ಪಾಲಿಕೆಯಿಂದ ವಾಹನ ಬಾಡಿಗೆ ಬಾಕಿ; ಭರವಸೆಯ ಬೆನ್ನಲ್ಲೇ ಹೋರಾಟ ಅಂತ್ಯ
Team Udayavani, Jun 12, 2019, 9:21 AM IST
ಹುಬ್ಬಳ್ಳಿ: ಜಿಲ್ಲಾ ವಾಹನ ಚಾಲಕರು ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಮಹಾನಗರ ಪಾಲಿಕೆ ಸೇವೆಗೆ ನೀಡಲಾದ ವಾಹನಗಳ ಬಾಡಿಗೆ ಹಣ ಪಾವತಿ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ವಾಹನ ಚಾಲಕರು ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ವಾಹನ ಸೇವೆ ಸ್ಥಗಿತಗೊಳಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಧಿಕಾರಿಗಳ ಭರವಸೆ ಮೇಲೆ ಮಂಗಳವಾರ ಹಿಂಪಡೆಯಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಮಹಾನಗರ ಪಾಲಿಕೆಗೆ ಮಾಸಿಕ ಬಾಡಿಗೆ ಆಧಾರದ ಮೇಲೆ ವಾಹನಗಳನ್ನು ನೀಡಲಾಗಿದ್ದು, ಕಳೆದ ಮೂರ್‍ನಾಲ್ಕು ತಿಂಗಳಿಂದ ವಾಹನಗಳ ಬಾಡಿಗೆ ಹಣ ಸಂದಾಯ ಮಾಡಲಾಗಿಲ್ಲ. ಒಟ್ಟು 38 ವಾಹನಗಳು ಬಾಡಿಗೆ ಆಧಾರಿತ ಸೇವೆ ನೀಡುತ್ತಿದ್ದು, ಸುಮಾರು 30 ಲಕ್ಷ ರೂ. ಹಣ ಪಾವತಿಯಾಗಬೇಕಾಗಿತ್ತು. ಆದರೆ ಕಳೆದ ವಾರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಸ್ಪಂದನೆ ನೀಡಿರಲಿಲ್ಲ. ಆದ್ದರಿಂದ ಸೋಮವಾರದಿಂದ ವಾಹನ ಸಂಚಾರ ಸ್ಥಗಿತಗೊಳಿಸಿ ಹೋರಾಟ ಆರಂಭಿಸಲಾಗಿತ್ತು.
ಮಂಗಳವಾರ ಮಧ್ಯಾಹ್ನ ಪಾಲಿಕೆ ಉಪ ಆಯುಕ್ತ ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸಂಜೆಯೊಳಗೆ ಬಾಕಿ ಇರುವ ಹಣ ಸಂದಾಯ ಮಾಡಲಾಗುವುದು ಪ್ರತಿಭಟನೆ ಹಿಂಪಡೆಯಿರಿ ಎಂದು ಮೌಖೀಕವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಹಿಂಪಡೆಯಲಾಗಿದೆ. ಪ್ರೇಮನಾಥ ಚಿಕ್ಕತುಂಬಳ, ಸತೀಶ ಬಳ್ಳಾರಿ, ಬಸಪ್ಪ ದೊಡ್ಡಮನಿ, ಪರಶುರಾಮ ಸೋನಿಕರ, ಹನುಮಂತ, ಈರಪ್ಪ ಜೋಗಿ, ಪ್ರಕಾಶ ಅತ್ತಿಗೇರಿ, ಅಶೋಕ ಲಮಾಣಿ, ರವಿ ವಗ್ಗರ, ಶ್ರೀನಿವಾಸ ಹಿರೇಮನಿ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.