ಲಸಿಕೆ ಬಗ್ಗೆ ಅನಗತ್ಯ ಭಯ ಬೇಡ
Team Udayavani, Jan 4, 2022, 8:05 PM IST
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯಲ್ಲಿನ ಡಾ|ಆರ್ .ಬಿ.ಪಾಟೀಲ ಮಹೇಶ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ 15-18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಾರ್ಯ ಕೈಗೊಳ್ಳಲಾಯಿತು.
ಪಾಲಿಕೆ ವಲಯ ಕಚೇರಿ ಸಹಾಯಕ ಆಯುಕ್ತ ಎಸ್.ಸಿ.ಬೇವೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಭಯ ಪಡದೆ ಲಸಿಕೆ ಪಡೆಯುವ ಮೂಲಕ ದೇಶವನ್ನು ಕೊರೊನಾ ಮುಕ್ತಗೊಳಿಸುವಲ್ಲಿ ಭಾಗಿಯಾಗಬೇಕು. ಲಸಿಕೆ ಬಗ್ಗೆ ಅನಗತ್ಯ ಭಯ ಬೇಡ ಎಂದರು.
ಹೆಗ್ಗೇರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಎಂ.ವಿಜಯಲಕ್ಷ್ಮೀ ಮಾತನಾಡಿ, ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಯಾವುದೇ ಭಯ ಪಡದೆ ಲಸಿಕೆ ಪಡೆಯಬೇಕೆಂದರು. ಕಾಲೇಜಿನ ಸುಮಾರು 711 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಆಡಳಿತ ಮಂಡಳಿಯ ರಾಜಾ ದೇಸಾಯಿ, ಧಾರವಾಡ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ|ಪ್ರವೀಣ ಗೌರಿ, ಉಪ ಪ್ರಾಂಶುಪಾಲ ರಮೇಶ ಹೊಂಬಾಳೆ ಇನ್ನಿತರರು ಇದ್ದರು. ಪ್ರಾಂಶುಪಾಲ ಎಚ್.ಕೆ.ರಾಮ ಮೋಹನ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.