ಭ್ರಷ್ಟರು ದೇಶಭಕ್ತರಾಗಲು ಸಾಧ್ಯವಿಲ್ಲ


Team Udayavani, Apr 23, 2017, 3:30 PM IST

hub3.jpg

ಹುಬ್ಬಳ್ಳಿ: ದೇಶಭಕ್ತಿಯ ಕಾರಣದಿಂದ ಸೇವೆಗೆ ಸೇರಿರುವ ಪೊಲೀಸರು ಯಾವುದೇ ಬಗೆಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ. ಭ್ರಷ್ಟರಾದವರು ದೇಶಭಕ್ತರಾಗಲು ಸಾಧ್ಯವಿಲ್ಲವೆಂದು ಜಂಗಲವಾಲೆ ಬಾಬಾ ಖ್ಯಾತಿಯ ದಿಗಂಬರ ಸಂತ ಮುನಿಶ್ರೀ ಚಿನ್ಮಯಸಾಗರ ಮಹಾರಾಜರು ನುಡಿದರು. 

ಇಲ್ಲಿನ ಕಾರವಾರ ರಸ್ತೆಯ ಹಳೆಯ ಸಿಎಆರ್‌ ಮೈದಾನದ ಆವರಣದಲ್ಲಿ ಶುಕ್ರವಾರ ಪೊಲೀಸ್‌ ಸಿಬ್ಬಂದಿ ಉದ್ದೇಶಿಸಿ ಆಶೀರ್ವಚನ ನೀಡಿದ ಮುನಿಶ್ರೀ, ದುರ್ಜನರಿಗೆ ಕಡಿವಾಣ ಹಾಕುವ ಪೊಲೀಸರು ಸಜ್ಜನರ ರಕ್ಷಣೆಗೆ ಮುಂದಾಗಬೇಕು. ಸಜ್ಜನರಿಗೆ ಎಂದೂ ತೊಂದರೆ ಕೊಡಬೇಡಿ ಎಂದರು. 

ಸಂತರು ಹಾಗೂ ಪೊಲೀಸರ ದಾರಿಗಳು ಬೇರೆಯಾಗಿರಬಹುದು. ಆದರೆ ಇಬ್ಬರ ಉದ್ದೇಶ ಒಂದೇ ಆಗಿದೆ. ಸಮಾಜವನ್ನು ಪಾಪಮುಕ್ತಗೊಳಿಸುವ ಸಮಾನ ಕಾರ್ಯ ಮಾಡುತ್ತಿದ್ದಾರೆ. ದೇಶಸೇವೆ ಮಾಡಬೇಕು. ಉತ್ತಮ ಸಮಾಜ ನಿರ್ಮಿಸಬೇಕೆಂಬ ಭಾವನೆ ಹೊಂದಿ ಪೊಲೀಸ್‌ ಸೇವೆಗೆ ಸೇರಿರುವ ನೀವು ಸತ್ಯ ಮಾರ್ಗದಲ್ಲಿ ಮುನ್ನಡೆಯಲು ಎಂದಿಗೂ ಭೀತಿ ಪಡಬೇಡಿ.

ಸಮಯದ ಪರಿವಿಲ್ಲದೆ ಕುಟುಂಬದ ಸದಸ್ಯರಿಂದ ದೂರ ಉಳಿದು ಸಮಾಜದ ಸುರಕ್ಷೆಗಾಗಿ ಶ್ರಮಿಸುವ ನಿಮ್ಮ ಬಗ್ಗೆ ನಿಮ್ಮ ಪರಿವಾರ ಮಾತ್ರವಲ್ಲ ಇಡೀ ಸಮಾಜಕ್ಕೆ ಹೆಮ್ಮೆ ಇದೆ ಎಂದರು. ನಿಮ್ಮ ಅಧಿಕಾರ, ಸಂಪತ್ತು, ಐಶ್ವರ್ಯ ನೋಡಿ ಜನ ನಿಮ್ಮನ್ನು ಗುರುತಿಸುವುದಿಲ್ಲ. ನಿಮ್ಮ ಸೇವೆ, ಸಮವಸ್ತ್ರಕ್ಕೆ ಮಹತ್ವ ಕೊಡುತ್ತಾರೆ.

ಆದ್ದರಿಂದ ನಿಮ್ಮಬಗ್ಗೆ ಯಾರಾದರೂ ಟೀಕೆ-ಟಿಪ್ಪಣೆಗಳನ್ನು ಮಾಡಿದರೆ  ಅದಕ್ಕೆ ನೀವು ಎದೆಗುಂದಬೇಡಿ. ಸಶಕ್ತ ಸಮಾಜ ನಿರ್ಮಾಣವೇ ನಿಮ್ಮ ಗುರಿಯಾಗಬೇಕು. ಪಾಪಗಳನ್ನು ತಡೆಯುವುದೇ ನಿಮ್ಮ ಉದ್ದೇಶವಾಗಬೇಕು. ನಿಮ್ಮ ಕಾಯಕದಲ್ಲಿ ಧೈರ್ಯವಾಗಿ ಮುನ್ನುಗ್ಗಿ. ಯಾವುದೇ ಆಮಿಷ, ಒತ್ತಡಗಳಿಗೆ ಮಣಿಯಬೇಡಿ ಎಂದರು. 

ಆಯುಕ್ತ ಪಾಂಡುರಂಗ ರಾಣೆ ಮಾತನಾಡಿ, ಮುನಿಶ್ರೀಗಳ ಬೋಧನೆಗಳನ್ನು ಪೊಲೀಸರು, ಸಮಾಜ ಆದರ್ಶವಾಗಿಟ್ಟುಕೊಂಡರೆ ಸಮಾಜದಲ್ಲಿ ಶಾಂತಿ-ನೆಮ್ಮದಿ ಸ್ಥಾಪನೆ ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ಜೈನ ಸಮಾಜದ ವತಿಯಿಂದ ಹಾಗೂ ಮುನಿಶ್ರೀ ಚಿನ್ಮಯಸಾಗರ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಪೊಲೀಸ್‌ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಜೈನ ಸಮಾಜ ಅಧ್ಯಕ್ಷ ಶಾಂತಿನಾಥ ಹೋತಪೇಟಿ,  ಉಪಾಧ್ಯಕ್ಷರಾದ ವಿಮಲ ತಾಳಿಕೋಟಿ, ರಾಜೇಂದ್ರ ಬೀಳಗಿ, ಶ್ರೇಣಿಕರಾಜ ರಾಜಮಾನೆ, ಮಹಾವೀರ ಸೂಜಿ, ಧನಪಾಲ ಮುನ್ನೊಳ್ಳಿ, ಬ್ರಹ್ಮಕುಮಾರ ಬೀಳಗಿ,  ಸುನಂದಾ ಗೋಟಡಕಿ, ತ್ರಿಶಲಾ ಮಾಲಗತ್ತಿ, ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಇದ್ದರು.  

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.