ಆರೋಗ್ಯ ಕಾರ್ಡ್‌ ಅಕ್ರಮ ತಡೆಗೆ ಬಿಗಿ ಕ್ರಮ

Team Udayavani, May 2, 2019, 1:33 PM IST

hub-4

ಬೆಂಗಳೂರು: ‘ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ’ ಕಾರ್ಡ್‌ಗಳ ನಕಲಿ ಸೃಷ್ಟಿ ಹಾಗೂ ವಿತರಣೆಯಲ್ಲಿ ಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್‌ ಜತೆಗೆ ಕುಟುಂಬ ಸದಸ್ಯರಿಗೆ ಬಯೋಮೆಟ್ರಿಕ್‌ ಕಡ್ಡಾಯ ಸೇರಿದಂತೆ ಇನ್ನೂ ಅನೇಕ ಹೊಸ ನಿಯಮಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾರಿಗೆ ತಂದಿದೆ.

ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 32.5 ಲಕ್ಷ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಆದರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರ್ಡ್‌ ವಿತರಣೆಯ ವೇಳೆ ಅವ್ಯವಹಾರ ನಡೆಯುತ್ತಿರುವ ಕುರಿತು ಇಲಾಖೆಗೆ ದೂರುಗಳು ಬಂದಿವೆ. ಪ್ರಮುಖವಾಗಿ ಫೋಟೊ ಸ್ಟುಡಿಯೋಗಳಲ್ಲಿ ನಕಲಿ ಕಾರ್ಡ್‌ ಸೃಷ್ಟಿ, ಮಧ್ಯವರ್ತಿಗಳು ಶೀಘ್ರವಾಗಿ ಕಾರ್ಡ್‌ ಕೊಡಿಸುತ್ತೇನೆ ಎಂದು ದುಪ್ಪಟ್ಟು ಹಣ ವಸೂಲಿ ಮಾಡಿದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವತ್ರಿಕ ಆರೋಗ್ಯ ಯೋಜನೆಯಲ್ಲಿ ಮಧ್ಯವರ್ತಿ ಹಾಗೂ ಸೇವಾ ಕೇಂದ್ರಗಳಲ್ಲಿ ಅಕ್ರಮ ನಡೆಯಬಾರದು ಎಂದು ಕಾರ್ಡ್‌ ವಿತರಿಸುವ ಎಲ್ಲಾ ಹಂತಗಳಲ್ಲೂ ಹೊಸ ನಿಯಮಗಳನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಇಲ್ಲಿಯವರೆಗೂ ಆರೋಗ್ಯ ಕಾರ್ಡ್‌ ಪಡೆಯಲು ಆಧಾರ್‌ ಹಾಗೂ ರೇಷನ್‌ ಕಾರ್ಡ್‌ ಮಾತ್ರ ನೀಡಲು ಸಾರ್ವಜನಿಕರಿಗೆ ಸೂಚಿಸಲಾಗಿತ್ತು. ಆದರೆ, ಇನ್ನು ಮುಂದೆ ಕುಟುಂಬ ಸದಸ್ಯರೆಲ್ಲರೂ ಕಡ್ಡಾಯವಾಗಿ ಬಯೋಮೆಟ್ರಿಕ್‌ ವಿವರಗಳನ್ನು ನೀಡಲೇಬೇಕು. ಇದರ ಜತೆಗೆ ಆಧಾರ್‌-ಒಟಿಪಿ ಹಾಗೂ ಕ್ಯೂಆರ್‌ ಕೋಡ್‌ ಆಧಾರಿತವಾಗಿ ಕಾರ್ಡ್‌ ವಿತರಿಸುವುದನ್ನು ರದ್ದುಗೊಳಿಸಲಾಗಿದೆ. ಇದರಿಂದ ಫ‌ಲಾನುಭವಿಗಳೇ ಹಾಜರಿದ್ದು ಕಾರ್ಡ್‌ ಪಡೆಯಬೇಕಾಗುತ್ತದೆ.

ಆರೋಗ್ಯ ಕಾರ್ಡ್‌ ವಿತರಿಸುವ ಸರ್ಕಾರಿ ಆಸ್ಪತ್ರೆಗಳು, ಸೇವಾ ಸಿಂಧು ಕೇಂದ್ರ, ಬೆಂಗಳೂರು ಒನ್‌ ಹಾಗು ಕರ್ನಾಟಕ ಒನ್‌ ಸಿಬ್ಬಂದಿ ಬಯೋಮೆಟ್ರಿಕ್‌ ದಾಖಲೆಗಳನ್ನು ನೀಡಿ ತಮ್ಮ ಕಚೇರಿ ಪ್ರವೇಶಿಸಲು ಹಾಗೂ ಕಂಪ್ಯೂಟರ್‌ ಬಳಸುವುದನ್ನು ಕಡ್ಡಾಯ ಮಾಡಲಾಗಿದೆ. ಸಿಬ್ಬಂದಿಗೆ ಬಯೋಮೆಟ್ರಿಕ್‌ ಕಡ್ಡಾಯವಾದಾಗ ಅನಧಿಕೃತ ವ್ಯಕ್ತಿ ಅಥವಾ ಏಜೆಂಟ್ರುಗಳು ಕಾರ್ಡ್‌ ತಯಾರಿಕೆ, ವಿತರಣೆಯ ಯಾವುದೇ ಹಂತದಲ್ಲಿ ಅಕ್ರಮ ನಡೆಸಲು ಸಾಧ್ಯವಾಗುವುದಿಲ್ಲ. ಜತೆಗೆ, ಅಧಿಕೃತವಾಗಿ ಕಾರ್ಡ್‌ ವಿತರಿಸುವ ಸಿಬ್ಬಂದಿ ತಾವು ವಿತರಿಸುವ ಕಾರ್ಡ್‌ಗಳಿಗೆ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ.

ಅಲ್ಲದೇ, ಆಸ್ಪತ್ರೆ ಹಾಗೂ ಸೇವಾಕೇಂದ್ರಗಳಲ್ಲಿ ಕಾರ್ಡ್‌ ವಿತರಿಸುವ ಇಲಾಖೆಯ ಸಿಬ್ಬಂದಿ, ಪಾಸ್‌ವರ್ಡ್‌/ಯುಸರ್‌ ಐಡಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವಂತಿಲ್ಲ. ಈ ನಿಟ್ಟಿನಲ್ಲಿ ಕಾರ್ಡ್‌ ವಿತರಣೆಗೆ ಬಳಸಲಾಗುತ್ತಿರುವ ಸಾಫ್ಟ್ವೇರ್‌ನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳು ದಿನದ 24 ಗಂಟೆ ಕಾರ್ಡ್‌ ವಿತರಿಸಬಹುದು. ಆದರೆ, ಬಿ1, ಕೆ1 ಸೇವಾಸಿಂಧು ಕೇಂದ್ರಗಳು ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕಿದೆ.

‘ಸಾರ್ವತ್ರಿಕ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಗುರಿಯಾಗಿದ್ದು, ಕಾರ್ಡ್‌ ವಿತರಣೆಯಲ್ಲಿ ಅಕ್ರಮ ಎಸಗುವ ಅಥವಾ ಶಾಮೀಲಾಗಿರುವ ಮಧ್ಯವರ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದ್ದೇನೆ’ ಎಂದು ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ತಿಳಿಸಿದ್ದಾರೆ. ಇವುಗಳನ್ನು ಮೀರಿ ಯಾವುದೇ ಮಧ್ಯವರ್ತಿಗಳು ಅಥವಾ ಅಕ್ರಮ ಕಂಡು ಬಂದರೆ 104 ಸಹಾಯವಾಣಿಗೆ ಕರೆ ಮಾಡಿ ತಿಳಿಸಬಹುದು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

siddaramaiah

Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್‌ ಹೋರಾಟ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.