ವಿನಯ್ ಕುಲಕರ್ಣಿ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ:ಜಗದೀಶ್ ಶೆಟ್ಟರ್
Team Udayavani, Nov 8, 2020, 7:29 PM IST
ಧಾರವಾಡ: ಕಾಂಗ್ರೆಸ್ ನವರಿಗೆ ಬೇರೆ ವಿಷಯಗಳಿಲ್ಲ. ಹೀಗಾಗಿ ಎಲ್ಲದರಲ್ಲೂ ಅವರು ರಾಜಕೀಯ ಮಾಡುತ್ತಾರೆ ಸಿಬಿಐ,ಇಡಿ ದಾಳಿಯಾದರೆ ರಾಜಕೀಯ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಿಬಿಐ ಕಸ್ಟಡಿಯಡಿ ವಿಚಾರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ಬೇರೆ ವಿಷಯಗಳಿಲ್ಲ, ಅವರು ಸಿಎಂ ಆಗಿದ್ದವರು ಜವಾಬ್ದಾರಿ ಸ್ಥಾನದಲ್ಲಿದ್ದವರು ಯೋಚನೆ ಮಾಡಿ ಮಾತನಾಡಬೇಕು. ಉಪಚುನಾವಣೆಯಲ್ಲಿ ಅವರಿಗೆ ಹಿನ್ನೆಡೆಯಾಗಲಿದೆ ಎಂದು ಎಕ್ಸಿಟ್ ಪೋಲ್ ಗಳಲ್ಲಿ ತಿಳಿದು ಬಂದಿದೆ. ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ ಅಧೋಗತಿ ಆರಂಭವಾಗಿದೆ ಎಂದ ಅವರು, ಬಂಧನದ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನ್ಯಾಯವಾಗಿದ್ದರೆ ಕೋರ್ಟ್ ಹೋಗಲಿ. ಸಿಬಿಐ, ಇಡಿ ಇಲಾಖೆ ಸರಕಾರದ ಅಡಿಯಲ್ಲಿಯೇ ಕೆಲಸ ಮಾಡಬೇಕಲ್ಲವೇ? ಯುಪಿಎ ಸರಕಾರದ ವೇಳೆಯಲ್ಲಿ ಜನಾರ್ದನರೆಡ್ಡಿ ಬಂಧನವಾಗಲಿಲ್ಲವೇ? ಅವರನ್ನು ಜೈಲಿನಲ್ಲಿ ಇಡಲಿಲ್ಲವೇ? ಆಗ ಯುಪಿಎ ಸರಕಾರ ಇತ್ತಲ್ಲವೇ? ಎಂದು ಪ್ರಶ್ನಿಶಿದ ಅವರು, ಕಾಂಗ್ರೆಸ್ ನವರು ಇಷ್ಟು ವರ್ಷ ದೇಶವನ್ನು ಆಳಿದ್ದಾರೆ. ಅವರು ಎಲ್ಲವೂ ನಡೆಯುತ್ತೆ ಅಂದುಕೊಂಡಿದ್ದರು ಆದರೆ ಇವತ್ತು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಬೈಡೆನ್ ಗೆಲುವು ; ಯಾವ ದೇಶದ ಮೇಲೆ ಏನು ಪರಿಣಾಮ?
ಹೀಗಾಗಿ ಏನು ಮಾಡಬೇಕೆಂಬುದು ಗೊತ್ತಾಗುತ್ತಿಲ್ಲ. ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ, ವಿನಯ್‌ಗೆ ಸ್ವಾಮಿಗಳ ಬೆಂಬಲವಿದೆಯೆಂದು ಪ್ರಕರಣಗಳನ್ನು ಧರ್ಮಕ್ಕೆ, ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಹಾಗೆ ಮಾಡುವುದು ತಪ್ಪು. ಸಿಬಿಐ ತಪ್ಪು ಮಾಡಿದರೆ ಕೋರ್ಟ್ ಗೆ ಹೋಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.