ವಿಭಾಗ ಮಟ್ಟದ ಕಾಲೇಜು ನಾಟಕ ಸ್ಪರ್ಧೆಗೆ ಚಾಲನೆ
Team Udayavani, Feb 14, 2017, 1:21 PM IST
ಧಾರವಾಡ: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಧಾರವಾಡ ರಂಗಾಯಣ ಆಯೋಜಿಸಿರುವ 6 ದಿನಗಳ ವಿಭಾಗ ಮಟ್ಟದ ಕಾಲೇಜು ನಾಟಕ ಸ್ಪರ್ಧೆಗೆ ನಗರದ ರಂಗಾಯಣದ ಪಂ| ರಾಜಗುರು ಬಯಲು ರಂಗಮಂದಿರದಲ್ಲಿ ಸೋಮವಾರ ಚಾಲನೆ ದೊರೆಯಿತು.
ಚಾಲನೆ ನೀಡಿದ ರಂಗ ನಿರ್ದೇಶಕ ನಟರಾಜ ಹೊನ್ನವಳ್ಳಿ ಮಾತನಾಡಿ, ಉತ್ತಮ ನಾಟಕಗಳ ಪ್ರದರ್ಶನಗಳಿಗೆ ಉತ್ತಮವಾದ ಸುಸಜ್ಜಿತ ರಂಗಮಂದಿರದ ಅವಶ್ಯಕತೆ ಇದೆ. ನಾಟಕಗಳ ಆಯ್ಕೆಯ ಬದಲಾವಣೆಯ ಜೊತೆಗೆ ನೋಡುಗರ ಮನಸ್ಥಿತಿಯೂ ಬದಲಾಗಬೇಕು ಎಂದರು.
ಕವಿಸಂನ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಕವು ಕೇವಲ ಸ್ಪರ್ಧೆಯ ವಿಷಯವಾಗಿರದೇ ಯುವ ಪೀಳಿಗೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಬೇಕು ಎಂದರು. ರಂಗಾಯಣದ ನಿರ್ದೇಶಕ ಡಾ| ಪ್ರಕಾಶ ಗರುಡ ಅಧ್ಯಕ್ಷತೆ ವಹಿಸಿದ್ದರು.
ಸ್ಪರ್ಧೆಯ ನಿರ್ಣಾಯಕರಾದ ರಾಮಕೃಷ್ಣ ಮರಾಠೆ, ಪುರುಷೋತ್ತಮ ತಲವಾಟ, ಎಸ್. ಮಾಲತಿ ಇದ್ದರು. ರಂಗಾಯಣದ ಆಡಳಿತಾಧಿಕಾರಿ ಬಸವರಾಜ ಹೂಗಾರ್ ಸ್ವಾಗತಿಸಿದರು. ಹಿಪ್ಪರಗಿ ಸಿದ್ದರಾಮ ನಿರೂಪಿಸಿ, ವಂದಿಸಿದರು.
ಧಾರವಾಡ ರಂಗಾಯಣದ ವ್ಯಾಪ್ತಿಯಲ್ಲಿ ಬರುವ ಏಳು ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳಿಂದ ಸೋಮವಾರದಿಂದ ಫೆ.18 ರವರೆಗೆ ಪ್ರತಿದಿನ ಸಂಜೆ 6:30ಗಂಟೆಗೆ ನಾಟಕ ಸ್ಪರ್ಧೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.