ರಾಜ್ಯದ 16 ಬೆಳೆಗಳಿಗಿಲ್ಲ ಬೆಂಬಲ ಬೆಲೆ


Team Udayavani, Oct 31, 2017, 12:57 PM IST

h3-rajya.jpg

ಧಾರವಾಡ: ರಾಜ್ಯದಲ್ಲಿ ಬೆಳೆಯುವ ಪ್ರಮುಖ 16 ಬೆಳೆಗಳು ಬೆಂಬಲ ಬೆಲೆಗಿಂತಲೂ ಕಡಿಮೆ ದರದಲ್ಲಿ ಮಾರಾಟ ಆಗುತ್ತಿದೆ ಎಂಬುದನ್ನು ರಾಜ್ಯದ ಸರಕಾರ ರಚಿಸಿರುವ ಕೃಷಿ ಬೆಲೆ ಆಯೋಗವೇ ತನ್ನ ವರದಿಯಲ್ಲಿ ಹೇಳಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು. 

ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಾಲಮನ್ನಾಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಅರ್ಜಿ ಸಲ್ಲಿಸುವ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ವಿವರಣೆ ನೀಡಿದ್ದು, ರೈತರಿಗೆ ಸರಕಾರ ಯಾವ ರೀತಿಯ ಬೆಲೆ ಭದ್ರತೆ ನೀಡುತ್ತಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು.

ಡಾ| ಸ್ವಾಮಿನಾಥನ್‌ ವರದಿಯನ್ನು ಯಥಾವತ್‌ ಜಾರಿ ಮಾಡುವ ಮೂಲಕ  ಲೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ರೈತರ 8 ಸಾವಿರ ಕೋಟಿ ಸಾಲ ಮನ್ನಾ ಮಾಡಿರುವುದಾಗಿ ಹೇಳಲಾಗಿತ್ತು. ಆದರೆ, ಅದಕ್ಕಿರುವ ನಿಯಮಗಳನ್ನು ಕೈಬಿಟ್ಟು ಉಳಿದ 2.5 ಸಾವಿರ ಕೋಟಿ ಮೊತ್ತವನ್ನು ಅದಕ್ಕೆ ಸೇರಿಸಿ ಸಾಲ ಮನ್ನಾ ಮಾಡಿದಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಅನುಕೂಲವಾಗಲಿದೆ.

ಕೃಷಿ ಬೆಲೆ ಆಯೋಗಕ್ಕೆ ಸ್ವಾಯತ್ತತೆ ನೀಡಬೇಕು. ಕೃಷಿ ಉತ್ಪನ್ನಗಳ ಬೆಲೆಯನ್ನು ವೇತನ ಆಯೋಗದ ಮಾನದಂಡಕ್ಕೆ ಸರಿದೂಗುವಂತೆ ಬೆಲೆ ಘೋಷಣೆ  ಮಾಡಬೇಕು ಎಂದರು.ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಶಿವಪ್ಪ ಕೋಲಾರ ಮಾತನಾಡಿ, ರೈತ ಬೆಳೆದ ಬೆಳೆಗೆ ಬೆಲೆ ನಿಗದಿಗೆ ಆತನಿಗೇ ಅವಕಾಶ ಕಲ್ಪಿಸಬೇಕು. ರೈತರ ಸಾಲ ಮನ್ನಾ ಮಾಡಿದರೆ ಬ್ಯಾಂಕ್‌ ಗಳು ದಿವಾಳಿ ಆಗಲಿವೆ ಎಂಬುದಾಗಿ ಕೇಂದ್ರ ಸಚಿವರು ಹೇಳುತ್ತಾರೆ.

ಆದರೆ, ಕಂಪೆನಿಗಳ ಸಾಲ ಮನ್ನಾ ಮಾಡಿದರೆ ದಿವಾಳಿ ಆಗುವುದಿಲ್ಲವೇ? ಇದೇ ಪ್ರಶ್ನೆ ಇಟ್ಟುಕೊಂಡು ಸುಪ್ರೀಂ ಕೋರ್ಟ್‌ಗೆ ಹೋಗುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಉಪಾಧ್ಯಕ್ಷ ಬಸವರಾಜ ಮಳ್ಳಿ, ಸಂಘಟನೆಯ ಜಿಲ್ಲಾಧ್ಯಕ್ಷ ಫಾರೂಖ್‌ ಕಿಲ್ಲೇದಾರ ಸೇರಿದಂತೆ ಸಾವಿರಾರು ರೈತರು ಇದ್ದರು. ಇದೇ ಸಂದರ್ಭದಲ್ಲಿ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಜಿಲ್ಲಾ ಧಿಕಾರಿ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. 

ಅರ್ಜಿ ಸಲ್ಲಿಸಲು ಸಾಲು: ರೈತರ ಸಾಲಮನ್ನಾ ಅಭಿಯಾನದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ರೈತರು ತಮ್ಮ ದಾಖಲೆಗಳನ್ನು ಅರ್ಜಿಗೆ ಹಚ್ಚಿ ಸಾಲಮನ್ನಾ ಮಾಡಲು ಸರಕಾರಕ್ಕೆ ಆಗ್ರಹಿಸಿದರು. ಅಲ್ಲದೇ ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅರ್ಜಿ ಸೀÌಕರಿಸಲು ಜಿಲ್ಲಾಡಳಿತದಿಂದ ಕೇಂದ್ರ ಸಹ ತೆರೆಯಲಾಗಿತ್ತು. ಅರ್ಜಿ ಸಲ್ಲಿಸುವ ವೇಳೆ ರೈತ ಸಂಘದಿಂದ ರೈತರಿಂದ ಪ್ರತಿ ಅರ್ಜಿಗೆ 50-60 ರೂ. ಪಡೆದುಕೊಂಡಿದ್ದು, ಇದು ರೈತ ಹೋರಾಟಕ್ಕಾಗಿ ಎಂದು ಹೇಳಿಕೊಂಡಿದೆ.   

ಟಾಪ್ ನ್ಯೂಸ್

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.