ಅವಳಿ ನಗರಕ್ಕೆ ಎರಡೇ ಆಧಾರಸ್ತಂಭ!


Team Udayavani, Sep 18, 2017, 1:21 PM IST

hub1.jpg

ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರತಿಯೊಂದು ಸೇವೆ ಹಾಗೂ ಸೌಲಭ್ಯಕ್ಕೆ ಆಧಾರ್‌ ಕಾರ್ಡ್‌ ಕಡ್ಡಾಯಗೊಳಿಸಿವೆ. ಆದರೆ, ಸಾರ್ವಜನಿಕರಿಗೆ ಸುಲಭವಾಗಿ ಕಾರ್ಡ್‌ ಪಡೆಯವ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಮಹಾನಗರ ಪಾಲಿಕೆಯ ಹುಬ್ಬಳ್ಳಿ-ಧಾರವಾಡ ಒನ್‌ 11 ಕೇಂದ್ರಗಳಿದ್ದು, ಅದರಲ್ಲಿ ಕೇವಲ ಎರಡು ಕೇಂದ್ರಗಳು ಮಾತ್ರ ಕಾರ್ಡ್‌ ನೀಡಿಕೆ ಕಾರ್ಯ ಮಾಡುತ್ತಿದ್ದು, ಜನ ಸರದಿಯಲ್ಲಿ ಗಂಟೆಗಟ್ಟಲೆ ನಿಲ್ಲುವಂತಾಗಿದೆ. 

ಪ್ರಸ್ತುತ ಹುಬ್ಬಳ್ಳಿಯ ವಿಜಯನಗರ ಹಾಗೂ ಧಾರವಾಡದ ಕಲಾಭವನದ ಹು-ಧಾ ಒನ್‌ ಕೇಂದ್ರಗಳಲ್ಲಿ ಮಾತ್ರ ಆಧಾರ ಕಾರ್ಡ್‌ ನೀಡಲಾಗುತ್ತದೆ. ಇನ್ನುಳಿದ ಶಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಆಧಾರ ಕಾರ್ಡ್‌ ಪ್ರಕ್ರಿಯೆ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ. ಅವಳಿನಗರ ಹಾಗೂ ಸುತ್ತಲಿನ ಗ್ರಾಮೀಣ ಭಾಗದ ಜನರು ಸಹ ಆಧಾರ್‌ ಕಾರ್ಡ್‌ಗಳನ್ನು ಪಡೆಯಲು ಇದೇ ಎರಡು ಕೇಂದ್ರಗಳನ್ನು ಅವಲಂಬಿಸಬೇಕಾಗಿದೆ. 

ಪ್ರತಿ ಕೇಂದ್ರದಲ್ಲಿ ನಿತ್ಯ 40 ಆಧಾರ್‌ ಕಾರ್ಡ್‌ ನೀಡಿಕೆ ಹಾಗೂ ತಿದ್ದುಪಡಿ ಮಾತ್ರ ಮಾಡಲಾಗುತ್ತದೆ. ಇದರ ನಂತರ ಮತ್ತೆ ಯಾರಾದರೂ ಬಂದರೆ ಅವರು ನಂತರದ ದಿನದಲ್ಲಿ ಮುಂಚಿತವಾಗಿ ಬಂದು ಆಧಾರ್‌ಕಾರ್ಡ್‌ ಅರ್ಜಿ ಪಡೆದು ಸರದಿಯಲ್ಲಿ ನಿಂತು ಆಧಾರ್‌ ನೋಂದಣಿ ಮಾಡಿಸಬೇಕಾದ ಪರಿಸ್ಥಿತಿ ಇದೆ. 

ಸಮಸ್ಯೆ ಎಲ್ಲಿ-ಏತಕ್ಕೆ: ಇದು ಕೇವಲ ಹುಬ್ಬಳ್ಳಿ-ಧಾರವಾಡದ ಸಮಸ್ಯೆಯಲ್ಲ. ಇಡೀ ದೇಶದಲ್ಲಿಯೇ ಈ ಸಮಸ್ಯೆ ಇದೆ. ಅವಳಿನಗರದಲ್ಲಿರುವ ಎಲ್ಲ ಹು-ಧಾ ಒನ್‌ ಕೇಂದ್ರದಲ್ಲಿ ಆಧಾರ್‌ ಕಾರ್ಡ್‌ ಕೌಂಟರ್‌ ಆರಂಭಕ್ಕೆ ತಜ್ಞ ಸಿಬ್ಬಂದಿ ಅವಶ್ಯ. ಅದಕ್ಕಾಗಿ ಯುಐಡಿಯಿಂದ ನಡೆಯುವ ತರಬೇತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಿಬ್ಬಂದಿ ಬೇಕು. 

ಅವಳಿನಗರದಿಂದ ಸುಮಾರು 44 ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆ ಎದುರಿಸಿದ್ದು, ಸಿಬ್ಬಂದಿ ನೇಮಕ ಯಾವಾಗ ಎಂಬ ಪ್ರಶ್ನೆಗೆ ಉತ್ತರ ದೊರೆತಿಲ್ಲ. ಸಂಬಂಧಿಸಿದ ಇಲಾಖೆ ಕೂಡಲೇ ನೇಮಕಾತಿ ನಡೆಸಿ ಅವಳಿನಗರದಲ್ಲಿ ಆಧಾರ ಕಾರ್ಡ್‌ಗೆ ಆಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. 

* ಬಸವರಾಜ ಹೂಗಾರ

ಟಾಪ್ ನ್ಯೂಸ್

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.