ಕೃಷಿ ವಿವಿಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
Team Udayavani, Apr 25, 2019, 11:34 AM IST
ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ 1872 ಮತಗಟ್ಟೆಗಳ ಮತಯಂತ್ರಗಳು ಬುಧವಾರ ಬೆಳಗಿನ ಜಾವದವರೆಗೂ ಕೃಷಿ ವಿವಿಯ ಮತ ಎಣಿಕೆ ಕೇಂದ್ರಕ್ಕೆ ತಲುಪಿದವು.
ಬಳಿಕ ಮಧ್ಯಾಹ್ನದವರೆಗೂ ಅವುಗಳನ್ನು ಭದ್ರತಾ ಕೊಠಡಿಯಲ್ಲಿರಿಸಿ ಬೀಗಮುದ್ರೆ ಹಾಕುವ ಕಾರ್ಯ ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಭಾನುಪ್ರಕಾಶ ಏಟೂರು ಹಾಗೂ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳ ಸಮ್ಮುಖದಲ್ಲಿ ಜರುಗಿತು. ಲೋಕಸಭಾ ಕ್ಷೇತ್ರವ್ಯಾಪ್ತಿ ಎಂಟೂ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಪ್ರತ್ಯೇಕವಾಗಿ ಭದ್ರತಾ ಕೊಠಡಿಯಲ್ಲಿರಿಸಲಾಗಿದೆ. ಈ ಕೊಠಡಿಗಳ ಪಕ್ಕದಲ್ಲಿಯೇ
ಆಯಾ ಕ್ಷೇತ್ರಗಳ ಮತ ಎಣಿಕೆ ಕೊಠಡಿಗಳನ್ನು ಗುರುತಿಸಲಾಗಿದೆ. ಚುನಾವಣೆ ಕಾರ್ಯಕ್ಕೆ ಒಟ್ಟು 2208 ಕಂಟ್ರೋಲ್ ಯೂನಿಟ್‌ಗಳು, 2820 ವಿವಿಪ್ಯಾಟ್‌ಗಳು, 4408 ಬ್ಯಾಲೆಟ್ ಯೂನಿಟ್‌ಗಳನ್ನು ಬಳಸಿಕೊಳ್ಳಲಾಗಿದ್ದು, ಮತದಾನ ನಂತರ ಕರ್ತವ್ಯನಿರತ ಸಿಬ್ಬಂದಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗಿದ್ದ ಡಿಮಸ್ಟರಿಂಗ್ ಕೇಂದ್ರಗಳಿಗೆ ಮತಯಂತ್ರಗಳನ್ನು ತಲುಪಿಸಿದರು. ಡಿಮಸ್ಟರಿಂಗ್ ಕೇಂದ್ರಗಳಿಂದ ಕೃಷಿ ವಿವಿಯ ಮತಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆಯೊಂದಿಗೆ ಮತಯಂತ್ರಗಳನ್ನು ಕಳುಹಿಸಿ ಕೊಡಲಾಯಿತು. ಬುಧವಾರ ಬೆಳಗಿನ ಜಾವ 3:00 ಗಂಟೆಯಿಂದ 6:00 ಗಂಟೆಯವರೆಗೂ ಕೃಷಿ ವಿಶ್ವವಿದ್ಯಾಲಯಕ್ಕೆ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದ ಮತಯಂತ್ರಗಳನ್ನು ಸ್ವೀಕರಿಸುವ ಕಾರ್ಯ ನಡೆಯಿತು. ಮತಯಂತ್ರಗಳನ್ನು ಭದ್ರತಾ ಕೊಠಡಿಗಳಲ್ಲಿರಿಸಿ ಬೀಗಮುದ್ರೆ ಹಾಕಲಾಯಿತು. ಮೇ 23ರಂದು ಮತಎಣಿಕೆ ಕಾರ್ಯ ನಡೆಯಲಿದೆ. ಅಲ್ಲಿಯವರೆಗೂ ಭದ್ರತಾ ಕೊಠಡಿಗಳಿಗೆ ಬಿಗಿಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.