ರೈತರ ಸಂಕಷ್ಟ ನಿವಾರಣೆಗಾಗಿ ಮೋಡ ಬಿತ್ತನೆ ಮಾಡಿ: ಅರವಿಂದ


Team Udayavani, Jun 25, 2017, 2:25 PM IST

hub3.jpg

ಧಾರವಾಡ: ಸತತ ಬರಗಾಲದಿಂದ ತತ್ತರಿಸಿ ಹೋಗಿರುವ ರೈತರ ಸಂಕಷ್ಟ ಪರಿಹಾರಕ್ಕಾಗಿ ರಾಜ್ಯ ಸರಕಾರ ಮೋಡ ಬಿತ್ತನೆಗೆ ಮುಂದಾಗಬೇಕು ಎಂದು ಹು-ಧಾ ಮಹಾನಗರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅರವಿಂದ ಏಗನಗೌಡರ ಸುದ್ದಿಗೋಷ್ಠಿಯಲ್ಲಿ ಹೇಳಿದರು. 

ರಾಜ್ಯ ಸರ್ಕಾರ ಮೋಡ ಬಿತ್ತನೆಗಾಗಿ ಬಜೆಟ್‌ನಲ್ಲಿ 30 ಕೋಟಿ ಅನುದಾನ ಮೀಸಲಿಟ್ಟಿದೆ. ಮಳೆ ಇಲ್ಲದೆ ರೈತ ಕಂಗಾಲಾಗಿದ್ದರೂ ಮೋಡ ಬಿತ್ತನೆ ಮಾಡಿಲ್ಲ. ಮೋಡ ಬಿತ್ತನೆಗೆ ಇದು ಸರಿಯಾದ ಸಮಯವಾಗಿದ್ದು, ಸರ್ಕಾರ ಕೂಡಲೇ ಬಿತ್ತನೆ ಕಾರ್ಯ ಆರಂಭಿಸಬೇಕು ಎಂದು ಆಗ್ರಹಿಸಿದರು. 

ಈಗಾಗಲೇ ರೈತರು ಬಿತ್ತನೆ ಚಟುವಟಿಕೆ ಪ್ರಾರಂಭಿಸಿದ್ದು, ಮಳೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ತುಂತುರು ಮಳೆ ಬರುವಂತಹ ಸಂದರ್ಭದಲ್ಲಿ ಮೋಡ ಬಿತ್ತನೆ ನಡೆಸಿದರೆ ಶೇ. 15ರಿಂದ 20ರಷ್ಟು ಹೆಚ್ಚಿನ ಮಳೆ ಬೀಳಲಿದೆ. ಮೋಡ ಬಿತ್ತನೆಗೆ ವಿವಿಧ ದೇಶಗಳ ಮೊರೆ ಹೋಗುವ ಸ್ಥಿತಿ ಮತ್ತು ವಿಶೇಷ ವಿಮಾನ ಉಪಯೋಗಿಸಿ ದುಬಾರಿ ವೆಚ್ಚ ಭರಿಸಬೇಕಾಗಿತ್ತು. 

ಆದರೆ, ಉಡುಪಿಯ ಸ್ಕೈ ವೀವ್‌ ಸಿಸ್ಟಂನ ರತ್ನಾಕರ ನಾಯಕ ಎಂಬುವರು ಅಭಿವೃದ್ಧಿಪಡಿಸಿರುವ ಡ್ರೋಣ್‌ ಮೂಲಕ ಮೋಡ ಬಿತ್ತನೆ ಕಾರ್ಯಕ್ಕೆ ಪ್ರಾತ್ಯಕ್ಷಿತೆ ನಡೆಸಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಡ್ರೋಣ್‌ ಬಳಕೆ ಮೂಲಕ ಮೋಡ ಬಿತ್ತನೆ ಕಾರ್ಯ ನಡೆಸಿದರೆ ಸರ್ಕಾರಕ್ಕೆ ಹಣ ಉಳಿತಾಯವಾಗಲಿದೆ ಎಂದರು. 

ರಾಜ್ಯ ಸರ್ಕಾರ 2017ರ ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫ‌ಸಲ ಭೀಮಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜು.  31 ಕೊನೆ ದಿನ ಎಂಬುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ, ಈ ಕುರಿತು ಅನೇಕ ಜನರಿಗೆ ಮಾಹಿತಿ ಇಲ್ಲ.

ರೈತರಿಗೆ ಕಾರ್ಯಾಗಾರ ನಡೆಸುವ ಮೂಲಕ  ವಿಮೆಯ ಮಾಹಿತಿ ನೀಡಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಗುರುಸಿದ್ಧನಗೌಡ ಪಾಟೀಲ, ಬಸವಣ್ಣೆಪ್ಪ ಬಾಳಗಿ, ಶಿವಾನಂದ ಹುಬ್ಬಳ್ಳಿ, ನಿಂಗನಗೌಡ ಪಾಟೀಲ, ಶಿವಯೋಗಿ ತಿಕ್ಕುಂಡಿ ಇದ್ದರು. 

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.