![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 16, 2017, 4:23 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಯೋಜನೆಗಳನ್ನು ತನ್ನ ಯೋಜನೆಗಳೆಂದು ಬಿಂಬಿಸುತ್ತ ಪ್ರಚಾರ ಪಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆರೋಪಿಸಿದರು.
ನಗರದ ನೆಹರು ಮೈದಾನದಲ್ಲಿ ಜೂ.17ರಂದು ನಡೆಯುವ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಉದ್ಘಾಟನೆ ಕಾರ್ಯಕ್ರಮದ ಪ್ರಚಾರ ಕಾರ್ಯಕ್ಕೆ ಗುರುವಾರ ಚಾಲನೆ ನೀಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರದ ಉಚಿತ ವಿದ್ಯುತ್ ಸರಬರಾಜು ಯೋಜನೆಗೆ “ಹೊಸ ಬೆಳಕು’ ಎಂದು ಹಾಗೂ ಬಡ ಜನರಿಗೆ ಆಹಾರ ಧಾನ್ಯ ನೀಡುವ ಯೋಜನೆಗೆ “ಅನ್ನಭಾಗ್ಯ’ ಎಂದು ನಾಮಕರಣ ಮಾಡಿ “ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ’ ಎಂಬಂತೆ ತನ್ನದೇ ಕಾರ್ಯಕ್ರಮಗಳೆಂದು ಪ್ರಚಾರ ಪಡೆಯುತ್ತಿದೆ ಎಂದರು.
ಕೇಂದ್ರ ಸರ್ಕಾರ ಪ್ರತಿ ಕೆ.ಜಿ.ಅಕ್ಕಿಗೆ 38ರೂ. ನೀಡಿ ಅದನ್ನು 3 ರೂ.ನಂತೆ ರಾಜ್ಯ ಸರ್ಕಾರಕ್ಕೆ ನೀಡುತ್ತಿದೆ. ಅದೇ ರೀತಿ ಪ್ರತಿ ಕೆ.ಜಿ.ಗೋಧಿಗೆ 28ರೂ. ನೀಡಿ ಅದನ್ನು 2ರೂ.ನಂತೆ ನೀಡುತ್ತಿದೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಯಾವುದೇ ತಾರತಮ್ಯ ಮಾಡದೆ ರಾಜ್ಯದಲ್ಲಿ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದಾರೆ.
ಮುಂದೆ ಇನ್ನೂ ಹಲವು ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಗೊಳ್ಳಲಿವೆ ಎಂದರು. ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ರಾಜ್ಯದಲ್ಲಿ 36 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ನೀಡಲಾಗುವುದು.
ಮಹತ್ವದ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ, ಅನಂತಕುಮಾರ, ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮುಖಂಡರಾದ ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರ್ಗಿ, ಜಯತೀರ್ಥ ಕಟ್ಟಿ, ಶಂಕ್ರಪ್ಪ ಬಿಜವಾಡ, ಉಮೇಶ ದುಶಿ, ವೆಂಕಟೇಶ ಮೇಸಿ ಮೊದಲಾದವರಿದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.