Hubli; ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ: ಸಚಿವ ಡಿ. ಸುಧಾಕರ
Team Udayavani, Jul 14, 2024, 4:34 PM IST
ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದ ಜನತೆಗೆ ತಿಳಿಸಿದ್ದಾರೆ ಎಂದು ಸಚಿವ ಡಿ. ಸುಧಾಕರ ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬೇರೆ ಏನು ಕೆಲಸವಿಲ್ಲ. ಸಿಎಂ ರಾಜಕೀಯ ಇತಿಹಾಸದಲ್ಲಿ ಕಳಂಕ ರಹಿತವಾಗಿ ಹೊರಗೆ ಬಂದವರು. ಅವರು ಯಾವುದೇ ಒಂದು ಜಾಗದ ವಿಚಾರದಲ್ಲಿ ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಮಾಡುತ್ತಿರುವ ಆರೋಪ ಸರಿಯಲ್ಲ ಎಂದರು.
ಮುಖ್ಯಮಂತ್ರಿಗಳು ಮುಡಾ ಸರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿ ಬಿಜೆಪಿ ಕಾಲದಲ್ಲಿ ಹಗರಣವಾಗಿದೆ ಎಂದರು.
ವಾಲ್ಮೀಕಿ ಹಗರಣದಲ್ಲಿ ಎಸ್‌ಐಟಿ ತನಿಖೆ ವೇಳೆ ಇಡಿ ಪ್ರವೇಶ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಈ ಕುರಿತು ತನಿಖೆ ನಡೆಯುತ್ತಿದೆ. ಇದು ಬ್ಯಾಂಕ್ ಹಾಗೂ ಕಾರ್ಪೋರೇಷನ್ ಗೆ ಸಂಬಂಧಿಸಿದ್ದು. ನಾಗೇಂದ್ರ ಅವರ ಗಮನಕ್ಕೆ ಇದು ಬಂದಿರಲಿಲ್ಲ. ಇಡಿ ಅಥವಾ ಸಿಬಿಐಯಾದರು ವಿಚಾರಣೆ ಮಾಡಲಿ. ರಾಜ್ಯ ಸರ್ಕಾರ ಎಸ್ಐಟಿ ನೇಮಕ ಮಾಡಿದೆ. ಅವರು ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಹೆಚ್ಚಿಗೆ ನಾನು ಏನು ಮಾತನಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.