ಜ್ವರಪೀಡಿತ ಮಗುವಿನೊಂದಿಗೆ ಆಕ್ಸಿಜನ್ ಟ್ಯಾಂಕ್ ಹೊತ್ತೂಯ್ದ ತಂದೆ
Team Udayavani, Oct 15, 2017, 10:41 AM IST
ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯಿಲ್ಲದೆ ರೋಗಿಯ ಸಂಬಂಧಿಕರೇ ಆಕ್ಸಿಜನ್ ಟ್ಯಾಂಕ್ ಹೊತ್ತುಕೊಂಡು ಜ್ವರದಿಂದ ಬಳಲುತ್ತಿದ್ದ ಮಗುವನ್ನು ಸ್ಕ್ಯಾನಿಂಗ್‌ಗೆ ಕರೆದು ಕೊಂಡು ಹೋಗುತ್ತಿದ್ದ ಘಟನೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ ಎದುರೇ ಕಿಮ್ಸ್ ಆವರಣದಲ್ಲಿ ಶನಿವಾರ ನಡೆಯಿತು.
ತೀವ್ರ ಜ್ವರದಿಂದ ಬಳಲುತ್ತಿದ್ದ ಸವದತ್ತಿ ತಾಲೂಕಿನ ಹೂಲಿ ಗ್ರಾಮದ ಗೌತಮಿ ಸರ್ಪಣ್ಣವರ ಎಂಬ 2 ವರ್ಷದ ಮಗುವನ್ನು ಕಳೆದ ಎರಡು ದಿನಗಳ ಹಿಂದೆ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಶನಿವಾರ ಬೆಳಗ್ಗೆ ವೈದ್ಯರು ಸ್ಕ್ಯಾನಿಂಗ್‌ಗೆ ಸೂಚಿಸಿದ್ದರು. ಆದರೆ, ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಮಗುವಿನ ಸಂಬಂಧಿಕರು ಪರದಾಡುವಂತಾಗಿತ್ತು. ಸಿಬ್ಬಂದಿಯಿಲ್ಲದ ಕಾರಣ ಪಾಲಕರೇ ಕೃತಕ ಉಸಿರಾಟದಲ್ಲಿದ್ದ ಮಗುವನ್ನು ಎತ್ತಿಕೊಂಡು ಆಕ್ಸಿಜನ್ ಟ್ಯಾಂಕ್ ಸಮೇತ ಸ್ಕ್ಯಾನಿಂಗ್ ಮಾಡಿಸಲು ತೆರಳುತ್ತಿದ್ದ ದೃಶ್ಯ ಕಂಡುಬಂತು.
ಘಟನೆ ಕುರಿತು ಮಾಧ್ಯಮಗಳು ಸಚಿವ ಡಾ| ಶರಣ ಪ್ರಕಾಶ ಪಾಟೀಲ ಅವರ ಗಮನ ಸೆಳೆಯುವ ಪ್ರಯತ್ನ ಮಾಡಿದವು. ಮಗು ಕೃತಕ ಉಸಿರಾಟದ ವ್ಯವಸ್ಥೆ ಮೇಲಿದೆ.
ಇಂತಹ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿ ಇಲ್ಲ. ಒಂದು ವೇಳೆ ಮಗುವಿನ ಜೀವಕ್ಕೆ ತೊಂದರೆಯಾದರೆ ಯಾರು ಹೊಣೆ ಎಂದು ಸಚಿವರನ್ನು ಪ್ರಶ್ನಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಸಿಬ್ಬಂದಿ ಇಲ್ಲದ ವೇಳೆ ಸಂಬಂಧಿಕರು ಕರೆದುಕೊಂಡು ಹೋಗುವುದು ಸಹಜ. ಇದನ್ನೇ ದೊಡ್ಡದಾಗಿ ಬಿಂಬಿಸುವುದು ಸರಿಯಲ್ಲ’ ಎಂದರು.
ಈ ಕುರಿತು ಪರಿಶೀಲಿಸುವಂತೆ ಕಿಮ್ಸ್ ನಿರ್ದೇಶಕ ಡಾ| ದತ್ತಾತ್ರೇಯ ಬಂಟ್ ಹಾಗೂ ಆಡಳಿತಾಧಿಕಾರಿ ಬಸವರಾಜ ಸೋಮಣ್ಣನವರ ಅವರಿಗೆ ಸೂಚಿಸಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಿರ್ದೇಶಕ ಡಾ| ದತ್ತಾತ್ರೇಯ ಬಂಟ್, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಆಕ್ಸಿಜನ್ ಟ್ಯಾಂಕ್ ತೆಗೆದುಕೊಂಡು ಹೋಗಲು ಸಿಬ್ಬಂದಿ ವ್ಯವಸ್ಥೆಯಿದೆ. ಈ ಕುರಿತು ಸಿಬ್ಬಂದಿಯನ್ನು ವಿಚಾರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.