500 ಮಳಿಗೆ ಸ್ಥಾಪನೆಗೆ ನಿರ್ಧಾರ
Team Udayavani, Nov 28, 2018, 6:00 AM IST
ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಒಟ್ಟು 500 ಪುಸ್ತಕ ಹಾಗೂ ವಸ್ತು ಪ್ರದರ್ಶನ-ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಈ ಮಳಿಗೆಗಳ ವಿಸ್ತೀರ್ಣ 10/10 ಅಡಿ ಇದ್ದು, ಒಂದು ಮಳಿಗೆಗೆ 2,500 ರೂ.ನಂತೆ ಬಾಡಿಗೆ ವಿ ಧಿಸಲಾಗಿದೆ. ಈ ಹಣವನ್ನು ಡಿಡಿ ಮುಖಾಂತರ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಹೆಸರಿನಲ್ಲಿ ಪಡೆದು ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ
ಪರಿಷತ್, ಸಾಹಿತ್ಯ ಭವನ, ಆರ್.ಎನ್. ಶೆಟ್ಟಿ ಕ್ರೀಡಾಂಗಣ ಹತ್ತಿರ ಧಾರವಾಡ-580001 ಅಥವಾ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಚಾಮರಾಜ ಪೇಟೆ, ಪಂಪ ಮಹಾಕವಿ ರಸ್ತೆ, ಬೆಂಗಳೂರು- 560018 ಅವರಿಗೆ ಕಳುಹಿಸಿ ಕೊಡಬೇಕು. ಡಿಡಿ ಸಲ್ಲಿಸಿದ ದಿನಾಂಕಕ್ಕೆ ರಸೀದಿ ಪಡೆದ ಆಧಾರ ಮೇಲೆ ಮೊದಲು ಬಂದವರಿಗೆ ಮೊದಲ ಅದ್ಯತೆ ಮೇಲೆ ಮಳಿಗೆ ಹಂಚಿಕೆ ಮಾಡಲಾಗುವುದು.
ಹಾಗೂ ಈ ಹಂಚಿಕೆ ಸಮಿತಿಯ ಅಂತಿಮ ತೀರ್ಮಾನಕ್ಕೆ ಒಳಪಟ್ಟಿರುತ್ತದೆ. ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಮಳಿಗೆದಾರರು ಫ್ಲೆಕ್ಸ್‌ನಿಂದ ತಯಾರಿಸಿದ ಬ್ಯಾನರ್‌ಗಳ ಬದಲಾಗಿ ಅರಿವೆಯಿಂದ ತಯಾರಿಸಿದ ಬ್ಯಾನರ್‌ಗಳನ್ನು ಉಪಯೋಗಿ ಸುವುದು ಕಡ್ಡಾಯ.
ಪ್ಲಾಸ್ಟಿಕ್ ಉಪಯೋಗ ಸಂಪೂರ್ಣ ನಿಷೇಧಿಸಿದೆ. ಆಸಕ್ತಿಯುಳ್ಳ ಪ್ರದರ್ಶನಕಾರರು ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಕಚೇರಿ, ಧಾರವಾಡ 0836-2448721, ಹಾಗೂ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು ದೂ: 080- 26612991, 080-26623584 ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.