ರಂಗಭೂಮಿಗೆ ಸಾಣೇಹಳ್ಳಿ ಮಠದ ಕೊಡುಗೆ ಅಪಾರ

Team Udayavani, Jan 19, 2018, 12:50 PM IST

h4-ranga.jpg

ಹುಬ್ಬಳ್ಳಿ: ಸಾಣೇಹಳ್ಳಿ ಶಿವಕುಮಾರ ಕಲಾಸಂಘ “ಶಿವಸಂಚಾರ’ ನಾಟಕೋತ್ಸವದ ಉದ್ಘಾಟನೆ ನಗರದ ಆದರ್ಶನಗರದ ಕನ್ನಡ ಭವನದಲ್ಲಿ ಗುರುವಾರ  ನಡೆಯಿತು. ಡಾ| ಪಾಂಡುರಂಗ ಪಾಟೀಲ ಮಾತನಾಡಿ, ನಾಟಕದ ಮೂಲಕ ಸಮಾಜ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟವರು ಸಾಣೇಹಳ್ಳಿ  ಸ್ವಾಮಿಗಳು. 

ಅವರ ತಂಡದವರು ಪ್ರತಿ ವರ್ಷ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುತ್ತಾರೆ. ಹವ್ಯಾಸಿ ರಂಗಭೂಮಿಯ ಉತ್ತೇಜನಕ್ಕೆ ಸಾಣೇಹಳ್ಳಿ ಮಠದ  ಕೊಡುಗೆ ಅಪಾರ ಎಂದರು. ಅನೇಕ ಕಲಾವಿದರು, ರಂಗಕರ್ಮಿಗಳನ್ನು ರೂಪಿಸಿದ ಕೀರ್ತಿ ಶಿವಸಂಚಾರಕ್ಕಿದೆ. ನಾಟಕಗಳನ್ನು ಆಯೋಜಿಸುವುದು ಕಡುಕಷ್ಟವಾಗಿದೆ.

ಇಂಥ ಸಂದರ್ಭದಲ್ಲಿ ನಿರಂತರ ನಾಟಕ ಪ್ರದರ್ಶನಗಳನ್ನು ನೀಡುತ್ತ ರಂಗಭೂಮಿಯನ್ನು ಜೀವಂತವಾಗಿಟ್ಟಿರುವುದು  ಶ್ಲಾಘನೀಯ. ನಾಟಕ ಪ್ರದರ್ಶನಕ್ಕೆ ಕಡಿಮೆ ದರದಲ್ಲಿ ಕನ್ನಡ ಭವನ ನೀಡುವ ಕುರಿತು ಮಹಾಪೌರರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ನಾವು ನಿತ್ಯ ಜೀವನದಲ್ಲಿ ಹಲವು ಬಾರಿ ನಾಟಕ ಮಾಡುತ್ತೇವೆ. ಆದರೆ ನಿಜವಾಗಿಯೂ ಯಾವುದು ನಾಟಕ  ಎಂಬುದನ್ನು ತಿಳಿಯಲು ನಾಟಕ ನೋಡಬೇಕು ಎಂದರು. 

ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿ, ಸಾಣೆಹಳ್ಳಿ ಮಠ ಪ್ರತಿ ವರ್ಷ ಮೂರು ವಿಶಿಷ್ಟ ನಾಟಕಗಳನ್ನು ಪ್ರದರ್ಶಿಸುತ್ತಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು  ನಾಟಕಗಳನ್ನು ವೀಕ್ಷಿಸಬೇಕು ಎಂದು ಹೇಳಿದರು. ಆರ್‌.ಟಿ. ಮಜ್ಜಗಿ ಮಾತನಾಡಿ, ನಾಟಕಗಳ  ಆಯೋಜನೆಗೆ ಕನ್ನಡ ಭವನವನ್ನು ಉಚಿತವಾಗಿ ನೀಡಲು ಮಹಾನಗರ ಪಾಲಿಕೆ ಮುಂದಾಗಬೇಕು. 

ರಂಗಭೂಮಿಯನ್ನು ಉಳಿಸಿ  ಬೆಳೆಸುವುದು ಎಲ್ಲರ ಕರ್ತವ್ಯ ಎಂದರು. ನಂತರ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ ಅನುವಾದಿಸಿದ, ಮಾಲತೇಶ ಬಡಿಗೇರ ನಿರ್ದೇಶನದ “ಚೋರ  ಚರಣದಾಸ’ ನಾಟಕದ ಪ್ರದರ್ಶನ ನಡೆಯಿತು. ಜ. 19ರಂದು “ಮೋಳಿಗೆ ಮಾರಯ್ಯ’ ಹಾಗೂ ಜ. 20ರಂದು “ಸಾಯೋ ಆಟ’ ನಾಟಕಗಳ ಪ್ರದರ್ಶನ  ನಡೆಯಲಿದೆ.

ಟಾಪ್ ನ್ಯೂಸ್

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.