ಭಾರತ ಮಾಲಾ ಯೋಜನೆಯಲ್ಲಿ ಉ.ಕ.ಕ್ಕೆ ಅನ್ಯಾಯ


Team Udayavani, Oct 29, 2017, 12:37 PM IST

h5-konareddy.jpg

ಹುಬ್ಬಳ್ಳಿ: ಕೇಂದ್ರ ಸರಕಾರವು ಭಾರತ ಮಾಲಾ ಯೋಜನೆಯಡಿ ದೇಶಾದ್ಯಂತ ಬೈಪಾಸ್‌ ರಸ್ತೆ, ರಿಂಗ್‌ ರಸ್ತೆ ನಿರ್ಮಿಸಲು ಮುಂದಾಗಿದೆ. ಆದರೆ, ಹು-ಧಾ ಅವಳಿ ನಗರ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲಾ, ರಾಜ್ಯ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಯೋಜನೆಯಡಿ ಘೋಷಿಸದೆ ಅನ್ಯಾಯವೆಸಗಿದೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. 

ಭಾರತ ಮಾಲಾ ಯೋಜನೆಯಡಿ ಉತ್ತರ ಕರ್ನಾಟಕದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುವುದು. ಆ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲು ಅವಕಾಶ ಕೋರಲಾಗುವುದು.

ಯೋಜನೆ ಬಗ್ಗೆ ಈ ಭಾಗದ ಸಂಸದರಿಗೆ ಹಾಗೂ ರಾಜ್ಯ ಸರಕಾರಕ್ಕೆ ಮಾಹಿತಿ ಇದೆಯೋ, ಇಲ್ಲವೋ ಗೊತ್ತಾಗುತ್ತಿಲ್ಲವೆಂದು ಕುಟುಕಿದರು. ಇನ್ನಾದರೂ ಈ ಭಾಗದ ಸಂಸದರು ಹಾಗೂ ರಾಜ್ಯ ಸರಕಾರವು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಭಾರತ ಮಾಲಾ ಯೋಜನೆಯಡಿ ಉತ್ತರ ಕರ್ನಾಟಕದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಬೇಕು.

ವಿಶೇಷ ಆರ್ಥಿಕ ವಲಯದಲ್ಲಿ ಬರುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಕುಸುಗಲ್ಲ-ಬ್ಯಾಹಟ್ಟಿ- ತಿರ್ಲಾಪುರ-ಅಳಗವಾಡಿ-ನರಗುಂದ ವರೆಗೆ ಹಾಗೂ ನವಲಗುಂದ-ನಲವಡಿ ಎರಡು ರಾಷ್ಟ್ರೀಯ ಹೆದ್ದಾರಿಗೆ ಸೇರುವ ರಸ್ತೆಯಾಗಿದೆ. 

ಧಾರವಾಡದಿಂದ ರಾಮನಗರ-ಗೋವಾ ವರೆಗೆ, ನವಲಗುಂದದಿಂದ ಸವದತ್ತಿ-ಬೈಲಹೊಂಗಲ- ಬೆಳಗಾವಿವರೆಗೆ, ನರಗುಂದ-ಶಲವಡಿ-ಗದಗ, ಗದಗ-ಬಂಕಾಪುರ-ಶಿರಸಿ, ಹುಬ್ಬಳ್ಳಿ-ಲಕ್ಷ್ಮೇಶ್ವರ, ನವಲಗುಂದ-ರೋಣ-ರಾಯಚೂರು ವರೆಗೆ ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿದರು. 

ನಗರದ ಹೊರವಲಯದಲ್ಲಿ ಕಾರವಾರ-ಹುಬ್ಬಳ್ಳಿ ರಸ್ತೆ, ಪುನಾ-ಬೆಂಗಳೂರು ರಸ್ತೆ ಮತ್ತು ಗದಗ ರಸ್ತೆ, ಹುಬ್ಬಳ್ಳಿ-ವಿಜಯಪುರ ರಸ್ತೆಯಿಂದ ಸುಳ್ಳ ಮಾರ್ಗವಾಗಿ ಧಾರವಾಡ-ನರೇಂದ್ರ ರಾಷ್ಟ್ರೀಯ ಹೆದ್ದಾರಿವರೆಗೆ ಬೈಪಾಸ್‌ ನಿರ್ಮಾಣ ಬಾಕಿಯಿದೆ.

ತಡಸ, ಕಲಘಟಗಿ, ಧಾರವಾಡ, ಹೆಬಸೂರ, ನವಲಗುಂದ, ಅಣ್ಣಿಗೇರಿ ವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯೆಂದು ಘೋಷಣೆಯಾಗಿದೆ. ಆದರೆ ಈವರೆಗೆ ಅದರ ಡಿಪಿಆರ್‌ ಸಿದ್ಧಪಡಿಸುವ ಕಾರ್ಯ ಪೂರ್ಣಗೊಂಡಿಲ್ಲ. ನವಲಗುಂದ, ನರಗುಂದ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಡಿಪಿಆರ್‌ ತಯಾರಿಸಿ ಎರಡು ವರ್ಷಗಳು ಕಳೆದರೂ ಇದುವರೆಗೆ ಕಾಮಗಾರಿ ಆರಂಭಗೊಂಡಿಲ್ಲವೆಂದರು. 

ಧಾರವಾಡ ಜಿಲ್ಲೆಗೆ 429 ಕೋಟಿ ರೂ. ಸಿಆರ್‌ ಎಫ್ ಅನುದಾನ ಮಂಜೂರಾಗಿದ್ದರೂ ಎಲ್ಲ ತಾಲೂಕುಗಳಿಗೆ ಸಮನಾಗಿ ಹಂಚಿಕೆ ಮಾಡಿಲ್ಲ. ನವಲಗುಂದ ತಾಲೂಕಿಗೆ ಕೇವಲ 20 ಕೋಟಿ ರೂ. ನೀಡಲಾಗಿದೆ. ಎಲ್ಲ ತಾಲೂಕುಗಳಿಗೆ  ಕನಿಷ್ಠ 50 ಕೋಟಿ ರೂ. ಕೊಡಬೇಕು ಎಂದು ಆಗ್ರಹಿಸಿದರು. ಬಿ.ಬಿ. ಗಂಗಾಧರಮಠ, ಶಿವಣ್ಣ ಹುಬ್ಬಳ್ಳಿ, ವಿಕಾಸ ಸೊಪ್ಪಿನ ಇತರರಿದ್ದರು. 

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.