ಶತಮಾನೋತ್ಸವಕ್ಕೆ ಆರ್‌ಎಸ್‌ಎಸ್ ಇನ್ನಷ್ಟು ವಿಸ್ತಾರ: ದತ್ತಾತ್ರೇಯ ಹೊಸಬಾಳೆ

Team Udayavani, Oct 30, 2021, 3:44 PM IST

dattatreya hosabale

ಧಾರವಾಡ : ರಾಷ್ಟ್ರೀಯ ಸ್ವಯಂ ಸೇವಕ ಸಂಘವು 2025ನೇ ಇಸವಿಗೆ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು, ಅಷ್ಟರಲ್ಲಿಯೇ ದೇಶದ ಪ್ರತಿ ಮಂಡಲಕ್ಕೂ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದರು.

ಇಲ್ಲಿನ ರಾಷ್ಟ್ರೊತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್‌ ನ ಕೊನೆಯ ದಿನವಾದ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೋವಿಡ್‌ ನಿಂದಾಗಿ ಶಾಖೆಗಳು ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಆರಂಭಗೊಂಡಿದ್ದು, ಸದ್ಯಕ್ಕೆ ದೇಶಾದ್ಯಂತ ಒಟ್ಟು 54,382 ಆರ್‌ಎಸ್‌ಎಸ್ ಶಾಖೆಗಳು ನಡೆಯುತ್ತಿವೆ. ಈ ಪೈಕಿ 34 ಸಾವಿರ ಪ್ರತಿದಿನ ಶಾಖೆಗಳು, 12,708 ವಾರದ ಶಾಖೆಗಳು ಹಾಗೂ 7900 ತಿಂಗಳ ಶಾಖೆಗಳು ನಡೆಯುತ್ತಿವೆ. 1925 ರಲ್ಲಿ ಆರಂಭಗೊಂಡ ಆರ್‌ಎಸ್‌ಎಸ್ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ರಚಿಸಿರುವ 6494 ಮಂಡಳಗಳಿಗೆ (ಬ್ಲಾಕ್) ತನ್ನ ಕಾರ್ಯ ವಿಸ್ತರಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

ಈಗಾಗಲೇ ಈ ಪೈಕಿ 4300 ಮಂಡಳಗಳಲ್ಲಿ ಆರ್‌ಎಸ್‌ಎಸ್ ತನ್ನ ಚಟುವಟಿಕೆ ನಿರ್ವಹಿಸುತ್ತಿದೆ. 1,59,028 ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಉತ್ಸವಗಳು ಜರುಗಿವೆ. ಸರ್ಕಾರದ 560 ಜಿಲ್ಲೆಗಳ ಪೈಕಿ 84 ಜಿಲ್ಲೆಗಳಲ್ಲಿನ ಎಲ್ಲಾ ಮಂಡಳಗಳಲ್ಲಿ ಶೇ.100 ರಷ್ಟು ಕಾರ್ಯಚಟುವಟಿಕೆ ವಿಸ್ತರಿಸಲಾಗಿದೆ. ಈ ಕಾರ್ಯಕ್ಕಾಗಿ 2 ವರ್ಷದ ಅವಧಿಗೆ ಸಂಘದ ಕಾರ್ಯನಿರ್ವಹಿಸುವ ಕಾರ್ಯಕರ್ತರನ್ನು ಇನ್ನಷ್ಟು ಗಟ್ಟಿಗೊಳಿಸುವ ಯೋಜನೆ ಈ ಬಠಕ್‌ನಲ್ಲಿ ರೂಪಿಸಲಾಗಿದೆ ಎಂದರು.

ಬೈಠಕ್‌ ನ ಚರ್ಚಿತ ವಿಷಯಗಳು: ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ಹಲ್ಲೆ ನಿಯಂತ್ರಿಸುವುದು, ಅಸ್ಪಶೃತೆ, ಸ್ವದೇಶಿ ಜಾಗೃತಿ, ಉದ್ಯೋಗ ಸೃಷ್ಠಿ, ಸ್ಥಳೀಯ ಉದ್ಯೋಗಕ್ಕೆ ಒತ್ತು, ಹೊಸ ಶಿಕ್ಷಣ ಸೇರಿದಂತೆ ಅನೇಕ ವಿಚಾರಗಳ ಕುರಿತು ಮುಂಬರುವ ದಿನಗಳಲ್ಲಿ ಇನ್ನಷ್ಟು ಬೆಳಕು ಚೆಲ್ಲಲು ಆರ್‌ಎಸ್‌ಎಸ್ ಯೋಜಿಸಿದೆ. ಮತಾಂತರ ಕಾಯಿದೆಯನ್ನು ಯಾರೇ ವಿರೋಧೀಸಿದರೂ ಸರ್ಕಾರ ಅದನ್ನು ಜಾರಿಗೊಳಿಸಬೇಕು. ಮತಾಂತರ ನಿಲ್ಲಬೇಕು. ಅಷ್ಟೇಯಲ್ಲ, ಈಗಾಗಲೇ ಮತಾಂತರಗೊಂಡವರು ಮರಳಿ ಹಿಂದೂ ಧರ್ಮಕ್ಕೆ ಸೇರಿಸುವ ಕಾರ್ಯ ನಡೆಯುತ್ತಿದೆ. ಸಂವಿಧಾನದಲ್ಲಿಯೆ ಜನಸಂಖ್ಯಾ ನೀತಿಯನ್ನು ರೂಪಿಸಿದ್ದು, ಎಲ್ಲಾ ಸಮುದಾಯಗಳಿಗೂ ಒಂದೇ ಬಗೆಯ ಜನಸಂಖ್ಯಾ ನೀತಿ ಜಾರಿಗೊಳಿಸಬೇಕಿದೆ. ಈ ಕುರಿತು ಈಗಾಗಲೇ ಸರ್ಕಾರದ ಗಮನ ಸೆಳೆಯಲಾಗಿದ್ದು, ಸಮಯ ಬಂದಾಗ ಸರ್ಕಾರ ಆ ತೀರ್ಮಾನ ಕೈಗೊಳ್ಳಲಿದೆ ಎಂದು ದತ್ತಾತ್ತೇಯ ಹೊಸಬಾಳೆ ಹೇಳಿದರು.

ಇದನ್ನೂ ಓದಿ:ಸರಳ ಮತ್ತು ಗೌರವಪೂರ್ವಕ ರಾಜ್ಯೋತ್ಸವ : ಮಾರ್ಗಸೂಚಿ ಬಿಡುಗಡೆ

ಈಗಾಗಲೇ ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಈ ನಿಮಿತ್ತ ಆರ್‌ಎಸ್‌ಎಸ್ ಕೂಡ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇತರ ಸಂಘಟನೆಗಳ ಜೊತೆ ಕೂಡಿ ಕೆಲಸ ಮಾಡಲಿದೆ. ಕಾಲಾಪಾನಿಯಾದ  ಸ್ವಾತಂತ್ರ್ಯ ಸೇನಾನಿಗಳು ಸೇರಿದಂತೆ ತೆರೆಯಲ್ಲಿಯೇ ಕೆಲಸ ಮಾಡಿದ ಅನೇಕರು ಇನ್ನೂ ಪ್ರಚಾರಕ್ಕೆ ಬಂದಿಲ್ಲ. ಅಂತಹ ಮಹನೀಯರಿಗೆ ಈ ಉತ್ಸವದಲ್ಲಿ ಹೆಚ್ಚಿನ ಒತ್ತು ಪ್ರಚಾರ ಸಿಕ್ಕಬೇಕಿದ್ದು, ಈ ಕಾರ್ಯವನ್ನು ಆರ್‌ಎಸ್‌ಎಸ್ ಮಾಡಲಿದೆ ಎಂದರು.

ಪೋಪ್ ಭೇಟಿ ತಪ್ಪಲ್ಲ : ಪ್ರಧಾನಿ ನರೇಂದ್ರ ಮೋದಿ ಅವರು ರೋಮ್‌ನಲ್ಲಿ ಪೋಪ್ ಅವರನ್ನು ಭೇಟಿ ಮಾಡಿದ್ದು ತಪ್ಪಲ್ಲ. ವಸದೈವಕಂ ಕುಟುಂಬಕಂ ಎನ್ನುವ ತತ್ವ ನಮ್ಮದು ಒಂದು ದೇಶದ ಮುಖ್ಯಸ್ಥ ಇನ್ನೊಂದು ದೇಶದ ಮುಖ್ಯಸ್ಥರನ್ನು ಭೇಟಿ ಮಾಡುವುದು ನಾಗರಿಕ ಸಮಾಜದ ಲಕ್ಷಣ, ಎಲ್ಲಾ ಧರ್ಮದ ಜನರನ್ನು ಭೇಟಿಯಾಗುವುದರಲ್ಲಿ ತಪ್ಪಿಲ್ಲ. ಇಷ್ಟಕ್ಕೂ ಪ್ರಧಾನಿ ಜಗತ್ತಿನ ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಿ ನಮ್ಮ ದೇಶದ ಗೌರವ ಹೆಚ್ಚಿಸಿದ್ದಾರೆ ಎಂದು ಹೊಸಬಾಳೆ ಅವರು ಮೋದಿ-ಪೋಪ್ ಭೇಟಿಯನ್ನು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.