ಬೈಪಾಸ್‌ಗೆ ಕೃಷಿಭೂಮಿ ಬಳಕೆ: ರೈತರ ಆಕ್ರೋಶ


Team Udayavani, Mar 15, 2017, 3:04 PM IST

hub7.jpg

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಗಳನ್ನು ಜೋಡಿಸುವ ಬೈಪಾಸ್‌ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿಯಿಂದ ತನಿಖೆ ಮಾಡಿ ವರದಿ ಸಲ್ಲಿಕೆಗೆ ಆದೇಶ ಪತ್ರ ಕಳುಹಿಸಿದ್ದರೂ ಅದನ್ನು ಪರಿಗಣಿಸದೆ ಸುಮಾರು 40 ಜನ ರೈತರ ಕೃಷಿಗೆ ಕಂಟಕವಾಗುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿರುವುದಕ್ಕೆ ಕುಸುಗಲ್ಲ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಷ್ಟ್ರೀಯ ಹೆದ್ದಾರಿಗಳಾದ 218, 63 ಹಾಗೂ 4ನ್ನು ಜೋಡಿಸಲು ಬೈಪಾಸ್‌ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಅಭಿವೃದ್ಧಿ ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ, ಭೂಮಾμಯಾ  ಹಾಗೂ ರಾಜಕಾರಣಿಗಳ ಭೂಮಿಗಳ ಅನುಕೂಲಕೋಸ್ಕರ ರೈತರ ಫ‌ಲವತ್ತಾದ ಭೂಮಿಯನ್ನು ಯೋಜನೆ ಹೆಸರಿನ ಸ್ವಾಹಕ್ಕೆ ನಮ್ಮ ವಿರೋಧವಿದೆ ಎಂಬುದು ಸುಗಲ್ಲ ರೈತ ಸೇವಾ ಸಂಘದ ಅನಿಸಿಕೆಯಾಗಿದೆ. 

ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರಾಜಕಾರಣಿಗಳ ಭೂಮಿಗೆ ಅನುಕೂಲ ಮಾಡಿಕೊಡಲು ರೈತರ ಹೊಲದಲ್ಲಿ ರಸ್ತೆ ಬರುವಂತೆ ಮಾಡಲಾಗುತ್ತಿದೆ ಎಂಬ ಬಗ್ಗೆ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದೇವೆ. ಅದೇ ರೀತಿ ಪ್ರಧಾನಿ ಕಚೇರಿಗೆ ಹಾಗೂ ಕೇಂದ್ರ ಭೂ ಸಾರಿಗೆ ಸಚಿವರ ಕಚೇರಿಗೆ ಪತ್ರ ಬರೆದಿದ್ದೆವು.

ಪ್ರಕರಣದ ಕುರಿತಾಗಿ ತನಿಖೆ ನಡೆಸಿ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಮುಖ್ಯ ಇಂಜಿನೀಯರ್‌ಗೆ ಪ್ರಧಾನಿ ಕಚೇರಿಯಿಂದ ಇದೇ ವರ್ಷದ ಜನವರಿ 18ರಂದು ಆದೇಶ ಬಂದಿದೆ. ಇಷ್ಟಿದ್ದರೂ ಇತ್ತೀಚೆಗೆ ಸಂಸದ ಪ್ರಹ್ಲಾದ ಜೋಶಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ, ಶಾಸಕ ಎನ್‌.ಎಚ್‌.ಕೋನರಡ್ಡಿ ಅವರು ಬೈಪಾಸ್‌ ರಸ್ತೆಗೆ ಭೂಮಿಪೂಜೆ  ನೆರವೇರಿಸಿ ಎರಡು ವರ್ಷದಲ್ಲಿ ಕಾಮಗಾರಿ ಮುಗಿಯಲಿದೆ ಎಂದು ಹೇಳಿರುವುದು ರೈತರ ಆತಂಕ ಹೆಚ್ಚುವಂತೆ ಮಾಡಿದೆ. 

ಅಷ್ಟೇ ಅಲ್ಲ ತಮ್ಮದೇ ಪಕ್ಷದ ಪ್ರಧಾನಿಯವರ ಕಚೇರಿ ಆದೇಶಕ್ಕೂ ಬೆಲೆ ಇಲ್ಲದ ರೀತಿಯಲ್ಲಿ ಸಂಸದರು ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕರು ರೈತರಿಗೆ ಅನ್ಯಾಯ ಮಾಡುವ ರೀತಿಯಲ್ಲಿ ಬೈಪಾಸ್‌ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ.

ಅದೇ ರೀತಿ ಸಂಸದ ಪ್ರಹ್ಲಾದ ಜೋಶಿಯವರು ನಮ್ಮ ಗುರುವೆಂದು ಹೇಳಿಕೊಳ್ಳುವ ಶಾಸಕ ಎನ್‌.ಎಚ್‌. ಕೋನರಡ್ಡಿ ಅವರು ಹೋರಾಟ ನಿರತ ರೈತರಿಂದ ರಾಜಿ ಮಾಡಿಸುತ್ತೇವೆ ಎಂದು ಹೇಳಿರುವುದು ನೋಡಿದರೆ ಇವರಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದು ತೋರಿಸುತ್ತದೆ.

ರೈತರಿಗಾದ ಅನ್ಯಾಯಕ್ಕೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬಳಿ ಕರೆದ್ಯೊಯುತ್ತೇನೆ, ಬೆಳಗಾವಿ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ ಎಂದೆಲ್ಲ ಹೇಳಿದ್ದ ಕೋನರಡ್ಡಿ ರೈತರಿಗೆ ಮೋಸ ಮಾಡಿದ್ದಾರೆ. ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ನಮ್ಮ ಕೃಷಿ ಭೂಮಿ ನೀಡುವುದಿಲ್ಲ. ಕಾನೂನು ಹೋರಾಟಕ್ಕೂ ನಾವು ಸಿದ್ದರಿದ್ದೇವೆ ಎಂದು ನೊಂದ ರೈತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.