮೀರಿ ರಂಗಭೂಮಿಯು ತನ್ನದೇ ಆದ ಪಾವಿತ್ರತೆ ಕಾಯ್ದುಕೊಂಡು ಬಂದಿದೆ ಎಂದರು. ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮಹಾದೇವ ದೊಡಮನಿ ಮಾತನಾಡಿ, ಉತ್ತರ ಕರ್ನಾಟಕದ ಕಲಾವಿದರಿಗೆ ಸಮರ್ಪಕ ನ್ಯಾಯ ಒದಗಿಸುವ ಜವಾಬ್ದಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಕಾಡೆಮಿಗಳದ್ದಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಮಾತನಾಡಿದರು. ನಾಟಕ ಅಕಾಡೆಮಿ ಸದಸ್ಯ ಕೆ.ಜಗುಚಂದ್ರ ಅಧ್ಯಕ್ಷತೆ ವಹಿಸಿದ್ದರು. ನಂತರ ರಂಗ ತರಬೇತಿ ಶಿಬಿರದಲ್ಲಿ ನಿರ್ಮಾಣವಾದ ಡಾ| ಚಂದ್ರಶೇಖರ ಕಂಬಾರ ರಚಿತ, ಅಮೃತಾ ತಳವಾರ ನಿರ್ದೇಶನದ “ನಾಯಿ ಕಥೆ’ ನಾಟಕ ಪ್ರದರ್ಶನಗೊಂಡಿತು. ಎನ್.ಎಂ. ಗಡೆಣ್ಣವರ ಸ್ವಾಗತಿಸಿದರು. ಎಫ್.ಬಿ. ಕಣವಿ ನಿರೂಪಿಸಿದರು. ಹೇಮಂತ ಲಮಾಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.