ಸಂಪೂರ್ಣ ನಗದು ರಹಿತ ವಹಿವಾಟು ಅಸಾಧ್ಯ
Team Udayavani, May 20, 2017, 4:14 PM IST
ಹುಬ್ಬಳ್ಳಿ: ದೇಶದಲ್ಲಿ ನಗದು ರಹಿತ ವಹಿವಾಟು ಅಸಾಧ್ಯ, ಬದಲಾಗಿ ನಗದು ವಹಿವಾಟು ಕಡಿಮೆ ಮಾಡಬಹುದು ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ನಿರ್ದೇಶಕ ರವೀಂದ್ರ ಯಲಿಗಾರ ಹೇಳಿದರು.
ಇಲ್ಲಿನ ಆದರ್ಶ ನಗರ ಡಾ| ಡಿ.ಎಸ್. ಕರ್ಕಿ ಕನ್ನಡ ಭವನದಲ್ಲಿ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸೌಹಾರ್ದ ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಳಿಗೆ ಆದಾಯ ತೆರಿಗೆ ಕಾನೂನಿನ ಇತ್ತೀಚಿನ ತಿದ್ದುಪಡಿಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬದಲಾವಣೆ ಜಗದ ನಿಯಮ. ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವುದು ಅನಿವಾರ್ಯ. ಆದರೆ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಅವುಗಳ ಪರಿಹಾರಕ್ಕೆ ಮೊದಲು ಆದ್ಯತೆ ನೀಡಬೇಕು ಎಂದರು. ಸಹಾಕಾರಿ ಸಂಸ್ಥೆಗಳು ಕೆವೈಸಿ ಪ್ರಕಾರವೇ ಸದಸ್ಯತ್ವ ಮಾಡಿಕೊಳ್ಳಬೇಕು, ಆದಾಯ ತೆರಿಗೆ ಇಲಾಖೆಯಿಂದ ಸಂಸ್ಥೆಗಳನ್ನು ಮುಕ್ತ ಮಾಡಬೇಕು.
ಸದ್ಯ ಡಿಜಿಟಲೀಕರಣದಲ್ಲಿ ಆಗಿರುವ ತಿದ್ದುಪಡಿಗಳ ಕುರಿತು ಸರಕಾರ ಗಮನ ಹರಿಸಿ ಸಹಕಾರಿ ರಂಗದ ಬೆಳವಣಿಗಗೆ ಒತ್ತು ನೀಡಬೇಕು. ಸರಕಾರ ಮಾಡುವ ಕೆಲಸವನ್ನು ಸಹಕಾರಿ ಸಂಸ್ಥೆಗಳು ಮಾಡುತ್ತಿದ್ದು, ಇದನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರಕಾರ ಕಾನೂನು ತಿದ್ದುಪಡಿ ಮಾಡಬೇಕು ಎಂದರು.
ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಹೊರಕೇರಿ ಮಾತನಾಡಿ, ಸದಸ್ಯರ ಬೇಡಿಕೆ ಹಾಗೂ ಆರ್ಥಿಕ ಸಹಾಯ, ಸಹಕಾರ ನೀಡುವುದಕ್ಕಾಗಿ ಸಹಕಾರಿ ಸಂಸ್ಥೆಗಳು ಬೆಳೆಯುತ್ತಿವೆ. ಆದರೆ ಕೇಂದ್ರ ಸರಕಾರದವರು ಸಹಕಾರಿ ಸಂಸ್ಥೆಗಳ ಮೇಲೆ ಗದಾ ಪ್ರಹಾರ ಮಾಡುತ್ತಿದ್ದು, ಈ ಕುರಿತು ಎಲ್ಲರು ಜಾಗೃತಗೊಳ್ಳಬೇಕು ಎಂದರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ನಿರ್ದೇಶಕ ಎಂ.ಬಿ. ಕಲಾಲ ಮಾತನಾಡಿ, ಇತ್ತೀಚಿನ ಕಾನೂನು ತಿದ್ದುಪಡಿಗಳಿಂದ ಸಹಕಾರಿ ಸಂಸ್ಥೆಗಳು ನೆಲಕಚ್ಚುತ್ತಿವೆ. ಇಂದಿನ ಕಾನೂನುಗಳನ್ನು ನೋಡಿದರೇ ಭಯವಾಗುತ್ತದೆ. ಆದ್ದರಿಂದ ಕೇಂದ್ರ ಸರಕಾರ ಸಹಕಾರಿ ಸಂಸ್ಥೆಗಳ ಕಾನೂನಿನಲ್ಲಿ ತಿದ್ದುಪಡಿ ಮಾಡಿರುವುದರಲ್ಲಿ ಪರಿಶೀಲನೆ ಮಾಡುವ ಮೂಲಕ ಆದಾಯ ಇಲಾಖೆಯಿಂದ ಮುಕ್ತಗೊಳಿಸಬೇಕೆಂದರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಸಹ ಪ್ರಧಾನ ವ್ಯವಸ್ಥಾಪಕ ಶ್ರೀಕಾಂತ ಬರುವೆ ಹಾಗೂ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿಶೇಷ ತರಬೇತಿ ಹಾಗೂ ಮಾಹಿತಿ ನೀಡಿದರು. ಜಿ.ಎಸ್. ಟೋಪಣ್ಣವರ, ಆರ್.ಎನ್. ದೇಶಪಾಂಡೆ, ಭಾಸ್ಕರ ಹೆಗಡೆ ಕಾಗೇರಿ, ಅಜಯ ಮಾಲೀಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.