ಒಂದೇ ಕಾಮಗಾರಿ..ಎರಡು ಬಾರಿ ಭೂಮಿಪೂಜೆ
Team Udayavani, Jun 19, 2017, 3:12 PM IST
ಹುಬ್ಬಳ್ಳಿ: ನಗರದ ಬಂಕಾಪುರ ಚೌಕ್‌ನಿಂದ ಕಿತ್ತೂರ ಚನ್ನಮ್ಮ ವೃತ್ತ ವರೆಗಿನ ರಸ್ತೆ ಅಗಲೀಕರಣದ ಒಂದೇ ಕಾಮಗಾರಿಗೆ ಕೇಂದ್ರ ಸಚಿವ ಹಾಗೂ ಸ್ಥಳೀಯ ಶಾಸಕರಿಂದ ಪ್ರತ್ಯೇಕವಾಗಿ ಎರಡೆರಡು ಬಾರಿ ಭೂಮಿಪೂಜೆಯ ಭಾಗ್ಯ ದೊರೆಯುವಂತಾಯಿತು.
ಅಂದಾಜು 39.09 ಕೋಟಿ ರೂ. ವೆಚ್ಚದಲ್ಲಿ ಬಂಕಾಪುರ ಚೌಕ್‌ನಿಂದ ಕೆಸಿ ವೃತ್ತದವರೆಗಿನ ರಸ್ತೆಯನ್ನು ಚತುಷ್ಪಥವನ್ನಾಗಿ ಅಗಲೀಕರಣ ಮಾಡುವ ಕಾಮಗಾರಿಯನ್ನು ಕೇಂದ್ರ ಸರಕಾರದ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗೆ ಕೇಂದ್ರ ಪೆಟ್ರೋಲಿಯಂ ಖಾತೆ ಸಹಾಯಕ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಚಾಲನೆ ನೀಡಿದ್ದರು.
ಆದರೆ ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಕಾರ್ಯಕ್ರಮ ನಿಗದಿಪಡಿಸಿದ ಸಮಯಕ್ಕಿಂತ ಸ್ವಲ್ಪ ತಡವಾಗಿ ಆಗಮಿಸಿದ್ದರು. ಆದರೆ ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಇನ್ನೊಂದು ಕಾರ್ಯಕ್ರಮ ಇದ್ದುದರಿಂದ ಅವರು ಬರುವುದರೊಳಗೆ ಭೂಮಿಪೂಜೆ ಮುಗಿಸಿಕೊಂಡು ಹೋಗಿದ್ದರು.
ಇದರಿಂದ ಕಾಂಗ್ರೆಸ್‌ನ ಜನಪ್ರತಿನಿಧಿಗಳು ಅಸಮಾಧಾನಗೊಂಡರಲ್ಲದೆ, ತಾವು ಸಹ ಭೂಮಿಪೂಜೆ ಮಾಡುತ್ತೇವೆಂದು ಘೋಷಣೆ ಮಾಡಿದ್ದರು. ಅದರಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ರವಿವಾರ ಮಧ್ಯಾಹ್ನ ಒಂದೇ ಕಾಮಗಾರಿಗೆ ಎರಡನೇ ಬಾರಿಗೆ ಭೂಮಿಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.