ಸಾಹಿತ್ಯ ಲೋಕಕ್ಕೆ ಕಾರ್ಪೋರೇಟ್‌ ಮಂದಿ


Team Udayavani, Jan 21, 2017, 12:30 PM IST

hub2.jpg

ಧಾರವಾಡ: ಕಾರ್ಪೋರೇಟ್‌ ಜಗತ್ತಿನಲ್ಲಿ ಕೆಲಸ ಮಾಡುವ ಅನೇಕರು ಸಾಹಿತ್ಯ ಲೋಕಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈ ವಿಚಾರ ಇಂದು ಚರ್ಚೆಗೆ ಗ್ರಾಸವಾಗಿ ಪರ ವಿರೋಧ ಚರ್ಚೆ ನಡೆಯುತ್ತಿದೆ ಎಂದು ನಾಡೋಜ ಡಾ| ಕೆ.ಎಸ್‌.ನಿಸಾರ್‌ ಅಹಮದ್‌ ಅಭಿಪ್ರಾಯಪಟ್ಟರು. ಇಲ್ಲಿನ ಕವಿವಿಯ ಸುವರ್ಣ ಮಹೋತ್ಸವ ಭವನದಲ್ಲಿ ಶುಕ್ರವಾರ ಆರಂಭಗೊಂಡ “ಧಾರವಾಡ ಸಾಹಿತ್ಯ ಸಂಭ್ರಮ-2017’ನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಕಾರ್ಪೋರೇಟ್‌ ಜಗತ್ತಿನಲ್ಲಿ ಕೆಲಸ ಮಾಡುವ ಸಾಹಿತಿಗಳು ಹೊಟ್ಟೆ ತುಂಬಿದವರು. ಅವರಿಗೆ ಹಣ ಹೆಚ್ಚಾಗಿದ್ದು, ಕೀರ್ತಿ ಪಡೆಯುವುದಕ್ಕೆ ಸಾಹಿತ್ಯ ಲೋಕಕ್ಕೆ ಬರುತ್ತಿದ್ದಾರೆ. ಅವರಿಂದ ಕನ್ನಡದ ಪಾವಿತ್ರ ಹಾಳಾಗುತ್ತದೆ ಎಂಬ ಆರೋಪಗಳಿವೆ. ಆದರೆ ಅವು ಏಕಪಕ್ಷೀಯವಾಗಿವೆ ಎಂದರು. ಕಾರ್ಪೋರೇಟ್‌ ಜಗತ್ತಿನಲ್ಲಿರುವವರೇನು ಹುಟ್ಟಾ ಶ್ರೀಮಂತರಲ್ಲ. ಅವರು ಕೂಡ ರೈತರು, ಬಡವರ ಮತ್ತು ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು.

ಅವರಿಗೆ ಕಾರ್ಪೋರೇಟ್‌ಲೋಕದ ಜೊತೆಗೆ ತಮ್ಮ ಬಾಲ್ಯ, ಬದುಕಿನ ಆಸಕ್ತಿ ಹೆಚ್ಚಿ ಅದನ್ನು ಅಕ್ಷರ ರೂಪಕ್ಕೆ ತರುವ  ಯತ್ನದಲ್ಲಿದ್ದಾರೆ. ಹೀಗಾಗಿ ಕನ್ನಡ ಸಾಹಿತ್ಯವನ್ನು ಯಾರು ಬರೆಯಬೇಕು? ಅಥವಾ ಯಾರುಬರೆಯಬಾರದು ? ಎನ್ನುವುದನ್ನು ಯಾರೂ ನಿರ್ಧರಿಸದೇ, ಕನ್ನಡ ಸಾಹಿತ್ಯವನ್ನು ಸಿರಿವಂತ ಮಾಡುವ ಎಲ್ಲ ಬರವಣಿಗೆಗಳನ್ನು ನಾವು ಇಂದು ಸ್ವೀಕರಿಸಬೇಕಿದೆ ಎಂದರು. 

ಕನ್ನಡದ ಕೆಲವಷ್ಟು ಸಂಸ್ಥೆಗಳು ಕನ್ನಡ ಕಟ್ಟುವ ಕೆಲಸ ಮಾಡಿದರೆ ಇನ್ನೂ ಕೆಲವಷ್ಟು ಅನುದಾನಕ್ಕಾಗಿ ಕೆಲಸ ಮಾಡುತ್ತಿವೆ. ಕನ್ನಡ ಮತ್ತು ಸಾಹಿತ್ಯದ ಕಾರ್ಯಕ್ರಮಗಳು ಎಂದರೆ ಮನರಂಜನೆ ಕಾರ್ಯಕ್ರಮಗಳಾಗದೇ ಕನ್ನಡ ಕಟ್ಟುವ ಕಾರ್ಯಕ್ರಮಗಳಾಗಬೇಕು. ಅಂಥ ಸಂಸ್ಥೆಗಳು ಬೆಳೆಯಬೇಕಿದೆ ಎಂದು ಸಲಹೆ ನೀಡಿದರು. 

ಯಶಸ್ವಿ 5ನೇ ವರ್ಷ: ಪ್ರಾಸ್ತಾವಿಕ ಮಾತನಾಡಿದ ಸಾಹಿತ್ಯ ಸಂಭ್ರಮ ಸಂಘಟಕ ಡಾ|ಗಿರಡ್ಡಿ ಗೋವಿಂದರಾಜ್‌, ಸಾಹಿತ್ಯ ಸಂಭ್ರಮ ಯಶಸ್ವಿಯಾಗಿ ಇದೀಗ 5ನೇ ವರ್ಷಕ್ಕೆ ಕಾಲಿಟ್ಟಿದೆ. ಈ ವೇದಿಕೆ ಮೂಲಕ ಕೇವಲ ಸಾಹಿತ್ಯ ವಿಚಾರಗಳು ಮಾತ್ರವಲ್ಲ, ನಾಡು-ನುಡಿಯ ವಿಚಾರಗಳು ಚರ್ಚೆಯಾಗಲಿ ಎನ್ನುವುದು ನಮ್ಮ ಆಶಯ. ಅದಕ್ಕಾಗಿಯೇ ಈ ವರ್ಷ ರಾಷ್ಟ್ರೀಯ ಜಲ ನೀತಿ ಎನ್ನುವ ಗೋಷ್ಠಿ ಸೇರಿಸಲಾಗಿದೆ.

ಸಾಕಷ್ಟು ಜನರು ಸಂಭ್ರಮದ ಬೆಂಬಲಕ್ಕೆ ನಿಂತಿರುವುದೇ ಇದರ ಯಶಸ್ಸಿಗೆ ಕಾರಣ ಎಂದರು. ಆಶಯ ಭಾಷಣ ಮಾಡಿದ ಕವಿ ಡಾ|ಎಚ್‌.ಎಸ್‌. ವೆಂಕಟೇಶಮೂರ್ತಿ, ಸಾಹಿತ್ಯ ಸಂಭ್ರಮದ ವೇದಿಕೆ ಯಾವುದೇ ಜಾತಿ, ಧರ್ಮ, ಪ್ರಾದೇಶಿಕತೆ, ಸಿದ್ಧಾಂತ ಎಲ್ಲವನ್ನೂ ಮೀರಿ ಬೆಳೆದು ನಿಂತಿದೆ. ಸಿದ್ಧಾಂತಗಳ ಪ್ರತಿಪಾದಕರು ಮುಖಾಮುಖೀಯಾದಾಗ ಮಾತ್ರ ಸಾಹಿತ್ಯ ಮಂಥನ ಸಾಧ್ಯ ಎಂದರು.  

ಕವನ ವಾಚನ: ಸಾಹಿತ್ಯ ಸಂಭ್ರಮ ಉದ್ಘಾಟಿಸಿದ ನಾಡೋಜ ಕವಿ ಡಾ|ಕೆ.ಎಸ್‌.ನಿಸಾರ್‌ ಅಹಮದ್‌ ಸಾಹಿತ್ಯಾಸಕ್ತರ ಒತ್ತಾಸೆಗೆ ಮಣಿದು ತಾವು ಬರೆದ, ರಾಮನ್‌ ಸತ್ತ ಸುದ್ದಿ ಮತ್ತು ನಿಮ್ಮೊಡನಿದ್ದು ನಿಮ್ಮಂತಾಗದೇ ಎನ್ನುವ ಕವನ ವಾಚನ ಮಾಡಿ ಗಮನ ಸೆಳೆದರು.

ಅಷ್ಟೇಯಲ್ಲ, ಧಾರವಾಡದೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡರು. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಮಾತನಾಡಿ, ವಿಶ್ವದ ಅನೇಕ ಕಡೆಗಳಲ್ಲಿ ಇಂದು ಸಾಹಿತ್ಯ ಕುರಿತು ಸಮ್ಮೇಳನಗಳು ನಡೆಯುತ್ತಿವೆ. ಅದೇ ಮಾದರಿಯಲ್ಲಿ ಧಾರವಾಡ ಸಾಹಿತ್ಯ ಸಂಭ್ರಮ ನಡೆಯುತ್ತಿರುವುದು ಅಭಿನಂದನಾರ್ಹ ಕೆಲಸವಾಗಿದೆ ಎಂದರು. 

ನಾಡೋಜ ಚೆನ್ನವೀರ ಕಣವಿ, ಲೇಖಕಿ ಡಾ| ವೀಣಾ ಶಾಂತೇಶ್ವರ, ಡಾ|ಲೋಹಿತ್‌ ನಾಯ್ಕರ್‌, ಮನೋಹರ ಗ್ರಂಥಮಾಲೆಯ ರಮಾಕಾಂತ ಜೋಶಿ ಉಪಸ್ಥಿತರಿದ್ದರು. ಪಂ|ಮಲ್ಲಿಕಾರ್ಜುನ ಮನ್ಸೂರ್‌ ಸಂಗೀತಶಾಲೆಯ ಮಕ್ಕಳು ನಾಡಗೀತೆ ಹಾಡಿದರು. ಹಾ.ವೆಂ. ಕಾಖಂಡಿಕಿ ನಿರೂಪಿಸಿದರು. 

ಸಂತಾಪ: ಸಾಹಿತ್ಯ ಸಂಭ್ರಮ ಉದ್ಘಾಟನೆಗೂ ಮುನ್ನ, ಕಳೆದ ಒಂದು ವರ್ಷದಲ್ಲಿ ನಿಧನರಾದ ನಾಡಿನ ಹಿರಿಯ ಸಾಹಿತಿಗಳು, ನಾಟಕಕಾರರು ಮತ್ತು ಸಾಂಸ್ಕೃತಿಕ ಲೋಕಕ್ಕೆ ಶ್ರಮಿಸಿದ ಗಣ್ಯರಿಗೆ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

ಪುಸ್ತಕ ಮಳಿಗೆ ಉದ್ಘಾಟನೆ: ಸಾಹಿತ್ಯ ಸಂಭ್ರಮದ ಅಂಗವಾಗಿ ಸುವರ್ಣ ಮಹೋತ್ಸವ ಭವನದ ಎದುರು  ಸ್ಥಾಪಿಸಿರುವ ಪುಸ್ತಕ ಮಳಿಗೆಗಳನ್ನು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಉದ್ಘಾಟಿಸಿದರು. ಕವಿ ಎಚ್‌.ಎಸ್‌. ವೆಂಕಟೇಶಮೂರ್ತಿ ಪತ್ರಗಳ ಪ್ರದರ್ಶನ ಉದ್ಘಾಟಿಸಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.