ಮುಖ್ಯಮಂತ್ರಿ ಬಳಿ ರೈತರ ನಿಯೋಗ ತೆರಳಲು ನಿರ್ಧಾರ

Team Udayavani, Jun 6, 2018, 4:47 PM IST

6-june-19.jpg

ಹುಬ್ಬಳ್ಳಿ: ಕಳಸಾ-ಬಂಡೂರಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಗೆ ರೈತರ ನಿಯೋಗ ತೆರಳಲು ಇಲ್ಲಿನ ಸರ್ಕಿಟ್‌ಹೌಸ್‌ ನಲ್ಲಿ ನಡೆದ ಮಹದಾಯಿ, ಕಳಸಾ-ಬಂಡೂರಿ ಪಕ್ಷಾತೀತ ರೈತ ಹೋರಾಟ ಸಮಿತಿ ಸಭೆಯಲ್ಲಿ ನಿರ್ಧರಿಲಾಯಿತು. ಸಚಿವರೊಂದಿಗೆ ರೈತ ಮುಖಂಡರು ಸೇರಿ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವಂತೆ ಕೋರಲು ಹಾಗೂ ಎಲ್ಲ ರೈತರು ಒಗ್ಗಟ್ಟಿನಿಂದ ಹೋರಾಟ ಮುಂದುವರಿಸಲು ನಿರ್ಧರಿಸಲಾಯಿತು.

ರೈತ ಮುಖಂಡ ಬಸವರಾಜ ಸಾಬಳೆ ಮಾತನಾಡಿ, ಎಲ್ಲ ರೈತ ಹೋರಾಟಗಾರರು ಒಂದೇ ವೇದಿಕೆಯಡಿ ಹೋರಾಟ ಸಂಘಟಿಸುವುದು ಮುಖ್ಯ. ಸಂಘಗಳ ಹೆಸರಿನಲ್ಲಿ ರೈತರಲ್ಲಿ ಯಾವುದೇ ಒಡಕು ಬೇಡ. ನಮ್ಮ ಬೇಡಿಕೆ ಏನಿದ್ದರೂ ಕಳಸಾ-ಬಂಡೂರಿ ಅನುಷ್ಠಾನವಾಗಿದೆ. ಬೇಡಿಕೆ ಈಡೇರಿಕೆಗಾಗಿ ನಮ್ಮಲ್ಲಿನ ಭಿನ್ನಾಭಿಪ್ರಾಯ ದೂರ ಇರಿಸಬೇಕು ಎಂದರು.

ಕೆಲ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ರೈತ ಮುಖಂಡರು ಸಂಸದರನ್ನು ಕರೆದು ಪ್ರಧಾನಿ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಬೇಕಿದೆ. ರೈತರ ಸ್ಥಿತಿಗೆ ಸ್ಪಂದಿಸುವಂತೆ ಒತ್ತಡ ಹೇರಬೇಕಿದೆ ಎಂದರು. ಮಲ್ಲಿಕಾರ್ಜುನಗೌಡ ಬಾಳನಗೌಡರ ಮಾತನಾಡಿ, ರೈತರಲ್ಲಿ ಒಗ್ಗಟ್ಟಿನ ಕೊರತೆಯಿದೆ. ಒಗ್ಗಟ್ಟಿನಿಂದ ಹೋರಾಡಿದರೆ ಖಂಡಿತಾ ಬೇಡಿಕೆ ಈಡೇರಲು ಸಾಧ್ಯ. 1000ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆದರೂ ಪ್ರಧಾನಿ ಸ್ಪಂದಿಸದಿರುವುದು ಖಂಡನೀಯ ಎಂದರು. ವೈ.ಬಿ.ಇನಾಮತಿ ಮಾತನಾಡಿ, ರೈತರಲ್ಲಿ ಸಣ್ಣ ರೈತರು ಹಾಗೂ ದೊಡ್ಡ ರೈತರೆಂದು ಭೇದ ಮಾಡದೇ ಎಲ್ಲ ರೈತರ ಸಾಲವನ್ನು ಏಕಕಾಲಕ್ಕೆ ಮನ್ನಾ ಮಾಡಬೇಕು ಎಂದರು.

ಜೂನ್‌ 10ರ ಬಂದ್‌ಗೆ ಬೆಂಬಲ: ಹೋರಾಟಗಾರ ಅಮೃತ ಇಜಾರಿ ಮಾತನಾಡಿ, ಸ್ವಾಮಿನಾಥನ್‌ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಉತ್ತರ ಹಾಗೂ ಮಧ್ಯ ಭಾರತದ ರೈತ ಸಂಘಟನೆಗಳು ಕರೆ ನೀಡಿದ ಭಾರತ ಬಂದ್‌ಗೆ ಮಹದಾಯಿ, ಕಳಸಾ-ಬಂಡೂರಿ ಪಕ್ಷಾತೀತ ರೈತ ಹೋರಾಟ ಸಮಿತಿ ಬೆಂಬಲ ನೀಡಲಿದೆ. ಕೇಂದ್ರ ಸರಕಾರ ಸ್ವಾಮಿನಾಥನ್‌ ವರದಿ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿರುವುದು ಖಂಡನೀಯ ಎಂದರು. ಕಳಸಾ-ಬಂಡೂರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡ ಹೋರಾಟಗಾರರ ಮೇಲಿನ ಎಲ್ಲ ಬಾಕಿ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಸರಕಾರಕ್ಕೆ ಆಗ್ರಹಿಸಬೇಕು. ಮೃತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಸುಭಾಸಗೌಡ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಕಳೆದ 3 ವರ್ಷಗಳಿಂದ ರೈತರು ಹೋರಾಡುತ್ತಿದ್ದರೂ ಸ್ಪಂದಿಸದ ಪ್ರಧಾನಿ ಮೋದಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ಕಳಸಾ-ಬಂಡೂರಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಮಾತನಾಡಿದ್ದಾರೆ. ನಾವು ಹೋರಾಟ ಮುಂದುವರಿಸಬೇಕು ಎಂದು ತಿಳಿಸಿದರು.

ರೈತ ಮುಖಂಡರಾದ ಸಿ.ಸಿ.ಪಾಟೀಲ, ಶಿವಣ್ಣ ಹುಬ್ಬಳ್ಳಿ, ಬಸಪ್ಪ ಈರಣ್ಣವರ, ಕುಮಾರಸ್ವಾಮಿ ಹಿರೇಮಠ, ಸಂಜೀವ ಧುಮ್ಮಕನಾಳ, ರಾಜು ಪಾಟೀಲ, ಮಂಜುನಾಥ ಲೂತಿಮಠ, ರೆಹಮಾನ್‌ ನದಾಫ‌, ಹೇಮನಗೌಡ ಬಸನಗೌಡರ ಮೊದಲಾದವರು ಸಭೆಯಲ್ಲಿದ್ದರು. 

ರೈತರಿಂದ ಸಂಗ್ರಹಿಸಿದ ಹಣದ ಲೆಕ್ಕ ನೀಡಲಿ ಕೋಡಿಹಳ್ಳಿ ಚಂದ್ರಶೇಖರ, ಶಾಂತಕುಮಾರ ಅವರಿಗೆ ಉತ್ತರ ಕರ್ನಾಟಕದ ರೈತರ ಬಗ್ಗೆ ಕಾಳಜಿ ಇಲ್ಲ. ಅವರು ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕಳೆದ ಬಾರಿ ಚಂದ್ರಶೇಖರ ಧಾರವಾಡಕ್ಕೆ ಬಂದಾಗ ಪ್ರತಿಯೊಬ್ಬ ರೈತರಿಂದ 50 ರೂ. ಹಣ ಸಂಗ್ರಹಿಸಿದರು. ಸ್ತ್ರೀ ಶಕ್ತಿ ಸಂಘಗಳಿಂದಲೂ ಹಣ ಸಂಗ್ರಹಿಸಿದರು. ಸಾಲ ಮನ್ನಾ ಮಾಡುವುದಕ್ಕಾಗಿ ಬಳಸಲಾಗುವುದು ಎಂದು ಸುಳ್ಳು ಹೇಳಿ ಹಣ ಪಡೆದು ಹೋದರು. ಜಿಲ್ಲೆಯಿಂದ ಸುಮಾರು 20 ಲಕ್ಷ ರೂ. ಸಂಗ್ರಹಿಸಿದ್ದು, ಅದನ್ನು ಯಾವುದಕ್ಕೆ ಖರ್ಚು ಮಾಡಿದ್ದಾರೆಂಬುದನ್ನು ನಾವು ಕೇಳಬೇಕಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡರ ಹೇಳಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.