ಕುಂದಗೋಳ ಉಪಚುನಾವಣೆಯಲ್ಲಿ ಸತ್ಯಕ್ಕೆ ಜಯ
Team Udayavani, May 2, 2019, 12:59 PM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಚುನಾವಣೆ ಧರ್ಮ ಯುದ್ಧವಾಗಿದೆ. ಸತ್ಯ-ಮಿಥ್ಯಗಳ ನಡುವಿನ ಸೆಣಸಾಟವಾಗಿದ್ದು, ಅಂತಿಮವಾಗಿ ಸಿ.ಎಸ್. ಶಿವಳ್ಳಿಯವರ ಧರ್ಮಪತ್ನಿ ಕುಸುಮಾವತಿ ಶಿವಳ್ಳಿ ಅವರು ಗೆಲ್ಲುವ ಮೂಲಕ ಸತ್ಯಕ್ಕೆ ಜಯ ದೊರೆಯಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ| ಪುಷ್ಪಾ ಅಮರನಾಥ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ನಿಧನ ಪಕ್ಷಕ್ಕೆ ದೊಡ್ಡ ನಷ್ಟ ತಂದಿದೆ. ಶಿವಳ್ಳಿ ಅವರ ಅಭಿವೃದ್ಧಿ ಚಿಂತನೆ, ಕ್ಷೇತ್ರ ಹಾಗೂ ಬಡವರ ಬಗ್ಗೆ ಹೊಂದಿದ ಕಾಳಜಿ, ಸರಳತೆಯೇ ಚುನಾವಣೆಯಲ್ಲಿ ನಮಗೆ ಶ್ರೀರಕ್ಷೆಯಾಗಲಿದೆ ಎಂದರು.
ಸುಳ್ಳು ಭರವಸೆಗಳನ್ನು ನೀಡಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕುಂದಗೋಳ ಮತದಾರರು ಅದರಲ್ಲೂ ವಿಶೇಷವಾಗಿ ಮಹಿಳಾ ಮತದಾರರು ಬಿಜೆಪಿಗೆ ತೋರಿಸಿಕೊಡಲಿದ್ದಾರೆ. 2014ರ ಲೋಕಸಭೆ ಚುನಾವಣೆ ವೇಳೆ ಸ್ವರ್ಗವನ್ನೇ ತಂದು ನಿಮ್ಮ ಕೈಗಿಡುವೆ ಎಂಬಂತಹ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, 2019ರ ಲೋಕಸಭೆ ಚುನಾವಣೆಯಲ್ಲೂ ಮತ್ತದೇ ಹಳೇ ಭರವಸೆಗಳ ಪ್ರಣಾಳಿಕೆ ಹಿಡಿದುಕೊಂಡು ಬಂದಿದ್ದು, ಜನ ಇವರನ್ನು ನಂಬಲಾರರು ಎಂದರು.
ಬಿಜೆಪಿ ಕೊಡುಗೆ ಏನು?: ದೇಶಕ್ಕೆ ಹಾಗೂ ಕರ್ನಾಟಕಕ್ಕೆ ಬಿಜೆಪಿಯವರ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಲಿ. ಯುಪಿಎ ಸರಕಾರದಲ್ಲಿ ಅಡುಗೆ ಅನಿಲ, ತೈಲ ಬೆಲೆ ಹಚ್ಚಾದಾಗ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು, ಇದೀಗ ಅಡುಗೆ ಅನಿಲ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ. ರೂಪಾಯಿ ಮೌಲ್ಯ ಕುಸಿದಿದೆ. ರೈತರ ಕಷ್ಟ ಗೊತ್ತಿರದ ಪ್ರಧಾನಿ ವಿದೇಶ ಪ್ರವಾಸದಲ್ಲೇ ಐದು ವರ್ಷ ಕಳೆದರು. ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ, ರೈತರ ಆದಾಯ ದುಪ್ಪಟ್ಟು ಎಲ್ಲವೂ ಭಾಷಣಕ್ಕೆ ಸೀಮಿತವಾಗಿವೆ ಎಂದು ವಾಗ್ಧಾಳಿ ನಡೆಸಿದರು.
ಕುಂದಗೋಳ-ಚಿಂಚೊಳ್ಳಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲುವ ಅನಿವಾರ್ಯತೆ ಇದ್ದು, ಎರಡು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಗೆಲ್ಲುವ ಉದ್ದೇಶದಿಂದ ಸಚಿವರು, ಶಾಸಕರ ನಿಯೋಜನೆ ತಪ್ಪಲ್ಲ ಎಂದು ಸಮರ್ಥಿಸಿಕೊಂಡರಲ್ಲದೆ, ಕುಸುಮಾವತಿ ಶಿವಳ್ಳಿಯವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.