ಸಂಚಾರವೇ ದುಸ್ತರ
•ಕೊಚ್ಚಿ ಹೋದ ಬ್ರಿಡ್ಜ್-ಚೆಕ್ ಡ್ಯಾಂ•ಹೊಲ, ಪರ ಊರಿಗೆ ಹೋಗಲು ತಾಪತ್ರಯ
Team Udayavani, Aug 18, 2019, 9:44 AM IST
ಹುಬ್ಬಳ್ಳಿ-ನರಗುಂದ ರಸ್ತೆ ಅಳಗವಾಡಿ ಬ್ರಿಡ್ಜ್ ಕುಸಿದಿದ್ದರಿಂದ ಹಳ್ಳ ದಾಟಲು ಜನರ ಹರಸಾಹಸ
ಹುಬ್ಬಳ್ಳಿ: ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸತತ ಮಳೆಯಿಂದಾಗಿ ಬೆಳೆ ನಾಶವಾಗಿ, ಮನೆಗಳಿಗೆ ನೀರು ನುಗ್ಗಿ ಹಾನಿಯಾಯಿತು. ನೆರೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ಸಾಕಷ್ಟು ಕಡೆ ರಸ್ತೆ, ಬ್ರಿಡ್ಜ್ಗಳು ಕೊಚ್ಚಿ ಹೋಗಿದ್ದು, ಜನರಿಗೆ ಸಂಚಾರವೇ ದುಸ್ತರವಾಗಿದೆ.
ನಿರಂತರ ಮಳೆಯಿಂದಾಗಿ ಬೆಣ್ಣೆ ಹಳ್ಳ ಹಾಗೂ ತುಪರಿ ಹಳ್ಳಗಳು ಸಾಕಷ್ಟು ಆಸ್ತಿ ಪಾಸ್ತಿ ಹಾನಿ ಉಂಟು ಮಾಡಿವೆ. ಹಳ್ಳದ ದಡದಲ್ಲಿನ ದಡದಲ್ಲಿರುವ ಗ್ರಾಮಗಳು ಹೆಚ್ಚು ತೊಂದರೆ ಅನುಭವಿಸುವಂತಾಗಿದೆ. ಬ್ರಿಡ್ಜ್ಗಳು, ಚೆಕ್‌ಡ್ಯಾಂಗಳು ಮಳೆಗೆ ಕೊಚ್ಚಿ ಹೋಗಿದ್ದರಿಂದ ಜನರಿಗೆ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಮಾಡುವುದು ಅವಶ್ಯಕವಾಗಿದೆ.
ಕೆಲವೆಡೆ ಹಳ್ಳದ ನಾಲಾಗಳಲ್ಲಿ ನೀರು ಹರಿಯುತ್ತಿದ್ದರೆ, ಇನ್ನು ಕೆಲವೆಡೆ ನೀರು ಪ್ರವಾಹ ಕಡಿಮೆಯಾಗಿದೆ. ಇಂಥ ಕಡೆಗಳಲ್ಲಿ ಗ್ರಾಮಗಳ ಜನರೇ ಕಲ್ಲುಗಳನ್ನು ಜೋಡಿಸಿ ಕಾಲುದಾರಿ ಮಾಡಿಕೊಂಡಿದ್ದಾರೆ. ಇನ್ನು ಕೆಲವೆಡೆ ದ್ವಿಚಕ್ರವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ಇದು ಸುರಕ್ಷಿತವಾಗಿಲ್ಲ. ಕಲ್ಲು ಜಾರಿದರೆ, ಇಲ್ಲವೇ ಮಣ್ಣು ಕುಸಿದರೆ ಅನಾಹುತಗಳಾಗುವ ಸಾಧ್ಯತೆ ಇರುವುದರಿಂದ ತ್ವರಿತಗತಿಯಲ್ಲಿ ಪರ್ಯಾಯ ರಸ್ತೆಗಳನ್ನು ನಿರ್ಮಿಸಿಕೊಡುವುದು ಮುಖ್ಯವಾಗಿದೆ.
ಧಾರಾಕಾರ ಮಳೆ ಸುರಿದ ನಂತರ ಸಂಪರ್ಕ ರಸ್ತೆಗಳಿಲ್ಲದಿದ್ದರಿಂದ ರೈತರಿಗೆ ಹೊಲ, ಗದ್ದೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ತಾಲೂಕಿನಲ್ಲಿ ಹಲವೆಡೆ ರಸ್ತೆಗಳ ಮಧ್ಯೆ ಬಿರುಕು ಕಾಣಿಸಿಕೊಂಡಿದ್ದು, ಇಲ್ಲಿ ಸಂಚಾರ ದುಸ್ತರವಾಗಿದೆ. ಚೆಕ್ ಡ್ಯಾಂ ಬಳಿ ಇಂಥ ರಸ್ತೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಚತುಶ್ಚಕ್ರ, ಷಟ್ಚಕ್ರ ವಾಹನಗಳು ಹೆಚ್ಚಾಗಿ ಈ ರಸ್ತೆಗಳಲ್ಲಿ ಸಂಚರಿಸುವುದರಿಂದ ರಸ್ತೆಗಳು ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ.
ಹಲವು ಗ್ರಾಮಗಳಿಗೆ ಬಸ್‌ಗಳ ಸಂಚಾರ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಮೊರಬದಿಂದ ನವಲಗುಂದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ತಿರ್ಲಾಪುರದವರೆಗೆ ಹಾಳಾಗಿದೆ. ಹುಬ್ಬಳ್ಳಿ, ಧಾರವಾಡ, ನವಲಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಹಾಳಾಗಿದ್ದರಿಂದ ಅಗತ್ಯ ಸಾಮಗ್ರಿಗಳನ್ನು ತರಲು ಜನರು ಕಷ್ಟಪಡಬೇಕಿದೆ. ಕೃಷಿ ಸಲಕರಣೆಗಳು, ರಸಗೊಬ್ಬರ ತರುವುದು ಹಲವರಿಗೆ ದುಸ್ತರವಾಗಿದೆ. ಇದರಿಂದ ಕೃಷಿ ಕಾರ್ಯಗಳು ಸ್ಥಗಿತಗೊಳ್ಳುವಂತಾಗಿದೆ.
ಹಳ್ಳಗಳು ಹರಿದ ಮಾರ್ಗದಲ್ಲಿ ಹಲವೆಡೆ ಬ್ರಿಡ್ಜ್ಗಳು ಕುಸಿದಿದ್ದರಿಂದ ಸಂಚಾರಕ್ಕೆ ವ್ಯತ್ಯಯವಾಗಿದೆ. ಜನರಿಗೆ ಹೊಲ, ಮನೆಗೆ ಹೋಗಲು ಅಗತ್ಯ ರಸ್ತೆಗಳನ್ನು ನಿರ್ಮಿಸಬೇಕಿದೆ. ಬ್ರಿಡ್ಜ್ಗಳ ಪಕ್ಕದಲ್ಲಿ ತಾತ್ಕಾಲಿಕವಾಗಿ ರಸ್ತೆಗಳನ್ನು ನಿರ್ಮಿಸಿಕೊಟ್ಟರೆ ಅನುಕೂಲವಾಗುತ್ತದೆ. ಜನರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದ್ದು, ಈಗ ಜನರು ಪುನರ್ವಸತಿ ಕೇಂದ್ರಗಳಿಂದ ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ. ಬಸ್‌ಗಳು ಸಂಚರಿಸುವಂತಾದರೆ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತದೆ.•ಬಸಣ್ಣ ಬೆಳವಣಕಿ, ಅಳಗವಾಡಿ ಗ್ರಾಮದ ಮುಖಂಡ
•ವಿಶ್ವನಾಥ ಕೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.