ಪರ್ಯಾಯ ವ್ಯವಸ್ಥೆ ನಂತರವೇ ಜನತಾ ಬಜಾರ್ ಅಭಿವೃದ್ಧಿ
Team Udayavani, Nov 15, 2017, 12:18 PM IST
ಹುಬ್ಬಳ್ಳಿ: ಜನತಾ ಬಜಾರ್‌ನಲ್ಲಿ ವ್ಯಾಪಾರ ಮಾಡುವವರಿಗೆ ಬೇರೆಡೆ ವ್ಯಾಪಾರಕ್ಕೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದ ನಂತರವೇ ಜನತಾ ಬಜಾರ್ ಅಭಿವೃದ್ಧಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು.
ಜನತಾ ಬಜಾರ್‌ನಲ್ಲಿ ಮಂಗಳವಾರ ನಡೆದ ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಜೂರಾತಿ ಪಡೆದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ವ್ಯಾಪಾರಸ್ಥರು ಹಾಗೂ ನಾಗರಿಕರೊಂದಿಗಿನ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.
ವ್ಯಾಪಾರಸ್ಥರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲಾಗುವುದಾಗಿ ಬೇಕಾದರೆ ಬಾಂಡ್‌ನಲ್ಲಿ ಬರೆದುಕೊಡುತ್ತೇನೆ. ವ್ಯಾಪಾರಸ್ಥರನ್ನು ಅತಂತ್ರರನ್ನಾಗಿ ಮಾಡುವುದಿಲ್ಲ. ನಗರದಲ್ಲಿ 2-3 ಜಾಗಗಳನ್ನು ಗುರುತಿಸಲಾಗಿದ್ದು, ಅಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದರು.
ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ಅಭಿವೃದ್ಧಿ ಯೋಜನೆಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ವ್ಯಾಪಾರಸ್ಥರಿಗೆ ಸಮರ್ಪಕ ಸೌಲಭ್ಯ ಕಲ್ಪಿಸಿದ ನಂತರವೇ ಇಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನದ ಜವಾಬ್ದಾರಿ ವಹಿಸಿಕೊಂಡಿರುವ ಪಿಡಬುಸಿ ಸಂಸ್ಥೆಯ ಸಿಟಿ ಪ್ಲಾನರ್ ಮನದೀಪ್ ಸಿಂಗ್ ಮಾತನಾಡಿ, ಜನತಾ ಬಜಾರ್ 2021 ಚ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು 18 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ ಅಭಿವೃದ್ಧಿ ಪಡಿಸಲಾಗುತ್ತದೆ.
ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆದು ಬೇಡಿಕೆಗಳಿಗೆ ಅನುಗುಣವಾಗಿ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗುವುದು ಎಂದರು. 18ರಿಂದ 24 ತಿಂಗಳುಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು. ಈ ಭಾಗದಲ್ಲಿ ಮರಳಿನ ಕೊರತೆಯಿದೆ ಎಂಬುದು ನಮಗೆ ತಿಳಿದಿದ್ದು,
ಆದರೆ ಫ್ಲೈ ಆ್ಯಶ್ ಬಳಕೆ ಸೇರಿದಂತೆ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು. ವ್ಯಾಪಾರಿ ಫಕೀರಪ್ಪ ಮಾತನಾಡಿ, ನಾನು 20 ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ನಿರ್ವಹಣೆ ಮಾಡಿಕೊಳ್ಳುತ್ತಿದ್ದೇವೆ.
ನಮ್ಮನ್ನು ಅತಂತ್ರರನ್ನಾಗಿಸಿದರೆ ಬೀದಿಗೆ ಬರುವುದರಲ್ಲಿ ಸಂಶಯವಿಲ್ಲ. ನಮಗೆ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಪಿಡಬುಆರ್ ಕಂಪನಿಯ ವ್ಯವಸ್ಥಾಪಕ ಶಾಂತನು ಸೇನ್, ಜಿ.ಎಚ್. ನರೇಗಲ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.