ಶುದ್ಧ ಕುಡಿಯುವ ನೀರಿನ ಸಮಸ್ಯೆ
ಕೋನರೆಡ್ಡಿ ನೇತೃತ್ವದ ನಿಯೋಗದಿಂದ ಡಿಸಿ-ಜಿಪಂ ಸಿಇಒಗೆ ಮನವಿ
Team Udayavani, May 21, 2020, 9:30 AM IST
ಧಾರವಾಡ: ನವಲಗುಂದ ತಾಲೂಕಿನ ಮೊರಬ, ಶಿರಕೋಳ ಗ್ರಾಪಂ ವ್ಯಾಪ್ತಿಯ ಮೊರಬ, ಶಿರಕೋಳ, ತಲೆಮೊರಬ, ಹಣಸಿ ಹಾಗೂ ಬ್ಯಾಲ್ಯಾಳ ಗ್ರಾಮಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ನೇತೃತ್ವದ ನಿಯೋಗ ಬುಧವಾರ ಮನವಿ ಸಲ್ಲಿಸಿತು.
ನಗರದ ಡಿಸಿ ಕಚೇರಿಯಲ್ಲಿ ಡಿಸಿ ದೀಪಾ ಚೋಳನ್ ಹಾಗೂ ಜಿಪಂ ಸಿಇಒ ಡಾ|ಸತೀಶ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದ ನಿಯೋಗ ಮೊರಬ ಹಾಗೂ ಶಿರಕೋಳ ಗ್ರಾಮಗಳು ಅತೀ ದೊಡ್ಡ ಗ್ರಾಮಗಳಾಗಿವೆ. ತೆಲೆಮೊರಬ, ಹಣಸಿ, ಬ್ಯಾಲ್ಯಾಳ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೆರೆಗಳಲ್ಲಿ ನೀರಿನ ಸಂಗ್ರಹ ಅತ್ಯಲ್ಪ ಮಟ್ಟಕ್ಕೆ ಕುಸಿದಿದೆ. ಶಿರಕೋಳದಲ್ಲಿ ಕೇವಲ 8-10 ದಿನಗಳಿಗೆ ಮಾತ್ರ ನೀರು ಸಂಗ್ರಹ ಇದ್ದು, ಅದು ತಳಮಟ್ಟಕ್ಕೆ ತಲುಪಿದೆ. ಸಾರ್ವಜನಿಕರು ನೀರು ಕುಡಿದರೆ ಹೊಟ್ಟೆನೋವು, ಇತರೆ ಕಾಯಿಲೆಗಳು ಹರಡುತ್ತಿವೆ ಎಂದು ದೂರಲಾಯಿತು.
ಮೊರಬ ಗ್ರಾಮದವರು ಗುಮ್ಮಗೋಳ ಗ್ರಾಮದಿಂದ ಶುದ್ಧ ಕುಡಿಯುವ ನೀರು ತಂದು ಕುಡಿಯುತ್ತಿದ್ದಾರೆ. ಹೀಗಾಗಿ ಒಂದು ಕಡೆ ಕೋವಿಡ್ ತಡೆಯಲು ಸಮಸ್ಯೆ ಎದುರಿಸುತ್ತಿದ್ದರೆ ಇನ್ನೊಂದು ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಗ್ರಾಮದ ಯುವಕರು ಪ್ರತಿ ದಿನ ಸಾಮಾಜಿಕ ಜಾಲತಾಣ ಮೂಲಕ ಗ್ರಾಪಂ ಮತ್ತು ಸರ್ಕಾರದ ಬಗ್ಗೆ ಟೀಕೆ ಟಿಪ್ಪಣೆ ಮಾಡುತ್ತಿದ್ದಾರೆ. ತಕ್ಷಣ ಈ ವಿಚಾರವಾಗಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರ ಸಭೆ ಕರೆದು ಕುಡಿಯುವ ನೀರು ಪೂರೈಸಲು ಆದೇಶಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮೊರಬ ಗ್ರಾಪಂ ಅಧ್ಯಕ್ಷೆ ಕಗದಾಳ, ಶಿರಕೋಳ ಗ್ರಾಪಂ ಅಧ್ಯಕ್ಷ ಪರಪ್ಪ ಗಾಣಿಗೇರ, ಹಿರಿಯರಾದ ಎಮ್.ಎಸ್. ರೋಣದ, ಅಡಿವೆಪ್ಪ ಗಾಣಿಗೇರ, ಸಂಗನಗೌಡ ಹಣಸಿ, ಚಂದ್ರು ಗಾಣಿಗೇರ, ಕುಮಾರ ಮಂಕಣಿ, ಗಿರೀಶ ಮಾಸ್ತಿ, ಕಲ್ಲಪ್ಪ ಬಸಿಡೋಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.