ವಾಯವ್ಯ ಸಾರಿಗೆ ಸಿಬ್ಬಂದಿಗೆ ಡ್ರೆಸ್‌ಕೋಡ್ ಕಡ್ಡಾಯ
Team Udayavani, Sep 21, 2018, 6:00 AM IST
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇನ್ನು ಮುಂದೆ ಕಚೇರಿ ಕರ್ತವ್ಯದ ವೇಳೆಯಲ್ಲಿ ಸಭ್ಯ ವಸ್ತ್ರಗಳನ್ನು ಧರಿಸುವ ಮೂಲಕ ವಸ್ತ್ರ ಸಂಹಿತೆ ಪಾಲಿಸುವುದು ಕಡ್ಡಾಯವಾಗಿದ್ದು, ಅಸಭ್ಯ ಎನ್ನಿಸುವ ವಸ್ತ್ರಗಳನ್ನು ಧರಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ.
ಕಚೇರಿಯ ಕರ್ತವ್ಯದ ವೇಳೆಯಲ್ಲಿ ಶಿಸ್ತು ಹಾಗೂ ವಸ್ತ್ರಸಂಹಿತೆ ಕಡ್ಡಾಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಆದೇಶ ಹೊರಡಿಸಿದ್ದು, ವಸ್ತ್ರಸಂಹಿತೆ ಪಾಲಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಶಿಸ್ತು ಕ್ರಮಕ್ಕೆ ಸೂಚಿಸಿದ್ದಾರೆ. ಕೇಂದ್ರ ಕಚೇರಿ, ವಿಭಾಗೀಯ ಕಚೇರಿ, ಪ್ರಾದೇಶಿಕ ಹಾಗೂ ವಿಭಾಗೀಯ ಕಾರ್ಯಾಗಾರಗಳು, ಪ್ರಾದೇಶಿಕ ತರಬೇತಿ ಕೇಂದ್ರ ಸೇರಿ ಸಂಸ್ಥೆಯ ಎಲ್ಲ ಕಚೇರಿಗಳಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲಿಸಬೇಕು.
ಆದೇಶ ಏನಿದೆ?: ಕೇಂದ್ರ ಕಚೇರಿ ಒಳಗೊಂಡಂತೆ ಸಂಸ್ಥೆ ವ್ಯಾಪ್ತಿಯ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಕೆಲ ಅ ಧಿಕಾರಿಗಳು ಹಾಗೂ ಸಿಬ್ಬಂದಿ ವಸ್ತ್ರ ಸಂಹಿತೆ ಪಾಲನೆ ಮಾಡದಿರುವುದು ಕಂಡು ಬಂದಿದೆ. ಹೀಗಾಗಿ ಕಚೇರಿ ಸಮಯದಲ್ಲಿ ಕರ್ತವ್ಯಕ್ಕೆ ಸೂಕ್ತವಾದ ಸಭ್ಯ ಉಡುಪುಗಳನ್ನು ಧರಿಸಬೇಕೆಂದು ಸೂಚಿಸಲಾಗಿದೆ. ಆದರೆ ಇಂತಹ ಉಡುಪುಗಳು ನಿಷಿದ್ಧ, ಇಂತಹ ಉಡುಪುಗಳನ್ನೇ ಧರಿಸಬೇಕು ಎನ್ನುವ ವಿವರಣೆಗಳಿಲ್ಲ. ಆದರೆ, ಸಂಸ್ಥೆಯ ಹಿರಿಯ ಅ ಧಿಕಾರಿಯೊಬ್ಬರು ಹೇಳುವಂತೆ, ಜೀನ್ಸ್ ಪ್ಯಾಂಟ್, ಟೀ ಶರ್ಟ್, ಮಹಿಳೆಯರು ಧರಿಸುವ ಲೆಗಿನ್ಸ್, ಸಭ್ಯವಲ್ಲದ ಸ್ಲಿವ್‌ಲೆಸ್ ಟಾಪ್ ನಿಷೇಧಿಸಲಾಗಿದೆ. ಪುರುಷ ಸಿಬ್ಬಂದಿ ಫಾರ್ಮಲ್ ಡ್ರೆಸ್ ಹಾಗೂ ಮಹಿಳಾ ಸಿಬ್ಬಂದಿ ಸೀರೆ ಹಾಗೂ ಸಭ್ಯ ಎನ್ನಿಸುವ ಚೂಡಿದಾರ ಧರಿಸಬಹುದಾಗಿದೆ.
ಕೇಂದ್ರ ಕಚೇರಿ ಹಾಗೂ ವಿಭಾಗೀಯ ಕಚೇರಿ ಸೇರಿ ಇತರೆಡೆ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅ ಧಿಕಾರಿಗಳು ಸಮವಸ್ತ್ರ ಧರಿಸದೇ ಇರುವುದನ್ನು ವ್ಯವಸ್ಥಾಪಕ ನಿರ್ದೇಶಕರು ಗುರುತಿಸಿದ್ದಾರೆ. ಹೀಗಾಗಿ ಕರ್ತವ್ಯದ ವೇಳೆ ಅಧಿ ಕಾರಿಗಳು ಹಾಗೂ ಸಿಬ್ಬಂದಿ ಸಮವಸ್ತ್ರ ಧರಿಸಿ ಕಚೇರಿಯ ಶಿಷ್ಟಾಚಾರ ಪಾಲಿಸುವಂತೆ ಆದೇಶದ ಮೂಲಕ ಎಚ್ಚರಿಸಿದ್ದಾರೆ.
ಶಿಸ್ತು ಕ್ರಮವೇನು?
ವಸ್ತ್ರ ಸಂಹಿತೆ ಪಾಲಿಸದವರಿಗೆ ದಂಡ, ಶಿಸ್ತು ಪ್ರಾಧಿಕಾರದ ಮುಖ್ಯಸ್ಥರು ವಾಗ್ಧಂಡನೆ ಕೂಡ ಮಾಡಬಹುದು. ಪುನರಾವರ್ತನೆಯಾದರೆ ತೀವ್ರ ಸ್ವರೂಪದ ಕ್ರಮ ಎದುರಿಸಬೇಕಾಗುತ್ತದೆ. ಸಮವಸ್ತ್ರ ಹೊಂದಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿಯಮ ಉಲ್ಲಂಘನೆಗೆ ನಿಯಮಾವಳಿ ಪ್ರಕಾರ ಕ್ರಮ ಎದುರಿಸಬೇಕಾಗುತ್ತದೆ. ಕರ್ತವ್ಯದ ವೇಳೆಯಲ್ಲಿ ವಸ್ತ್ರಸಂಹಿತೆ ಕಾಪಾಡಬೇಕು ಎನ್ನುವ ಬಗ್ಗೆ ಸರ್ಕಾರದ ಸುತ್ತೋಲೆಯಿದೆ. 2013ರಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಕಚೇರಿಗೆ ಬರುವಾಗ ಗೌರವ ತರುವಂತಹ ವಸ್ತ್ರಗಳನ್ನು ಧರಿಸಬೇಕೆಂದು ಎಲ್ಲ ಇಲಾಖೆಗಳ ಸಿಬ್ಬಂದಿಗೆ ಆದೇಶದ ಮೂಲಕ ಸೂಚಿಸಿತ್ತು. ಆರಂಭದಲ್ಲಿ ಇದು ಪಾಲನೆಯಾದರೂ ನಂತರ ಹೊಸದಾಗಿ ನೇಮಕಾತಿ ಹೊಂದಿದವರು ಪಾಲನೆ ಮಾಡಲಿಲ್ಲ. ಆದರೆ ಇದೀಗ ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ ಈ ಸುತ್ತೋಲೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವ ನಿಟ್ಟಿನಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕೈಗೊಂಡಿರುವ ಕ್ರಮಕ್ಕೆ ಸಿಬ್ಬಂದಿ ವರ್ಗದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸರ್ಕಾರದ ಹಿಂದಿನ ಆದೇಶದಂತೆ ಸಂಸ್ಥೆಯಲ್ಲಿ ಶಿಸ್ತು ತರುವ ನಿಟ್ಟಿನಲ್ಲಿ ಆರಂಭಿಕವಾಗಿ ವಸ್ತ್ರಸಂಹಿತೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಆದೇಶವನ್ನು ಸಿಬ್ಬಂದಿ ಪಾಲನೆ ಮಾಡುತ್ತಾರೆ ಎನ್ನುವ ನಂಬಿಕೆಯಿದೆ. ಪಾಲನೆ ಮಾಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.
– ರಾಜೇಂದ್ರ ಚೋಳನ್, ವ್ಯವಸ್ಥಾಪಕ ನಿರ್ದೇಶಕರು
– ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.