ಡಿಕೆಶಿ ಪರ ಪ್ರತಿಭಟನೆ ವೇಳೆ ಕಲ್ಲು ತೂರಿದವರು ಕೈ ಕಾರ್ಯಕರ್ತರಲ್ಲ: ಸಿದ್ದರಾಮಯ್ಯ
Team Udayavani, Sep 5, 2019, 11:37 AM IST
ಹುಬ್ಬಳ್ಳಿ: ನೆರೆ ಪರಿಹಾರ ಕಾಮಗಾರಿ ಕೈಗೊಳ್ಳುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಿವಿ, ಕಣ್ಣು ಹಾಗೂ ದಪ್ಪ ಚರ್ಮ ಇರುವ ಸರಕಾರಕ್ಕೆ ಯಾವುದು ಕೇಳಿಸುತ್ತಿಲ್ಲ. ಸಂತ್ರಸ್ತರ ನೋವು ಆಲಿಸಿವಷ್ಟು ಪುರುಸೊತ್ತು ಸರಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ಸಾವಿರ ರೂಪಾಯಿ ಕೊಟ್ಟಿದ್ದೇವೆ ಎನ್ನುವುದೊಂದು ಬಿಟ್ಟರೆ ಮತ್ತೇನು ಕಾರ್ಯವಾಗಿಲ್ಲ. ಈ ಹತ್ತು ಸಾವಿರ ರೂಪಾಯಿ ಪರಿಹಾರ ಸಮರ್ಪಕವಾಗಿ ವಿತರಣೆಯಾಗಿಲ್ಲ. ಮನೆ ಕಳೆದುಕೊಂಡವರಿಗೆ ಕನಿಷ್ಠ ಶೆಡ್ ವ್ಯವಸ್ಥೆ ಕೂಡ ಮಾಡಿಲ್ಲ. ಬಹುತೇಕ ಕಡೆಗಳಲ್ಲಿ ಕಾಳಜಿ ಕೇಂದ್ರಗಳು ಮುಚ್ಚಿದ್ದಾರೆ. ನೆರೆ ನಿರ್ವಹಣೆ ಹಾಗೂ ಪರಿಹಾರ ವಿತರಣೆಯಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.
ನಮ್ಮ ಕಾರ್ಯಕರ್ತರಲ್ಲ: ಮಾಜಿ ಸಚಿವ ಡಿ.ಕೆ.ಶಿವಕುಮಾರ ಬಂಧನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವಂತೆ ಸೂಚಿಸಲಾಗಿದೆ. ಕಲ್ಲು ತೂರಾಟ ಮಾಡಿದವರು ನಮ್ಮ ಕಾರ್ಯಕರ್ತರಲ್ಲ. ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಸೇರಿಕೊಂಡು ಇಂತಹ ಕೆಲಸ ಮಾಡಿರುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.