ಕರ್ಫ್ಯೂ ಕೊಂಚ ಸಡಿಲ; ಜನಸಂಚಾರ ಹೆಚ್ಚಳ
Team Udayavani, Jun 15, 2021, 5:49 PM IST
ಧಾರವಾಡ: ಜಿಲ್ಲೆಯಲ್ಲಿ ಅನ್‌ಲಾಕ್ ಪ್ರಕ್ರಿಯೆಗೆ ಚಾಲನೆ ಲಭಿಸಿದ್ದು, ಸೋಮವಾರ ಮೊದಲ ದಿನವೇ ಜನ ಹಾಗೂ ವಾಹನಗಳ ಸಂಚಾರ ಜೋರಾಗಿತ್ತು.
ಕಳೆದ ಒಂದೂವರೆ ತಿಂಗಳಿಂದ ಜನ-ವಾಹನಗಳ ಸಂಚಾರವಿಲ್ಲದೇ ಭಣಗುತ್ತಿದ್ದ ಸುಭಾಸ, ಟಿಕಾರೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ಜೋರಾಗಿತ್ತು. ಮಾರುಕಟ್ಟೆ ಪ್ರದೇಶದಲ್ಲಿ ಜನರ ಸಂಚಾರ, ವ್ಯಾಪಾರ-ವಹಿವಾಟು ಹೆಚ್ಚಿತ್ತು.
ಅನ್‌ಲಾಕ್ ಪ್ರಕ್ರಿಯೆ ಮೊದಲ ಹಂತವಾಗಿ ಅಗತ್ಯ ವಸ್ತುಗಳು ಸೇರಿ ಕೆಲ ವಲಯಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಬೆಳಗ್ಗೆಯಿಂದ ತುಂತುರು ಮಳೆ ಇದ್ದ ಕಾರಣಕ್ಕೆ ಮಾರುಕಟ್ಟೆಯಲ್ಲಿ ಜನ ಸಂಚಾರ ವಿರಳವಾಗಿತ್ತು. ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡಿದ್ದರಿಂದ ಕೆಲ ವ್ಯಾಪಾರಸ್ಥರು ವಿಳಂಬವಾಗಿ ಅಂಗಡಿ ತೆರೆದರೆ, ಬೆಳಗ್ಗೆ ಬೇಗ ಅಂಗಡಿ ತೆರೆದವರಿಗೆ ಮಳೆ ನಿರಾಸೆ ಮೂಡಿಸಿತು.
ರಸ್ತೆಗಿಳಿದ ಜನರು ಮಾತ್ರ ಸರ್ಕಾರದ ನಿಯಮ ಪಾಲನೆ ಮಾಡದಿರುವುದು ಸ್ಪಷ್ಟವಾಗಿತ್ತು. ಬಹುತೇಕ ಜನರು, ವ್ಯಾಪಾರಸ್ಥರು ಮಾಸ್ಕ್ ಇಲ್ಲದೆ ವ್ಯಾಪಾರ-ವಹಿವಾಟು ನಡೆಸಿರುವುದು ಸಾಮಾನ್ಯವಾಗಿತ್ತು. ಮಧ್ಯಾಹ್ನದ ಬಳಿಕ ಜನ ಸಂಚಾರ ವಿರಳವಾಗಿತ್ತು. ಆಟೋಗಳು ರಸ್ತೆಗಳಿದು ಸಂಚಾರ ಮಾಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.