ವಿಲನ್ ಆದ ಹೀರೊಯಿನ್ ಶನಾಯ
Team Udayavani, Apr 23, 2021, 7:16 PM IST
ಹುಬ್ಬಳ್ಳಿ : ರುಂಡ-ಮುಂಡ ಬೇರ್ಪಡಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಕೊಲೆಯಾದ ರಾಕೇಶ ಕಾಟವೆ ಸಹೋದರಿ ಹಾಗೂ ಚಿತ್ರ ನಟಿ ಶನಾಯ ಕಾಟವೆ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಆರೋಪಿಯನ್ನು ತೀವ್ರ ವಿಚಾರಗೊಳಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಜೊತೆಗೆ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್ಪಿ ಪಿ.ಕೃಷ್ಣಕಾಂತ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ರಾಕೇಶ ಕೊಲೆ ಬಗ್ಗೆ ಸಹೋದರಿ ಶನಾಯಗೆ ತಿಳಿದಿತ್ತು. ಆದರೆ ಆರಂಭದಲ್ಲಿ ಈ ಕುರಿತು ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಳು. ಆದರೆ ಕೆಲವು ಸಾಕ್ಷಿಗಳನ್ನು ಸಂಗ್ರಹಿಸಿದಾಗ ಇದರಲ್ಲಿ ಅವಳ ಪಾತ್ರ ಇರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ತಿಳಿಸಿದರು.
ಮೂವರ ಬಂಧನ: ಪ್ರಕರಣದ ಆಳಕ್ಕೆ ಇಳಿದಿರುವ ಗ್ರಾಮೀಣ ಪೊಲೀಸರು ಇನ್ನೂ ಮೂವರ ಪಾತ್ರ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಮೊದಲ ಆರೋಪಿ ಹಾಗೂ ನಟಿ ಶನಾಯ ಕಾಟವೆ ಅವಳ ಪ್ರಿಯತಮ ನಿಜಾಯ್‌ನ ಸೋದರ ಮಲ್ಲಿಕ್ (18), ಫಿರೋಜ್ (18) ಹಾಗೂ ನಿಜಾಜ್‌ನ ತಂದೆ ಸೈಫುಲ್ಲಾ (55) ಅವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಡಿಸಿದ್ದಾರೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಶನಾಯಳ ಪಾತ್ರದ ಬಗ್ಗೆ ಇನ್ನಷ್ಟು ವಿಷಯಗಳನ್ನು ಕಲೆ ಹಾಕಲಾಗುತ್ತಿದೆ ಎಂದರು.
ಕೊಲೆ ಬೆನ್ನು ಹತ್ತಿದ ಪೊಲೀಸರು ಶನಾಯಳನ್ನು ವಿಚಾರಣೆಗೊಳಪಡಿಸಿದಾಗ ತನ್ನ ಕಾರಿನಲ್ಲಿ ಸಹೋದರನ ಶವ ಇರುವುದು ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಳು. ಏ.13ರಂದು ನಿಮ್ಮಣ್ಣನ ಕೊಲೆಯಾಗಿದೆ ಎಂದು ಯಾರೋ ಹೇಳಿದ ನಂತರವಷ್ಟೇ ಗೊತ್ತಾಗಿದೆ ಎಂದಿದ್ದಳು. ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ ನಂತರವಷ್ಟೇ ತನ್ನಪಾತ್ರ ಇರುವುದನ್ನು ಒಪ್ಪಿಕೊಂಡಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆಯಾಗಿರುವ ರಾಕೇಶ ಕಾಟವೆ ತನ್ನ ಸಹೋದರಿ ಶನಾಯ ಹಾಗೂ ನಿಯಾಜ್ ನಡುವಿನ ಪ್ರೇಮಕ್ಕೆ ಅಡ್ಡಿಯಾಗಿದ್ದ ಎನ್ನುವುದು ಗೊತ್ತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.