ಆರ್‌ಟಿಇ ಬೆನ್ನು ಬಿದ್ದ ಸರಕಾರ
Team Udayavani, Jan 17, 2017, 1:03 PM IST
ಹುಬ್ಬಳ್ಳಿ: ಸರ್ಕಾರ ಜಾರಿಗೆ ತಂದಿರುವ (ಶಿಕ್ಷಣ ಹಕ್ಕು) ಆರ್‌ಟಿಇ ಕಾಯ್ದೆಯಿಂದ ಸರ್ಕಾರಿ ಶಾಲೆಗಳು ಬಂದ್ ಆಗುವ ಸ್ಥಿತಿಗೆ ತಲುಪಿವೆ ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಹೇಳಿದರು. ಹೊಸೂರಿನ ಸರಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರ್‌ಟಿಇ ಬದಲಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಮತ್ತು ಉತ್ತಮ ಶಿಕ್ಷಣ ನೀಡಿದರೆ ಮಕ್ಕಳು ಈ ಶಾಲೆಗಳಿಗೆ ಬರುತ್ತಾರೆ. ಆದರೆ ಸರಕಾರ ಮಾತ್ರ ಆರ್‌ಟಿಇ ಬೆನ್ನು ಬಿದ್ದಿದೆ ಎಂದರು. ಇನ್ನು ಶಾಲೆಗಳಲ್ಲಿ ಇಂದು ಬರೀ ಉದ್ಯೋಗದ ಗುರಿಯನ್ನಷ್ಟೇ ಹೊಂದದೇ, ಸಚ್ಯಾರಿತ್ರ್ಯ ಮತ್ತು ವ್ಯಕ್ತಿತ್ವವಿಕಸನವಾಗುವಂತಹ ಶಿಕ್ಷಣ ನೀಡುವ ಅಗತ್ಯವಿದೆ.
ಆದರೆ, ಟಿವಿ ವಾಹಿನಿಗಳಲ್ಲಿ ವೈಭವೀಕರಿಸಿ ಬಿತ್ತರಿಸಲಾಗುತ್ತಿರುವ ಅಪರಾಧಿ ಮತ್ತು ಲೈಂಗಿಕ ವರದಿಗಳನ್ನು ನೋಡಿ ಮುಗ್ಧ ಮಕ್ಕಳ ಮನಸ್ಸು ಹಾಳಾಗುತ್ತಿದೆ. ಯಾವುದೇ ಸುದ್ದಿಯನ್ನು ಬಿತ್ತರಿಸುವಾಗ ಅದಕ್ಕೊಂದು ಚೌಕಟ್ಟು ಇರುವುದು ಅವಶ್ಯ ಎಂದರು. ಹೊಸೂರು ಸರ್ಕಾರಿ ಪ್ರೌಢಶಾಲಾ ಕಟ್ಟಡ ತುಂಬಾ ಉತ್ತಮ ನಿರ್ಮಿಸಲಾಗಿದೆ.
45 ಲಕ್ಷ ರೂ. ವೆಚ್ಚದಲ್ಲಿ ಕಟ್ಟಲಾಗಿದ್ದು ನಿರ್ಮಾಣ ಹಂತದಲ್ಲಿದ್ದಾಗ ಶಾಲೆಗೆ ಹಲವು ಬಾರಿ ಭೇಟಿ ನೀಡಿದ್ದೇನೆ. ಶಾಲೆಗಳ ಕಟ್ಟಡಗಳು ಯಾವತ್ತೂ ಕಳಪೆಯಿಂದ ಕೂಡಿರಬಾರದು. ಆದರೆ, ನಾಗಶೆಟ್ಟಿ ಕೊಪ್ಪದಲ್ಲಿ ಕಟ್ಟಿರುವ ಸರ್ಕಾರಿ ಶಾಲೆಯ ಕಟ್ಟಡ ತುಂಬಾ ಕಳಪೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಟ್ಟಡದ ನಿರ್ಮಾಣಕ್ಕೆ ಬಳಸಿರುವ ಸಿಮೆಂಟ್, ಕಬ್ಬಿಣ ಎಲ್ಲವೂ ಕಳಪೆಯಾಗಿದ್ದು ಈ ಕುರಿತು ದೂರು ನೀಡಲಾಗುವುದು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕನ್ನಡ ಮಾಧ್ಯಮ ಶಾಲೆಗಳಿಗೆ ಬರುತ್ತಿರುವ ಮಕ್ಕಳ ಗಣನೀಯವಾಗಿ ಕಡಿಮೆಯಾಗಿದೆ. ಇದೇ ರೀತಿ ಮುಂದುವರಿದಲ್ಲಿ 2020ರ ವೇಳೆಗೆ ಶೇ.20ರಷ್ಟು ಕನ್ನಡ ಶಾಲೆಗಳು ಮಾತ್ರ ಉಳಿಯಲಿದ್ದು ಮಿಕ್ಕವೆಲ್ಲ ಬಂದ್ ಆಗಲಿವೆ ಎಂದರು.
ಇದಕ್ಕೆ ಮುಖ್ಯ ಕಾರಣ ಸರಕಾರ ಜಾರಿಗೆ ತಂದಿರುವ ಆರ್‌ಟಿಇ ಕಾನೂನು. ಆರ್‌ಟಿಇ ಜಾರಿಗೆ ತಂದಿರುವ ಸರ್ಕಾರ ಇದಕ್ಕಾಗಿ ಸುಮಾರು 1000 ಕೋಟಿ ಹಣ ಬಳಕೆ ಮಾಡುತ್ತಿದೆ. ಅದೇ ಹಣವನ್ನು ಸರ್ಕಾರಿ ಶಾಲೆಗಳ ಉದ್ಧಾರಕ್ಕಾಗಿ ಉಪಯೋಗಿಸಿದರೆ, ಎಲ್ಲ ಮಕ್ಕಳು ಸರಕಾರಿ ಶಾಲೆಗಳತ್ತ ಬರುತ್ತಾರೆ ಎಂದರು.
ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ತಮ್ಮ ಸಂಪೂರ್ಣ ಶಕ್ತಿಯ ಬಳಕೆ ಮಾಡಿ ಕನ್ನಡ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂದರು. ನಮ್ಮ ನಾಡಿನಲ್ಲಿ ಕನ್ನಡ ಮಾಧ್ಯಮಕ್ಕೆ ಬೆಲೆಯೇ ಇಲ್ಲದಂತಾಗಿದೆ. ಕನ್ನಡ ಉಳಿಸಿ-ಬೆಳೆಸಲು ಶಿಕ್ಷಕರು ಪಾತ್ರ ಬಹುಮುಖ್ಯವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸರಕಾರಿ ಶಾಲೆಗಳು ಮುಂದಾಗಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಉಪಮಹಾಪೌರ ಲಕ್ಷ್ಮೀ ಉಪ್ಪಾರ, ವೇದವ್ಯಾಸ ಕೌಲಗಿ, ಡಿಡಿಪಿಐ ನಾಗೂರ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಲ್. ಹಂಚಾಟಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.