ದೇವೇಗೌಡರನ್ನು ಭೇಟಿ ಮಾಡಿದ್ದರಲ್ಲಿ ಯಾವುದೇ ರಾಜಕೀಯವಿಲ್ಲ: ಸಿಎಂ ಬೊಮ್ಮಾಯಿ
Team Udayavani, Aug 7, 2021, 5:23 PM IST
ಹುಬ್ಬಳ್ಳಿ: ಸಚಿವ ಆನಂದ ಸಿಂಗ್ ನನ್ನ ಹಳೆಯ ಸ್ನೇಹಿತ. ಖಾತೆ ಅಸಮಾಧಾನ ಬಗ್ಗೆ ಮಾತನಾಡುವೆ, ಅವರು ಯಾವ ಖಾತೆ ಕೇಳಿದ್ದರು ಎನ್ನುವುದನ್ನು ಬಹಿರಂಗ ಪಡಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ರಚನೆ ಆದಾಗ ಅಸಮಾಧಾನ ಸಹಜ. ಪ್ರೀತಂ ಗೌಡ ಯುವ ಉತ್ಸಾಹಿ ಶಾಸಕ. ಅವರು ಕೂಡ ನನ್ನ ಯುವ ಸ್ನೇಹಿತ. ಅವರು ಯಾವುದೇ ರೀತಿ ತಿಳಿದುಕೊಳ್ಳೋದು ಬೇಡ. ಉತ್ಸಾಹದಲ್ಲಿ ಹೇಳಿಕೆ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡರನ್ನು ಭೇಟಿ ಮಾಡಿದ್ದರಲ್ಲಿ ಯಾವುದೇ ರಾಜಕೀಯವಿಲ್ಲ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದರು.
ಇದನ್ನೂ ಓದಿ:ಹೊಂದಾಣಿಕೆ ಮಾಡಿಕೊಂಡಿದ್ದರೆ ಸರ್ಕಾರನೇ ಉರುಳಿಸಬಹುದಿತ್ತು: ಪ್ರೀತಂ ಗೌಡಗೆ HDK ತಿರುಗೇಟು
ಕಳೆದ 15 ವರ್ಷದಿಂದ ಬಿಜೆಪಿಯಲ್ಲಿದ್ದೇನೆ. ನಾನು ಬಿಜೆಪಿಯ ಅಪ್ಪಟ ಕಾರ್ಯಕರ್ತನು ಹೌದು. ಬಿಜೆಪಿಯ ಸಿಎಂ ಕೂಡಾ ಹೌದು. ಬೊಮ್ಮಾಯಿ ಸರ್ಕಾರ ಜನತ ಪರಿವಾರ ಸರಕಾರದಂತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆ ರೀತಿ ಅಸಂಬದ್ಧ ಹೇಳಿಕೆ ನೀಡಬಾರದು ಎಂದರು.
ಮಾಜಿ ಶಾಸಕ ರಾಜಶೇಖರ ಸಿಂಧೂರ ಸಾವಿನಿಂದ ಬಹಳ ದುಖಃವಾಗಿದೆ. ನಾನು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ವೈಯಕ್ತಿವಾಗಿಯೂ ನನಗೆ ಬಹಳ ನಷ್ಟವಾಗಿದೆ. ಶಿಗ್ಗಾವಿ-ಸವಣೂರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕನಸು ಕಂಡಿದ್ದರು. ಅವರ ಅಂತ್ಯಕ್ರಿಯೆಗೆ ಹೋಗುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.