ಮಾನವೀಯತೆ ಮೆರೆಯುವ ಸಂಸ್ಕೃತಿ ಬೆಳೆಯಲಿ


Team Udayavani, May 2, 2017, 3:27 PM IST

hub5.jpg

ಧಾರವಾಡ: ರಸ್ತೆಗಳಲ್ಲಿ ಅಪಘಾತ ಸಂಭವಿಸಿದಾಗ ಪ್ರತಿಯೊಬ್ಬರು ಸಂತ್ರಸ್ತರ ನೆರವಿಗೆ ಧಾವಿಸಿ ಮಾನವೀಯತೆ ಮೆರೆಯುವ ಸಂಸ್ಕೃತಿ ಬೆಳೆಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್‌ ಕುಲಕರ್ಣಿ ಹೇಳಿದರು. 

ಡಾ|ನಾಗರಾಜ ಜಮಖಂಡಿ ಮೆಮೋರಿಯಲ್‌ ಟ್ರಸ್ಟ್‌ನಿಂದ ಇಲ್ಲಿನ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಡಾ|ನಾಗರಾಜ ಜಮಖಂಡಿ ಅವರ 2ನೇ ಪುಣ್ಯಸ್ಮರಣೆ ಮತ್ತು ಅಪಘಾತಗಳ ಬಗ್ಗೆ ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ರೂಪಕ, ರಕ್ತದಾನ ಶಿಬಿರ ಹಾಗೂ ಮಹದಾಯಿ ಮುಂದೇನು ಚರ್ಚೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

25 ವರ್ಷಗಳ ಹಿಂದೆ ರಸ್ತೆಗಳಲ್ಲಿ ವಾಹನಗಳೇ ಇರಲಿಲ್ಲ. ಆದರೆ ಇಂದು ಲಕ್ಷ ಲಕ್ಷ ವಾಹನಗಳು ರಸ್ತೆಗೆ ಇಳಿಯುತ್ತಿವೆ. ಆದರೆ ಅದಕ್ಕೆ ತಕ್ಕಂತೆ ರಸ್ತೆಗಳ ನಿರ್ಮಾಣ ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲೆಂದರಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಆದರೆ ದುರಂತ ಎಂದರೆ ಅಪಘಾತಗಳು ನಡೆದಾಗ ಅಪಘಾತಕ್ಕೀಡಾದವರಿಗೆ ನೆರವು ನೀಡಬೇಕು. 

ಹೀಗೆ ನೆರವು ನೀಡಿದವರಿಗೆ ಪೊಲೀಸರು ಯಾವುದೇ ತೊಂದರೆ ನೀಡಬಾರದು ಎಂದು ಕಾನೂನು ರೂಪಿಸಲಾಗಿದೆ. ಅಪಘಾತಗಳಿಂದ ಹಲವು ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದರು.  ಡಾ|ನಾಗರಾಜ ಜಮಖಂಡಿ ಅವರು ಸಾಧನೆ ಮಾಡುವಲ್ಲಿ ಧೈರ್ಯಶಾಲಿಯಾಗಿದ್ದರು.

ಇತರರನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನಿಸಿದ್ದ ಅವರು ಉತ್ತಮ ಗುರಿ-ಉದ್ದೇಶಗಳನ್ನು ಹೊಂದಿದ್ದರು ಎಂದರು. ಹು-ಧಾ ಮಹಾನಗರ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ನಡೆದ ಕೊಲೆ ಪ್ರಕರಣಗಳಿಗಿಂತ ಆಕಸ್ಮಿಕವಾಗಿ ಸಂಭವಿಸುವ ಅಪಘಾತಗಳ ಪ್ರಕರಣಗಳು ಹೆಚ್ಚು ದಾಖಲಾಗುತ್ತದೆ.

ರಸ್ತೆ ನಿಯಮಗಳನ್ನು ಪಾಲಿಸದಿರುವುದರಿಂದ ಅಪಘಾತಗಳು ಹೆಚ್ಚಾಗುತ್ತವೆ. ಅಪಘಾತ ಮಾಡಿ ಓಡಿ ಹೋದಾಗ ಸಂತ್ರಸ್ತರಿಗೆ ಪರಿಹಾರ ದೊರಕುವುದು ಕಷ್ಟ. ಅಂತಹವರು ಮಾನವೀಯತೆ ಅರಿಯಬೇಕು. ಚಾಲಕರ ಪರವಾನಗಿ ನೀಡಲು ಕಠಿಣ ನಿಯಮಗಳನ್ನು ರೂಪಿಸಬೇಕಾದ ಅಗತ್ಯವಿದೆ.

ಈ ಬಗ್ಗೆ ವಿದೇಶಗಳಲ್ಲಿ ಇರುವಂತೆ ಕಠಿಣ ಕಾನೂನು ಜಾರಿಯಾಗಬೇಕಿದೆ ಎಂದರು. ಇದೇ ಸಂದರ್ಭದಲ್ಲಿ “ಅಪಘಾತಗಳ ಬಗ್ಗೆ ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ರೂಪಕ ಪ್ರದರ್ಶನ ಮಾಡಲಾಯಿತು. ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಡಾ|ಸುಜಾತಾ ಗಿರಿಯನ್‌, ಗಿರಿಜಾ ತಮಿನಾಳ, ಮಂಗಳಾ ಜಮಖಂಡಿ, ಇತರರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.