ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ; ಮಾಜಿ ಸಿಎಂ ಬೊಮ್ಮಾಯಿ
Team Udayavani, Jun 18, 2023, 3:48 PM IST
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗಳ ಬಗ್ಗೆ ನಡೆದು ಕೊಳ್ಳುತ್ತಿರುವುದನ್ನು ನೋಡಿದರೆ ಈ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಛಬ್ಬಿ ಗ್ರಾಮದಲ್ಲಿ ರವಿವಾರ ನೂತನ ಪ್ರೌಢಶಾಲೆ ಕಟ್ಟಡದ ಭೂಮಿಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತೆಗೆದುಕೊಂಡು ಏನು ಮಾಡಬೇಕು ಎಂದರು.
ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟುನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಈಗ ಛತ್ತೀಸ್ ಗಢದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಏನೆಯಾದರು ಬಡ ಜನರಿಗೆ ಒಳ್ಳೆಯದಾದರೆ ಸಾಕು ನಮಗೆ ಎಂದರು.
ಅಕ್ಕಿ ಎಲ್ಲಿಂದ ಹಾಗೂ ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.
ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.