ಸ್ಯಾನಿಟರಿ ಪ್ಯಾಡ್‌ ಮೇಲಿನ ತೆರಿಗೆ ರದ್ಧತಿಗೆ ಆಗ್ರಹ


Team Udayavani, Jul 14, 2017, 12:14 PM IST

hub2.jpg

ಧಾರವಾಡ: ಕೇಂದ್ರ ಸರಕಾರ ವಿಧಿಸಿರುವ ಸ್ಯಾನಿಟರಿ ಪ್ಯಾಡ್‌ಗಳ ಮೇಲಿನ ತೆರಿಗೆ ಹಿಂಪಡೆಯುವಂತೆ ಆಗ್ರಹಿಸಿ ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಡಾ|ಎಸ್‌.ಬಿ.ಬೊಮ್ಮನಹಳ್ಳಿ ಅವರ ಮೂಲಕ ಕೇಂದ್ರ ಸರಕಾರಕ್ಕೆ ಗುರುವಾರ ಮನವಿ ಸಲ್ಲಿಸಲಾಯಿತು. 

ದೇಶದಲ್ಲಿ ಸರಾಸರಿ 11-12 ಪ್ರಾಯದ ಬಾಲಿಕೆಯರಿಂದ 50 ವರ್ಷದ ಮಹಿಳೆಯರಿಗೆ ತಮ್ಮ ಋತುಚಕ್ರದ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಅವಶ್ಯವಾದ ಸ್ಯಾನಿಟರಿ ಪ್ಯಾಡ್‌ಗಳನ್ನು ಬಳಸುತ್ತಾರೆ. ಆದರೆ ಕೇಂದ್ರ ಸರಕಾರವು ಜು.1ರಿಂದ ಜಿಎಸ್‌ಟಿ ಜಾರಿಗೊಳಿಸಿದ್ದು, ಇದರಲ್ಲಿ ಹೆಣ್ಣು ಮಕ್ಕಳು ಬಳಸುವ ಸ್ಯಾನಿಟರಿ ಪ್ಯಾಡ್‌ಗಳ ಮೇಲೆ ಶೇ.12ರಷ್ಟು ತೆರಿಗೆ ವಿಧಿಸಿದೆ. 

ಇದು ಸರಿಯಾದ ಕ್ರಮವಲ್ಲ. ಇದರಿಂದ ಮಧ್ಯಮ ವರ್ಗದ ಹಾಗೂ ಬಡ ವರ್ಗದ ಮಹಿಳೆಯರಿಗೆ ಹೊರೆಯಾಗಲಿದೆ ಎಂದು ದೂರಲಾಗಿದೆ. ಜಿಎಸ್‌ಟಿನಲ್ಲಿ ಸರ್ಕಾರವು ಶ್ರೀಮಂತರು ಬಳಸುವ ಕಾರುಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಮಹಿಳೆಯರ ಆರೋಗ್ಯಕ್ಕೆ ಅವಶ್ಯವಿರುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ತೆರಿಗೆ ವಿಧಿಸಿದೆ.

ಅಂತೆಯೇ ಈಗ ಮಹಿಳೆಯರು ಉದ್ಯೋಗಿಗಳಾಗಿದ್ದು, ವಾಷಿಂಗ್‌ ಮೆಷಿನ್‌, ಫ್ರಿಡ್ಜ್ ಇವುಗಳನ್ನು ಅವರು ತಮ್ಮ ಜೀವನ ಸುಗಮಗೊಳಿಸಿಕೊಳ್ಳಲು ಬಳಸಲು ಅಪೇಕ್ಷಿಸುತ್ತಾರೆ. ಇನ್ಮುಂದೆ ಅವೂ ದುಬಾರಿಯಾಗಿದೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಸಂದರ್ಭದಲ್ಲಿ ಸರ್ಕಾರ ವಿಧಿಸಿರುವ ತೆರಿಗೆಯನ್ನು ಹಿಂಪಡೆಯಬೇಕು ಮಾತ್ರವಲ್ಲ,

ಉಚಿತವಾಗಿ ಆರೋಗ್ಯ ಕೇಂದ್ರಗಳ ಮೂಲಕ, ಅಂಗನವಾಡಿ ಕೇಂದ್ರಗಳ ಮೂಲಕ, ಶಾಲಾ ಕಾಲೇಜು-ಕಚೇರಿಗಳಲ್ಲಿ, ಸಾರ್ವಜನಿಕ ಶೌಚಾಲಯಗಳಲ್ಲಿ ಸ್ಯಾನಿಟರಿ ಪ್ಯಾಡ್‌ ಗಳು ಉಚಿತವಾಗಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಜಿಲ್ಲಾಧ್ಯಕ್ಷೆ ಭುವನಾ, ಉಪಾಧ್ಯಕ್ಷೆ ಮಧುಲತಾ ಗೌಡರ್‌, ವಿಜಯಲಕೀ ದೇವದ್‌ಕಲ್‌, ನಿಂಗಮ್ಮ ಹುಡೇದ್‌, ದೇವಮ್ಮ ದೇವದ್‌ಕಲ್ಲ ಇದ್ದರು. 

ಟಾಪ್ ನ್ಯೂಸ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.