ಉದ್ಘಾಟನೆಗೆ ತೋರಿದ ಆಸಕ್ತಿ ಬಳಕೆಗಿಲ್ಲ!
•ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾದ ಗೋದಾಮು•ಮೂರು ವರ್ಷದಿಂದಲೂ ಖಾಲಿ ಖಾಲಿ
Team Udayavani, Jul 23, 2019, 9:20 AM IST
ಹುಬ್ಬಳ್ಳಿ: ರೈತರ ಹಾಗೂ ವ್ಯಾಪಾರಿಗಳ ಅನುಕೂಲಕ್ಕಾಗಿ ಇಲ್ಲಿನ ಎಪಿಎಂಸಿ ಆವರಣದಲ್ಲಿ ಗೋದಾಮುಗಳನ್ನು ನಿರ್ಮಿಸಲಾಗಿದೆ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಉದ್ಘಾಟನೆಗೊಂಡು ಮೂರು ವರ್ಷ ಕಳೆಯುತ್ತಿದ್ದರೂ ಸದ್ಬಳಕೆಯಾಗುತ್ತಿಲ್ಲ.
ರೈತರು ಬೆಳೆದ ಬೆಳೆಯನ್ನು ದಾಸ್ತಾನು ಮಾಡಿ ಉತ್ತಮ ಬೆಲೆ ಬಂದಾಗ ಮಾರಾಟ ಮಾಡುವುದು ಹಾಗೂ ರೈತರಿಗೆ ಆರ್ಥಿಕ ಸದೃಢತೆ ತಂದುಕೊಡುವ ನಿಟ್ಟಿನಲ್ಲಿ ಇಲ್ಲಿನ ಅಮರಗೋಳ ಎಪಿಎಂಸಿ ಆವರಣದಲ್ಲಿ ಎರಡು ವಿಶಾಲವಾದ ಗೋದಾಮುಗಳನ್ನು ನಿರ್ಮಿಸಲಾಗಿದೆ. ಕೇಂದ್ರ ಸರಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಗೋದಾಮುಗಳು ತಲೆಯೆತ್ತಿವೆ. 2016ರಲ್ಲಿ ಅದ್ಧೂರಿಯಾಗಿ ಉದ್ಘಾಟನೆ ಕೂಡ ಮಾಡಲಾಗಿತ್ತು. ನಿರ್ಮಾಣ ಹಾಗೂ ಉದ್ಘಾಟನೆಗೆ ತೋರಿದ ಆಸಕ್ತಿ ಸದ್ಭಳಕೆ ಮಾಡುಕೊಳ್ಳುವಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲದಿರುವ ಪರಿಣಾಮ ಕೋಟ್ಯಂತರ ರೂ. ವೆಚ್ಚ ಮಾಡಿದ ಯೋಜನೆ ಸಾಕಾರಗೊಳ್ಳದಂತಾಗಿದೆ.
ಗೋದಾಮುಗಳ ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮಕ್ಕೆ ವಹಿಸಲಾಗಿದೆ. ಸುಮಾರು 6350 ಮೆಟ್ರಿಕ್ ಟನ್ ಸಾಮರ್ಥ್ಯದ 49 ಸಾವಿರ ಚದರ ಅಡಿ ವಿಸ್ತೀರ್ಣದ ಎರಡು ಗೋದಾಮುಗಳು, ಕಚೇರಿ, ಪ್ರಯೋಗಾಲಯ, ಕ್ಯಾಂಟೀನ್, ಉಗ್ರಾಣ, ಶೌಚಾಲಯ ಸೇರಿದಂತೆ ಇತರೆ ಎಲ್ಲ ಸೌಲಭ್ಯಗಳಿವೆ.
ಖಾಲಿಯಿರುವ ಗೋದಾಮುಗಳನ್ನು ಬಾಡಿಗೆ ಕೊಡುವ ನಿಟ್ಟಿನಲ್ಲಿ ನಿಗಮದಿಂದ ಸಾಕಷ್ಟು ಪ್ರಯತ್ನ ನಡೆದಿದೆ. ಕೆಲ ಸಂಸ್ಥೆಯವರು ನೋಡಿಕೊಂಡು ಹೋಗಿದ್ದಾರೆ. ಆದರೆ ಯಾರೂ ಮುಂದೆ ಬರುತ್ತಿಲ್ಲ. ಗೋದಾಮುಗಳು ದೊಡ್ಡದಾಗಿವೆ ಎನ್ನುವ ಕಾರಣಕ್ಕಾಗಿಯೋ ಅಥವಾ ಬಾಡಿಗೆ ಹೆಚ್ಚಾಗುತ್ತಿದೆ ಎನ್ನುವ ಕಾರಣಕ್ಕಾಗಿ ಹಿಂದೇಟು ಹಾಕುತ್ತಿದ್ದಾರೋ ಗೊತ್ತಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.